ಕೆಪಿಎಸ್​​ಸಿ ಸದಸ್ಯರ ಹುದ್ದೆಗೆ ಮೂವರು ಹೆಸರು ಶಿಫಾರಸು ಮಾಡಿದ ಸಿಎಂ

| Updated By: ವಿವೇಕ ಬಿರಾದಾರ

Updated on: Aug 19, 2023 | 12:20 PM

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯಲ್ಲಿ ಸಂಪೂರ್ಣವಾಗಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್​ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಿದ ಬೆನ್ನಲ್ಲೇ ಕೆಪಿಎಸ್‌ಸಿ ​ಸದಸ್ಯರ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂವರು ಹೆಸರು ಶಿಫಾರಸು ಮಾಡಿದ್ದಾರೆ.

ಕೆಪಿಎಸ್​​ಸಿ ಸದಸ್ಯರ ಹುದ್ದೆಗೆ ಮೂವರು ಹೆಸರು ಶಿಫಾರಸು ಮಾಡಿದ ಸಿಎಂ
ಕೆಪಿಎಸ್​ಸಿ ಕಚೇರಿ
Follow us on

ಬೆಂಗಳೂರು (ಆ.2) : ಕರ್ನಾಟಕ ಲೋಕಸೇವಾ ಆಯೋಗ (KPSC) ಸದಸ್ಯರ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮೂವರು ಹೆಸರು ಶಿಫಾರಸು ಮಾಡಿದ್ದಾರೆ. ಬೀದರ್​​ನ ಬಸವರಾಜ್​​​ ಮಲ್ಗೆ, ಬೆಂಗಳೂರಿನ ಡಾ.ಆರ್​.ಕಾವಾಲಮ್ಮ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್​​ ಡಾ. ಹೆಚ್​.ಎಸ್​.ಭೋಜ್ಯನಾಯ್ಕ್ ಅವರ ಹೆಸರನ್ನು ಮುಖ್ಯಮಂತ್ರಿಗಳು ಶಿಫಾರಸು ಮಾಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದ್ದ ಹೈಕೋರ್ಟ್​

ಕಳೆದ ಎರಡು ವಾರಗಳ ಹಿಂದೆ (ಆ.2) ರಂದು ಕೆಪಿಎಸ್‌ಸಿ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯಲ್ಲಿ ಸಂಪೂರ್ಣವಾಗಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸ್ಪಷ್ಟ ಸೂಚನೆ ನೀಡಿತ್ತು. ಕೆಪಿಎಸ್‌ಸಿ ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಮತ್ತು ಶಶಿಪ್ರಸಾದ್‌ ಗಾಂಧಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ ಪೂರ್ಣಗೊಳಿಸಿ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ತೀರ್ಪು ನೀಡಿತ್ತು.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಗೂ ಮುನ್ನ ಬಾಕಿ ಯೋಜನೆಗಳಿಗೆ ಅನುಮತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಮನವಿ

ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ಹುದ್ದೆಗಳು ಉನ್ನತಮಟ್ಟದ ಮತ್ತು ಅತಿಸೂಕ್ಷ್ಮ ಸಾಂವಿಧಾನಿಕ ಹುದ್ದೆಗಳಾಗಿವೆ. ಅವುಗಳಿಗೆ ನೇಮಕ ಮಾಡುವ ವೇಳೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಯಾವುದೇ ಆಕ್ಷೇಪಣೆ, ಆರೋಪ ಮತ್ತು ನಿರಂಕುಶತ್ವ ಮತ್ತು ಸ್ವೇಚ್ಛೆಯಿಂದ ಅಧಿಕಾರ ಬಳಕೆ ಮಾಡುವುದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಸೂಚನೆ ನೀಡಿತ್ತು. ಈ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಎಸ್​​ಸಿಗೆ ಮೂವರು ಹೆಸರನ್ನು ಶಿಫಾರಸು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ