ಫೆ.8ರಂದು‌ ಸಿಎಂ 2ನೇ ಹಂತದ ಜನಸ್ಪಂದನಾ ಕಾರ್ಯಕ್ರಮ: ಮೆಜೆಸ್ಟಿಕ್​ನಿಂದ ವಿಧಾನಸೌಧಕ್ಕೆ ಬಸ್ ಸೌಲಭ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.08 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ (Janaspandana) ಕಾರ್ಯಕ್ರಮವನ್ನು ನಡೆಸಲಿದ್ದು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದರು.

ಫೆ.8ರಂದು‌ ಸಿಎಂ 2ನೇ ಹಂತದ ಜನಸ್ಪಂದನಾ ಕಾರ್ಯಕ್ರಮ: ಮೆಜೆಸ್ಟಿಕ್​ನಿಂದ ವಿಧಾನಸೌಧಕ್ಕೆ ಬಸ್ ಸೌಲಭ್ಯ
ಸಿಎಂ ಸಿದ್ದರಾಮಯ್ಯ ಜನಸ್ಪಂದನ
Edited By: ಕಿರಣ್ ಹನುಮಂತ್​ ಮಾದಾರ್

Updated on: Jan 24, 2024 | 9:27 PM

ಬೆಂಗಳೂರು, ಜ.24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.08 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ(Janaspandana) ಕಾರ್ಯಕ್ರಮವನ್ನು ನಡೆಸಲಿದ್ದು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ‘ವ್ಯವಸ್ಥಿತ, ಶಿಸ್ತುಬದ್ದ, ಪರಿಣಾಮಕಾರಿ ಜನಸ್ಪಂದನೆಗೆ ಸಕಲ ತಯಾರಿಯ ಜೊತೆಗೆ ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಿಎಂ ಸೂಚಿಸಿದ್ದಾರೆ.

ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ

ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದು, ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪನೆ ಮಾಡಲಾಗುವುದು. ಜೊತೆಗೆ ಅಗತ್ಯವಿರುವ ಎಲ್ಲ ಉಪಕರಣಗಳನ್ನೂ ಒದಗಿಸಲು ಹಾಗೂ ಸಿಬ್ಬಂದಿಯನ್ನೂ ನಿಯೋಜಿಸಲು ಇ-ಆಡಳಿತ ಇಲಾಖೆಗೆ ಸೂಚನೆ ನಿಡಿದರು. ಮನವಿದಾರರ ದೂರುಗಳನ್ನು ಪರಿಶೀಲಿಸಿ, ನಿಗದಿತ ಕೌಂಟರುಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಅಧಿಕಾರಿ, ಸಿಬ್ಬಂದಿಗಳ ಫೆಸಿಲಿಟೇಷನ್‌ ತಂಡವನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ:ಜನಸ್ಪಂದನಾ ಕಾರ್ಯಕ್ರಮದಲ್ಲಿ ದೂರು ಸಲ್ಲಿಸಿದ ಮಹಿಳೆ ಜಮೀರ್ ನಿಂದ ತೊಂದರೆ ಅಂದಾಗ ಶಿವಕುಮಾರ್ ಹುಬ್ಬೇರಿಸಿದರು!

ಇನ್ನು ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಈ ವೇಳೆ ಹಾಜರಿರಲಿದ್ದಾರೆ. ವಿಶೇಷ ಆಸಕ್ತಿವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕು. ವಿಶೇಷ ಚೇತನರು ಹಾಗೂ ಹಿರಿಯನಾಗರಿಕರಿಗೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ನೀರು, ಲಘು ಉಪಾಹಾರ, ಊಟದ ವ್ಯವಸ್ಥೆ ಮಾಡುವ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವ ಬಗ್ಗೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು ‘ಕೆಡಿಪಿ ಸಭೆಯಲ್ಲಿಯೂ ಜನಸ್ಪಂದನ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
Loading...
Unable to load recommendations.
Follow Us