AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಡಿ ಪಲ್ಲವಿ ಸೇರಿ ಕಲಾವಿದರ ನಾಟಕಕ್ಕೆ ಪೊಲೀಸ್​ ಅಡ್ಡಿ: ಸ್ಪಷ್ಟನೆ ನೀಡಿದ ಸಿಎಂ‌ ಸಿದ್ದರಾಮಯ್ಯ

md pallavi: ರಂಗಶಂಕರದಲ್ಲಿ ಪ್ಯಾಲೆಸ್ಟಿನ್ ಪರವಾಗಿ ಆಯೋಜನೆಯಾಗಿದ ಕಿರು ನಾಟಕ ಮತ್ತು ಕವನ ವಾಚನಕ್ಕೆ ಖ್ಯಾತ ರಂಗಭೂಮಿ ಕಲಾವಿದೆ, ಗಾಯಕಿ ಎಂಡಿ ಪಲ್ಲವಿ ಸೇರಿದಂತೆ ಹಲವು ಕಲಾವಿದರ ಕಾರ್ಯಕ್ರಮಕ್ಕೆ ಪೊಲೀಸರು ನಿರಾಕರಿಸಿದ್ದಾರೆ. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡುವ ಮೂಲಕ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನಿಡಿದ್ದಾರೆ.

ಎಂಡಿ ಪಲ್ಲವಿ ಸೇರಿ ಕಲಾವಿದರ ನಾಟಕಕ್ಕೆ ಪೊಲೀಸ್​ ಅಡ್ಡಿ: ಸ್ಪಷ್ಟನೆ ನೀಡಿದ ಸಿಎಂ‌ ಸಿದ್ದರಾಮಯ್ಯ
ಎಂಡಿ ಪಲ್ಲವಿ, ಸಿಎಂ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 01, 2023 | 3:20 PM

Share

ಬೆಂಗಳೂರು, ಡಿಸೆಂಬರ್​​​​ 01: ಬುಧವಾರ ರಂಗಶಂಕರದಲ್ಲಿ ಪ್ಯಾಲೆಸ್ಟಿನ್ ಪರವಾಗಿ ಆಯೋಜನೆಯಾಗಿದ ಕಿರು ನಾಟಕ ಮತ್ತು ಕವನ ವಾಚನಕ್ಕೆ ಖ್ಯಾತ ರಂಗಭೂಮಿ ಕಲಾವಿದೆ, ಗಾಯಕಿ ಎಂಡಿ ಪಲ್ಲವಿ (md pallavi) ಸೇರಿದಂತೆ ಹಲವು ಕಲಾವಿದರ ಕಾರ್ಯಕ್ರಮಕ್ಕೆ ಪೊಲೀಸರು ನಿರಾಕರಿಸಿದ್ದಾರೆ. ಪೊಲೀಸ್ ಅನುಮತಿ ನಿರಾಕರಣೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಆದರೆ ಸದ್ಯ ಈ ವಿಚಾರವಾಗಿ ಪೊಲೀಸರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸಿಟ್ಟಾಗಿದ್ದು, ಸ್ಪಷ್ಟನೆ ನೀಡಿದ್ದಾರೆ.

ಸ್ಪಷ್ಟನೆ ನೀಡಿದ ಸಿಎಂ‌ ಸಿದ್ದರಾಮಯ್ಯ

ಈ ಕುರಿತಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯುವ ಕೆಲಸವನ್ನು ಮಾಡುವುದಿಲ್ಲ.

ಎಂಡಿ ಪಲ್ಲವಿ ಫೇಸ್ಬುಕ್ ಪೋಸ್ಟ್​​

ನಾವು ಸಂವಿಧಾನದ ಮೂಲಸ್ಫೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿವೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕೆಂದು ನಾನು ಪೊಲೀಸ್ ಮಹಾನಿರ್ದೇಶಕರಿಗೆ ಸೂಕ್ತ ಸೂಚನೆಗಳನ್ನು ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಜಾರಿ, ವಿದ್ಯಾರ್ಥಿಗಳ ಪರದಾಟ: ಗದಗನಲ್ಲಿ ಎಬಿವಿಪಿ ಪ್ರತಿಭಟನೆ

ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರವು ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಸಬಯಸುತ್ತೇನೆ. ಆದ್ದರಿಂದ ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಸಬಾರದೆಂದು, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ಸಿಎಂ ಸಿದ್ದರಾಮಯ್ಯ ವಿನಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.