AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಅಭಿವೃದ್ಧಿಗೆ ಬೂಸ್ಟ್: ಸೋಮವಾರ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಿಡಿಎ ಸಭೆ; ಮಹತ್ವದ ಘೋಷಣೆ ನಿರೀಕ್ಷೆ

ಸಿಎಂ ಡಿಕೆ ಶಿವಕುಮಾರ್ ಸೋಮವಾರ ಬಿಡಿಎ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆ, ವ್ಯವಸ್ಥಿತ ನಗರೀಕರಣ, ವಸತಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಬೆಂಗಳೂರು ಅಭಿವೃದ್ಧಿಗೆ ಬೂಸ್ಟ್: ಸೋಮವಾರ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಿಡಿಎ ಸಭೆ; ಮಹತ್ವದ ಘೋಷಣೆ ನಿರೀಕ್ಷೆ
ಡಿಕೆ ಶಿವಕುಮಾರ್​
ಈರಣ್ಣಾ ಬಸವಾ
| Edited By: |

Updated on: Nov 08, 2026 | 9:46 PM

Share

ಮುಖ್ಯಾಂಶಗಳು

  • ರಾಜ್ಯದ ರಾಜಧಾನಿ ಬೆಂಗಳೂರಿಗೆ ಬಿಗ್ ಬೂಸ್ಟ್
  • ನಾಳೆ ಬಿಡಿಎ ಮಹತ್ವದ ಯೋಜನೆ ಪ್ರಗತಿ ಪರಿಶೀಲನಾ ಸಭೆ
  • ಪ್ರಗತಿ ಪರಿಶೀಲನೆ ನಂತರ ಮಹತ್ವದ ಘೋಷಣೆ ನಿರೀಕ್ಷೆ

ಬೆಂಗಳೂರು, ನವೆಂಬರ್​ 08: ರಾಜ್ಯದ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಭೆ ನಡೆಸಲಿದ್ದಾರೆ. ಸೋಮವಾರ ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಿಡಿಎ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಸಭೆಯ ಬಳಿಕ ಬೆಂಗಳೂರಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಯಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆ ಬಗ್ಗೆ ಚರ್ಚೆ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆ, ವ್ಯವಸ್ಥಿತ ನಗರೀಕರಣ ಹಾಗೂ ನಾಗರಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ. ದಶಕಗಳಿಂದ ಬಾಕಿ ಉಳಿದಿರುವ ನಾಗರಿಕರ ನಿವೇಶನ ಮತ್ತು ವಸತಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿಯೂ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಬಿಡಿಎ ಮಹತ್ವಾಕಾಂಕ್ಷೆಯ ಯೋಜನೆಗಳ ಪ್ರಗತಿ ಪರಿಶೀಲನೆ

ಬಿಡಿಎ ವತಿಯಿಂದ ಕೈಗೆತ್ತಿಕೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆಗಳ ಸಮಗ್ರ ಪ್ರಗತಿಯನ್ನು ಸಿಎಂ ಪರಿಶೀಲಿಸಲಿದ್ದಾರೆ. ಯೋಜನೆಗಳ ಪ್ರಸ್ತುತ ಸ್ಥಿತಿ, ಅನುಷ್ಠಾನದ ವೇಗ, ಭೂಸ್ವಾಧೀನ ಪ್ರಕ್ರಿಯೆಯ ಪ್ರಗತಿ, ಆರ್ಥಿಕ ಹಾಗೂ ಆಡಳಿತಾತ್ಮಕ ಅಂಶಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಅಷ್ಟೇ ಅಲ್ಲದೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕುರಿತು ಚರ್ಚೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುವ ನಿರೀಕ್ಷೆಯಿದೆ.

ಹೊಸ ಯೋಜನೆಗಳ ಘೋಷಣೆ ಸಾಧ್ಯತೆ

ಬೆಂಗಳೂರಿನ ಜನಸಾಮಾನ್ಯರಿಗೆ ಅನುಕೂಲವಾಗುವ ಹಾಗೂ ನಗರದ ಮೂಲಸೌಕರ್ಯದ ಚಿತ್ರಣವನ್ನೇ ಬದಲಿಸಬಲ್ಲ ಪ್ರಮುಖ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ವತಿಯಿಂದ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಖಡಕ್ ಕೌಂಟರ್

ಇನ್ನು ಬಿಡಿಎ ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಸುದೀರ್ಘ ಚರ್ಚೆ ನಡೆಸಲಿದ್ದು, ಸಭೆಯ ಬಳಿಕ ಸುದ್ದಿಗೋಷ್ಠಿ ಮಾಡಲಿದ್ದಾರೆ. ಈ ವೇಳೆ ಬೆಂಗಳೂರಿನ ಅಭಿವೃದ್ಧಿ ಯೋಜನೆಗಳು, ಬಾಕಿ ಕಾಮಗಾರಿಗಳ ಪ್ರಗತಿ ಹಾಗೂ ಹೊಸ ಯೋಜನೆಗಳ ಕುರಿತು ಮಹತ್ವದ ಮಾಹಿತಿ ಪ್ರಕಟಿಸುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಈರಣ್ಣಾ ಬಸವಾ
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು