ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ, ಹೆಚ್​ ಡಿ ಕುಮಾರಸ್ವಾಮಿ

ಸಿಎಂ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ, ಹೆಚ್​ ಡಿ ಕುಮಾರಸ್ವಾಮಿ
ಸಿಎಂ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 22, 2022 | 3:09 PM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ (Gurulingaswamy holimath) ಅವರು ಬೆಂಗಳೂರಿನಲ್ಲಿ ಇಂದು (ಆ 22) ಬೆಳಿಗ್ಗೆ ನಿಧನರಾಗಿದ್ದು, ಇವರ ಅಗಲಿಕೆಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ” ಆತ್ಮೀಯ ಕಿರಿಯ ಮಿತ್ರ, ಕಳೆದ ಹಲವಾರು ವರ್ಷಗಳಿಂದ ನನ್ನ ಜೊತೆ ಒಡನಾಟ ಹೊಂದಿ, ನನ್ನ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ ಗುರುಲಿಂಗಸ್ವಾಮಿ ಹೊಳಿಮಠ ಅವರು ಇಂದು ಅಕಾಲಿಕ ನಿಧನರಾದ ವಿಷಯ ತಿಳಿದು ತೀವ್ರ ಆಘಾತ ಹಾಗೂ ದುಃಖಿತನಾಗಿದ್ದೇನೆ ” ಎಂದು ದುಃಖತಪ್ತರಾಗಿದ್ದಾರೆ .

ಒಬ್ಬ ದಕ್ಷ ಹಾಗೂ ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಹಲವು ಸಾಧನೆಗೈದು ಇನ್ನೂ ಹೆಚ್ಚಿನದನ್ನು ಸಾಧಿಸಲು ಹಂಬಲ ಹೊಂದಿದ್ದರು. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ‌” ಎಂದು ಸಂತಾಪ ಸೂಚಿಸಿದ್ದಾರೆ.

ಗುರುಲಿಂಗ ಸ್ವಾಮಿ ರಾಮದುರ್ಗದ ಹಳ್ಳಿಯವರು. ಕಷ್ಟಪಟ್ಟು ಓದಿ ಪಾಸ್ ಆಗಿ ಮಾಧ್ಯಮದಲ್ಲಿ ಕೆಲಸ ಪಡೆದುಕೊಂಡಿದ್ದರು. ಪತ್ರಿಕಾ ದಿನದ ಆರಂಭದಿನದಿಂದ ನನಗೆ ಪರಿಚಯ. ಟಿ.ವಿ ಮಾಧ್ಯಮದಲ್ಲೂ ಕೆಲಸ ಮಾಡಿದ್ದರು. ಅತ್ಯಂತ ಕ್ರಿಯಾಶೀಲ ಪತ್ರಕರ್ತರಾಗಿದ್ದು, ವರದಿಯ ನಿಖರತೆ ಪಡೆದುಕೊಂಡು ಮುಂದುವರೆಯುವ ಜವಾಬ್ದಾರಿಯುತ ಪತ್ರಕರ್ತರಾಗಿದ್ದಾರೆ ಎಂದು ಹೇಳಿದ್ದಾರೆ.

ಅವನೊಬ್ಬನೇ ಬೆಳೆಯಲಿಲ್ಲ, ತನ್ನ ಜೊತೆ ಇತರರನ್ನೂ ಬೆಳೆಸಿದ್ದರು. ಸಹಾಯ ಕೇಳಿ ಬಂದವರಿಗೆ ಇಲ್ಲ ಎನ್ನುತ್ತಿರಲಿಲ್ಲ. ಗೃಹ ಸಚಿವರಾಗಿದ್ದಾಗಿನಿಂದ ನನ್ನ ಜೊತೆ ಇದ್ದರು. ಪ್ರತೀ ದಿನ ಹಲವರಿಗೆ ಸಹಾಯ ಮಾಡುತ್ತಿದ್ದರು. ಸಿಎಂ ಫಂಡ್ ಫೈಲಿಗೆ ಸಹಿ ಹಾಕಿಸಿ ಸಹಾಯ ಮಾಡುತ್ತಿದ್ದರು. ಕ್ರಿಯಾ ಶೀಲರಾಗಿದ್ದರು ಎಂದು ಹೇಳಿದರು.

ನಿನ್ನೆ ಎಂಟು ಗಂಟೆಗೆ ಮನೆಗೆ ಹೋಗುತ್ತೇನೆ ಅಂದಿದ್ದರು. ಬೆಳಗ್ಗೆ ಎದ್ದು ಇಂತಹ ಸುದ್ದಿ ಬರುತ್ತೆ ಅಂತ ಅನಿಸಿರಲಿಲ್ಲ. ಇದು ದುಃಖಕರ ಸಂಗತಿ. ನಾಗರಾಜ್ ಜಮಖಂಡಿ ಜೊತೆ ಜೊತೆಯಲ್ಲೇ ಇವನು ಹೋದ. ಪ್ರತೀ ವರ್ಷ ಜಮಖಂಡಿ ಅವರ ಕಾರ್ಯಕ್ರಮ ಇವನೇ ನಿಂತು ಮಾಡುತ್ತಿದ್ದರು. ಅವನ ಕ್ರಿಯಾಶೀಲ ಇತರರಿಗೂ ಮಾದರಿಯಾಗಲಿ. ಅವನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ ಅವರ ಅಂತ್ಯಕ್ರಿಯೆ ಹುಟ್ಟುರಾದ ಬೆಳಗಾವಿ ಜಿಲ್ಲೆಯ ರಾಮದುಗ೯ ಪಟ್ಟಣದಲ್ಲಿ ನಾಳೆ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಸಂತಾಪ ಸೂಚಿಸಿದ ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು:  ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

“ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಶ್ರೀ ಗುರುಲಿಂಗಸ್ವಾಮಿ ಹೊಳಿಮಠ ಅವರ ಅಕಾಲಿಕ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ. ಅತ್ಯಂತ ಕ್ರಿಯಾಶೀಲರಾಗಿ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರು, ಸರಳತೆ ಸಜ್ಜನಿಕೆಯ ವ್ಯಕ್ತಿತ್ವದವರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಮತ್ತು ಹಿತೈಷಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ” , ಎಂದು ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ

ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಹಿರಿಯ ಪತ್ರಕರ್ತ ಶ್ರೀ ಗುರಲಿಂಗಸ್ವಾಮಿಯವರ ನಿಧನ ಆಘಾತ ಹಾಗೂ ನೋವು ತಂದಿದೆ. ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು, ಪತ್ರಿಕಾ ರಂಗದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ. ಕುಟುಂಬದವರಿಗೆ ಈ ನೋವು ಸಹಿಸುವ ಶಕ್ತಿ ಸಿಗಲಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.

Koo App

ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಹಿರಿಯ ಪತ್ರಕರ್ತ ಶ್ರೀ ಗುರಲಿಂಗಸ್ವಾಮಿಯವರ ನಿಧನ ಆಘಾತ ಹಾಗೂ ನೋವು ತಂದಿದೆ. ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು, ಪತ್ರಿಕಾ ರಂಗದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ. ಕುಟುಂಬದವರಿಗೆ ಈ ನೋವು ಸಹಿಸುವ ಶಕ್ತಿ ಸಿಗಲಿ.

Araga Jnanendra (@aragajnanendra) 22 Aug 2022

ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಡಿ ಕೆ ಶಿವಕುಮಾರ ಸಂತಾಪ

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ ಗುರುಲಿಂಗ ಸ್ವಾಮಿ ಹೊಳಿಮಠ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಇಷ್ಟು ಸಣ್ಣ ವಯಸ್ಸಿಗೇ ಅವರು ಸಾವಿಗೀಡಾಗಿರುವುದು ದುರಾದೃಷ್ಟಕರ ಸಂಗತಿ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಸಂತಾಪ ಸೂಚಿಸಿದ್ದಾರೆ.

Koo App

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ ಗುರುಲಿಂಗ ಸ್ವಾಮಿ ಹೊಳಿಮಠ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಇಷ್ಟು ಸಣ್ಣ ವಯಸ್ಸಿಗೇ ಅವರು ಸಾವಿಗೀಡಾಗಿರುವುದು ದುರಾದೃಷ್ಟಕರ ಸಂಗತಿ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರ ನೋವಿನಲ್ಲಿ ನಾನೂ ಕೂಡ ಭಾಗಿ.

D K Shivakumar (@dkshivakumar_official) 22 Aug 2022

ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಸಚಿವ ಮುರಗೇಶ್​​ ನಿರಾಣಿ ಸಂತಾಪ

ಸನ್ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಧಿಕಾರಿ ಶ್ರೀ ಗುರುಲಿಂಗಸ್ವಾಮಿ ಹೋಳಿಮಠ ಅವರ ಹಠತ್ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ  ಸಂತಾಪ ಸೂಚಿಸಿದ್ದಾರೆ.

ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಸಚಿವ ಎಸ್​​ ಟಿ ಸೋಮಶೇಖರ ಸಂತಾಪ

ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಾಧಿಕಾರಿ ಗುರುಲಿಂಗಸ್ವಾಮಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಮನಸಿಗೆ ತುಂಬಾ ನೋವುಂಟಾಗಿದೆ. ಅವರ ಕುಟುಂಬ ವರ್ಗ, ಆಪ್ತರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಚಿವ ಎಸ್​​ ಟಿ ಸೋಮಶೇಖರ ಸಂತಾಪ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Mon, 22 August 22