AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಮೂರ್ತಿ ಬಿ ವೀರಪ್ಪರಿಗೆ ಬೀಳ್ಕೊಡುಗೆ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಭಾಗಿ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆಸಲ್ಲಿದ್ದ ಬಿ. ವೀರಪ್ಪ ಅವರಿಗೆ ಇಂದು ಸನ್ಮಾನಿಸಿ ಬೀಳ್ಕೊಡಲಾಯಿತು.

ಗಂಗಾಧರ​ ಬ. ಸಾಬೋಜಿ
|

Updated on:May 31, 2023 | 9:00 PM

Share

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆಸಲ್ಲಿದ್ದ ಬಿ. ವೀರಪ್ಪ (B Veerappa) ಅವರಿಗೆ ಇಂದು ಸನ್ಮಾನಿಸಿ ಬೀಳ್ಕೊಡಲಾಯಿತು. ಬೆಂಗಳೂರು ವಕೀಲ ಸಂಘದಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬಿ. ವೀರಪ್ಪ ಅವರಿಗೆ ಮೈಸೂರು ಪೇಟ ತೊಡಿಸಿ, ಕಂಚಿನ ವೆಂಕಟೇಶ್ವರ ಮೂರ್ತಿ ನೀಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸನ್ಮಾನಿಸಿದರು. ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಲೆ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಭಾಗಿ ಆಗಿದ್ದರು.

ನನ್ನ ಕರ್ತವ್ಯವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ ಅಷ್ಟೇ: ನ್ಯಾಯಮೂರ್ತಿ ಬಿ.ವೀರಪ್ಪ 

ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಮಾತನಾಡಿ, ನನ್ನ ಕರ್ತವ್ಯವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ ಅಷ್ಟೇ. ನ್ಯಾಯಮೂರ್ತಿ ಆದಾಗ ಆದ ಖುಷಿಗಿಂತ ಈಗ ಹೆಚ್ಚು ಖುಷಿ ಆಗ್ತಿದೆ. ಚಿಕ್ಕವನಿದ್ದಾಗ ತಂಬೂರಿಯವನು ನಮ್ಮ ತಾಯಿ ಬಳಿ ಭವಿಷ್ಯ ಹೇಳಿದ್ದ. ನಿನ್ನ ಮಗ ಬಹಳ ತಲೆಹರಟೆ ಇದ್ದಾನೆ, ಮುಂದೆ ಕಷ್ಟ ಅಂತ ಹೇಳಿದ್ದ. ಆಗ ತಂಬೂರಿ ಮಾತು ಕೇಳಿ ನನ್ನ ತಾಯಿ ಕಣ್ಣೀರು ಹಾಕಿದ್ರು.

ಇದನ್ನೂ ಓದಿ: ‘ಗ್ಯಾರಂಟಿ’ಗೆ ಸಾಂಕೇತಿಕ ಚಾಲನೆ ನೀಡಲು ಬೃಹತ್ ಕಾರ್ಯಕ್ರಮ ಆಯೋಜನೆಗೆ ಚಿಂತನೆ

ನಾನು ತಂಬೂರಿ ಒಡೆದು ಹಾಕಿದ್ದೆ. 40 ವರ್ಷದ ಹಿಂದೆ ಬೆಂಗಳೂರಿಗೆ ಬಂದಾಗ ನಾನು ಅಪರಿಚಿತ. ಇಂದು 7 ಕೋಟಿ ಕನ್ನಡಿಗರು ನನ್ನವರು ಎಂದು ಹೇಳಿದರು.

ದುರ್ಬಲ ವರ್ಗದವರಿಗೆ ನ್ಯಾಯ ಕೊಡಿಸುವ ಕೆಲಸ ನ್ಯಾ.ಬಿ.ವೀರಪ್ಪ ಮಾಡಿದ್ದಾರೆ: ಸಿಎಂ

ಸಿಎಂ ಸಿದ್ದರಾಮಯ್ಯ ಮಾತನಾಡಿ, ನ್ಯಾಯಮೂರ್ತಿಯಾಗಿ ಬಿ.ವೀರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ನಾನು ಸಿಎಂ ಆಗಿದ್ದಾಗ ವೀರಪ್ಪ ಹೈಕೋರ್ಟ್ ನ್ಯಾಯಮೂರ್ತಿ ಆದರು. ಇಂದು ಸಿಎಂ ಆಗಿದ್ದೇನೆ, ನಿವೃತ್ತಿ ಹೊಂದುತ್ತಿದ್ದಾರೆ, ಇದು ಕಾಕತಾಳೀಯ. ವ್ಯವಸ್ಥೆಯಲ್ಲಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸವಲತ್ತುಗಳು ಸಿಗಬೇಕು ಎಂದರು.

ಇದನ್ನೂ ಓದಿ: ರೋಹಿತ್ ಚಕ್ರತೀರ್ಥಗೆ ಸಂಕಷ್ಟ, ದೂರು ದಾಖಲಿಸುವಂತೆ ಸಿಎಂಗೆ ಸಮಾನ ಮನಸ್ಕರ ಒಕ್ಕೂಟ ಮನವಿ

ನ್ಯಾಯಮೂರ್ತಿ ಬಿ.ವೀರಪ್ಪನವರು ಗ್ರಾಮೀಣ ಭಾಗದಿಂದ ಬಂದವರು. ದುರ್ಬಲ ವರ್ಗದ ಜನರ ಕಷ್ಟ ವೀರಪ್ಪನವರಿಗೆ ಚೆನ್ನಾಗಿ ಗೊತ್ತಿರುತ್ತದೆ. ದುರ್ಬಲ ವರ್ಗದ ಜನ ಪ್ರಬಲ ವರ್ಗದವರ ವಿರುದ್ಧ ಹೋಗಲು ಆಗಲ್ಲ. ಕೋರ್ಟ್​ಗಳಿಗೆ ಹೋಗಲು ಸಾಧ್ಯವಾಗದ ಸಾಕಷ್ಟು ಉದಾಹರಣೆ ಇವೆ. ಅಂಥವರಿಗೆ ನ್ಯಾಯ ಕೊಡಿಸುವ ಕೆಲಸ ನ್ಯಾ.ಬಿ.ವೀರಪ್ಪ ಮಾಡಿದ್ದಾರೆ. ನ್ಯಾ.ಬಿ.ವೀರಪ್ಪ ಸತತ 8 ವರ್ಷ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ನಂತರವೂ ಅವರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಹೇಳಿದರು.

ನ್ಯಾ.ಬಿ.ವೀರಪ್ಪ ತಮ್ಮ ಕೆಲಸದ ಮೂಲಕ ರಾಜ್ಯದ ಹೃದಯ ಗೆದ್ದಿದ್ದಾರೆ: ಡಿಸಿಎಂ 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ದೊಡ್ಡ ಸ್ಥಾನದಲ್ಲಿದೆ. ನ್ಯಾಬಿ.ವೀರಪ್ಪನವರ ಕಾರ್ಯದಿಂದ ರಾಜಕಾರಣಿ ಕಲಿಯುವುದು ಸಾಕಷ್ಟಿದೆ. ತಮ್ಮ ಕೆಲಸದ ಮೂಲಕ ರಾಜ್ಯದ ಹೃದಯ ಗೆದ್ದಿದ್ದಾರೆ. ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:52 pm, Wed, 31 May 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್