ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖಾ ತಂಡಕ್ಕೆ ಸಿಎಂ ಮೆಚ್ಚುಗೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 06, 2024 | 7:13 PM

ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದಿದ್ದ ಐಪಿಎಸ್​ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖಾ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಕೆಲವೊಂದು ವಿಷಯಗಳ ಕುರಿತು ಪೊಲೀಸರಿಗೆ ಸೂಚನೆ ನೀಡಿದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖಾ ತಂಡಕ್ಕೆ ಸಿಎಂ ಮೆಚ್ಚುಗೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
Follow us on

ಬೆಂಗಳೂರು, ಜು.06: ರಾಮೇಶ್ವರಂ ಕೆಫೆ(Rameshwaram Cafe) ಬಾಂಬ್ ಸ್ಫೋಟ ಪ್ರಕರಣದ ತನಿಖಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದಿದ್ದ ಐಪಿಎಸ್​ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ, ‘ಕೆಳ ಹಂತದ ಅಧಿಕಾರಿ‌ಗಳು ಹಾಗೂ ಸಿಬ್ಬಂದಿಗಳು, ಪ್ರಕರಣದ ಆರಂಭದಲ್ಲಿ ಬುದ್ಧಿವಂತಿಕೆಯಿಂದ ಕೆಲಸ ಮಾಡಿದ್ದಾರೆ. ಆದ್ದರಿಂದಲೇ ಶಂಕಿತರನ್ನು ಪತ್ತೆ ಹಚ್ಚಲು ಸಹಕಾರಿಯಾಯಿತು. ಶಂಕಿತ ಧರಿಸಿದ್ದ ಟೋಪಿ ಆಧರಿಸಿ ಆತನ ಮೂಲ ಪತ್ತೆ ಹಚ್ಚಿದ್ದಕ್ಕೆ ಶ್ಲಾಘಿಸಿದರು.

ಇ-ಬೀಟ್ ವ್ಯವಸ್ಥೆ ಸರಿಪಡಿಸಿವಂತೆ ಸೂಚನೆ

ಇ-ಬೀಟ್ ವ್ಯವಸ್ಥೆ ಸರಿಪಡಿಸಿವಂತೆ ಸಭೆಯಲ್ಲಿ ಸಿಎಂ ಹಾಗೂ ಗೃಹ ಸಚಿವರು ಸೂಚನೆ ನೀಡಿದರು. ‘ರಾಜ್ಯದಲ್ಲಿ ಅನೇಕ ಠಾಣೆಗಳಿಗೆ ಭೇಟಿ ನೀಡಿ, ಪರಿಶೀಲಿಸಿಲಾಗಿದೆ. ಆದರೆ, ಶೇ. 70ರಷ್ಟು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇ-ಬೀಟ್ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ. ಬೀಟ್​ನ ಸಿಬ್ಬಂದಿಯ ಲೋಕೇಷನ್ ಮಾತ್ರ ಸಿಗುತ್ತದೆ. ಆತ ಕರ್ತವ್ಯದ ವೇಳೆ ಕೈಗೊಂಡ ಚಟುವಟಿಕೆಗಳ ಮಾಹಿತಿ ಅಧಿಕಾರಿಗಳ ಇರುವುದಿಲ್ಲ. ಇದನ್ನು ಯಾವ ರೀತಿ ಯಶಸ್ವಿ ಗೊಳಿಸುತ್ತೀರೋ ಗೊತ್ತಿಲ್ಲ. ಇ-ಬೀಟ್ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳದೇ ಹೋದರೆ, ಇಲಾಖೆಯ ಗುಣ್ಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಾಗುವುದಿಲ್ಲ. ಬೀಟ್ ಕರ್ತವ್ಯದ ಬಗ್ಗೆ ಡೈರಿಯಲ್ಲಿ ಬರೆದಿಡುವ ಹಳೇ ವ್ಯವಸ್ಥೆಗೆ ಹಿಂದಿರುಗಬೇಕೇ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಪ್ರಶ್ನಿಸಿದರು.

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯಗೆ ಮುಡಾದವರೇ 62 ಕೋಟಿ ರೂ. ಹಣ ಕೊಡಬೇಕಂತೆ: ಹೆಚ್​ಡಿ ಕುಮಾರಸ್ವಾಮಿ

ಸುಳ್ಳು ಸುದ್ದಿ ಹಬ್ಬಿಸುವವರಿಗೆ ಬಿಸಿ ಮುಟ್ಟಿಸಿ

ಇನ್ನು ಸುಳ್ಳು ಸುದ್ದಿ ಹಬ್ಬಿಸುವವರಿಗೆ ಬಿಸಿ ಮುಟ್ಟಿಸಿ ಎಂದು ಅಧಿಕಾರಿಗಳಿಗೆ ಸಭೆ ಖಡಕ್ ಸೂಚನೆ ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುವುದು ಹಚ್ಚಾಗುತ್ತಿದೆ. ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ವಿರುದ್ಧ ಅವಾಚ್ಯವಾಗಿ, ತಿರುಚಿದ ಹೇಳಿಕೆಗಳನ್ನು ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಸಾಮಾನ್ಯ ಜನರ ವಿರುದ್ಧವು ಆಗುತ್ತಿದೆ. ಅಂತವರನ್ನು ಕೂಡಲೇ ಪತ್ತೆಹಚ್ಚಿ, ಬಿಸಿ ಮುಟ್ಟಿಸುವ ಕೆಲಸವಾಗಬೇಕು. ಜೊತೆಗೆ ಇಂತಹ ತಪ್ಪುಗಳನ್ನು ಮತ್ತೊಬ್ಬರು ಮಾಡಲು ಮುಂದಾಗಬಾರದು. ತ್ವರಿತಗತಿಯಲ್ಲಿ ಕಾನೂನು ಪ್ರಕಾರ ಕ್ರಮ ಜರುಗಿಸುವ ಕೆಲಸ ಆಗಬೇಕು ಎಂದರು.

ಸಂಚಾರ ಸಮಸ್ಯೆಯನ್ನು ನಿಯಂತ್ರಿಸಲು ಸೂಚನೆ

ಟ್ರಾಫಿಕ್ ಕ್ಲಿಯರ್​ಗೆ ಅಧಿಕಾರಿಗಳು ರಸ್ತೆಗಿಳಿದು ಕೆಲಸ ಮಾಡಬೇಕು. ನಗರದಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಹೊಸ ಯೋಜನೆಗಳನ್ನು ರೂಪಿಸಬೇಕು. ಎಸಿಪಿ, ಇನ್‌ಸ್ಪೆಕ್ಟರ್‌ಗಳು ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಕನಿಷ್ಟ ಎರಡು ತಾಸು ರಸ್ತೆಯಲ್ಲಿ ನಿಂತು ಕೆಲಸ ಮಾಡಬೇಕು. ಅನೇಕ ಸಲ ಖಾಸಗಿ ಕಾರಿನಲ್ಲಿ ಅಧಿಕಾರಿಗಳು ಸಂಚರಿಸಿದಾಗ ಗಮನಿಸಿದ್ದೇನೆ. ಅಧಿಕಾರಿಗಳು ರಸ್ತೆಗಿಳಿದು ಕೆಲಸ ಮಾಡುವುದು ಕಾಣಿಸುವುದೇ ಇಲ್ಲ. ಇದನ್ನು ಸರಿಪಡಿಸಿಕೊಳ್ಳದೇ ಹೋದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜೊತೆಗೆ ಹೈವೇ ಪ್ಯಾಟ್ರೋಲಿಂಗ್ ವಾಹನಗಳು ಎಲ್ಲಿರುತ್ತವೆ ಎಂಬುದೇ ಕಾಣಿಸುವುದಿಲ್ಲ.‌ ಈ ವಾಹನಗಳನ್ನು ಗಣ್ಯರ ಮುಂಗಾವಲು ಪಡೆಗೆ ಬಳಸಿಕೊಳ್ಳುವುದು ಬೇಡ. ರಸ್ತೆ ಬದಿ ಕೆಟ್ಟು ನಿಂತಿರುವ ವಾಹನಗಳನ್ನು ಕೂಡಲೇ ತೆರವುಗೊಳಿಸುವ ಕೆಲಸವಾಗಬೇಕು. ಇದರಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ