ಬೆಂಗಳೂರು: ಕೇಂದ್ರ ಸರ್ಕಾರ ದೇಶದಲ್ಲಿ ಪಿಎಫ್‌ಐ (PFI) ಸಂಘಟನೆಯನ್ನು 5 ವರ್ಷಗಳವರೆಗೆ ನಿಷೇಧಿಸಿದ್ದ ಕ್ರಮಕ್ಕೆ ಬೆಂಗಳೂರಿನಲ್ಲಿ (Bengaluru) ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (CM Ibrahim) ಗರಂ ಆಗಿದ್ದಾರೆ. ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿರುವುದನ್ನು ನಾನು ಒಪ್ಪುವುದಿಲ್ಲ. ಇಂದಿರಾ ಗಾಂಧಿ ಆರ್ಎಸ್ಎಸ್ ನಿಷೇಧಿಸಿ ತಪ್ಪು ಮಾಡಿದರು. ಅದೇ ತಪ್ಪನ್ನು ಬಿಜೆಪಿ ಈಗ ಮಾಡುತ್ತಿದೆ. ದೇಶ ಸರ್ವನಾಶ ಆಗಬೇಕು ಎಂಬುದು ಬಿಜೆಪಿ ಗುರಿಯಾಗಿದೆ ಎಂದು ಕಿಡಿ ಕಾರಿದರು.
ಕಾಂಗ್ರೆಸ್ ಸರ್ಕಾರ ಯಾಕೆ ಆರ್ಎಸ್ಎಸ್ ಬ್ಯಾನ್ ಮಾಡಲಿಲ್ಲ ? ಆರ್ಎಸ್ಎಸ್ ಕೆಟ್ಟದ್ದು ಅಂತಾ ಸೋನಿಯಾ ಗಾಂಧಿ, ಪಿ.ಚಿದಂಬರಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಗೊತ್ತಿರಲಿಲ್ವಾ? ಯಾವ ಸಂಘಟನೆಯನ್ನು ನಿಷೇಧಿಸಿ ಅಂತ ನಾವು ಹೇಳಲ್ಲ. ಆದರೆ ಕೋರ್ಟ್ನಲ್ಲಿ ಎಲ್ಲರಿಗೂ ಮುಕ್ತವಾದ ಅವಕಾಶ ಕೊಡಿ. ಸಮರ್ಥನೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಹೇಳಿದರು.
PFI Banned: ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳ ನಿಷೇಧಕ್ಕೆ 15 ಕಾರಣಗಳು
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಐದು ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕಳೆದ ನಾಲ್ಕೈದು ದಿನಗಳಲ್ಲಿ ಎರಡು ಸುತ್ತಿನಲ್ಲಿ ದೇಶ ವ್ಯಾಪಿ ಪಿಎಫ್‌ಐ ಮುಖಂಡರ ಮೇಲೆ ದಾಳಿ ಮಾಡಿ ಹಲವರನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಅಂತಿಮವಾಗಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಲಾಗಿದೆ ಎಂದು ಅಧಿಸೂಚನೆ ಹೊರಡಿಸಲಾಗಿದೆ.
ಇದನ್ನೂ ಓದಿ: 5 ವರ್ಷಗಳ ಅವಧಿಗೆ PFI ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ
ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI), ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (JMB) ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನೊಂದಿಗೆ ಸಂಘಟನೆಯು ಸಂಪರ್ಕ ಇಟ್ಟುಕೊಂಡಿದೆ ಎಂದು ಸರ್ಕಾರ ಉಲ್ಲೇಖಿಸಿದ್ದು, ಹಲವಾರು ಕ್ರಿಮಿನಲ್ ಮತ್ತು ಭಯೋತ್ಪಾದನೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದು ಹೇಳಿದೆ.
ಇನ್ನು ಪಿಎಫ್‌ಐ ನಿಷೇಧಕ್ಕೆ ಯುಪಿ, ಕರ್ನಾಟಕ ಮತ್ತು ಗುಜರಾತ್ ಸರ್ಕಾರಗಳು ಒತ್ತಾಯಿಸಿದ್ದವು. ಕ್ರಮ ಕೈಗೊಳ್ಳದಿದ್ದರೆ ಆಗುವ ಅನಾಹುತಗಳ ಬಗ್ಗೆ ಈ ರಾಜ್ಯಗಳು ಕೇಂದ್ರಕ್ಕೆ ತಿಳಿಸಿದ್ದವು.
ಪಿಎಫ್‌ಐ ನಿಷೇಧಕ್ಕೆ ಪ್ರಮುಖ ಕಾರಣಗಳು
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:26 pm, Wed, 28 September 22