ಸಿಎಂ ಭೇಟಿಯಾದ ಅತಿಥಿ ಉಪನ್ಯಾಸಕರ ನಿಯೋಗ; ಗೌರವಧನ ಹೆಚ್ಚಳಕ್ಕೆ ಸಿದ್ದರಾಮಯ್ಯ ಸಮ್ಮತಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 06, 2024 | 4:16 PM

ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರ(Guest Lectures) ನಿಯೋಗವು ಇಂದು(ಜ.06) ಸಚಿವ ಎಂ.‌ಸಿ.ಸುಧಾಕರ್ ಹಾಗೂ ಮಾಜಿ ಎಂಎಲ್​ಸಿ ಪುಟ್ಟಣ್ಣ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ರವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ ನೀಡಿದ್ದಾರೆ.

ಸಿಎಂ ಭೇಟಿಯಾದ ಅತಿಥಿ ಉಪನ್ಯಾಸಕರ ನಿಯೋಗ; ಗೌರವಧನ ಹೆಚ್ಚಳಕ್ಕೆ ಸಿದ್ದರಾಮಯ್ಯ ಸಮ್ಮತಿ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು, ಜ.06: ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರ(Guest Lectures) ನಿಯೋಗವು ಇಂದು(ಜ.06) ಸಚಿವ ಎಂ.‌ಸಿ.ಸುಧಾಕರ್ ಹಾಗೂ ಮಾಜಿ ಎಂಎಲ್​ಸಿ ಪುಟ್ಟಣ್ಣ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ರವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಮುಷ್ಕರ ಹಿಂಪಡೆಯಲು ಅತಿಥಿ ಉಪನ್ಯಾಸಕರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದು, ಜೊತೆಗೆ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ ನೀಡಿದ್ದಾರೆ.

5 ಸಾವಿರ ರೂ.ನಿಂದ 8,000 ರೂ. ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

2023 ಡಿಸೆಂಬರ್ 29 ರಂದು ಅತಿಥಿ ಉಪನ್ಯಾಸಕರ  ವೇತನವನ್ನು  5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ  ನಿರ್ಧರಿಸಿತ್ತು. ಆ ಬಗ್ಗೆ ವಿಕಾಸಸೌಧದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ‘ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದರು. ಅಷ್ಟಕ್ಕೆ ಸುಮ್ಮನಾಗದ ಉಪನ್ಯಾಸಕರು, ಪುನಃ ಹೋರಾಟ ಆರಂಭಿಸಿದ್ದರು, ಇದೀಗ ಸಿಎಂ, 5 ಸಾವಿರದಿಂದ 8 ಸಾವಿರಕ್ಕೆ ಗೌರವಧನ ಹೆಚ್ಚಿಸಿದ್ದಾರೆ.

ಇದನ್ನೂ ಓದಿ:ತರಗತಿ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೋಳಾಟ

ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ 1 ದಿನ ವೇತನ ಸಹಿತ ರಜೆ, ಆರೋಗ್ಯ ವಿಮೆ ಘೋಷಿಸಿದ್ದ ಸರ್ಕಾರ

ಇನ್ನು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಖಾಯಂ ಅವರ ಪ್ರಮುಖ ಬೇಡಿಕೆ ಆಗಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸುಧಾಕರ್​ ಹೇಳಿದ್ದರು. ಇದೇ ವೇಳೆ ವರ್ಕ್‌ಲೋಡ್ ಬಗ್ಗೆಯೂ ಸೂಚನೆ ನೀಡಿದ್ದರು. ಜೊತೆಗೆ ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ಕೂಡ ನೀಡಲಾಗುವುದು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ