Bengaluru News: ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದಕ್ಕೆ ವ್ಯಕ್ತಿಗೆ ಕಪಾಳಮೋಕ್ಷ

ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟರ್ ನೋಡಿ ಬೈಯ್ದಿದ್ದಾನೆ. ಇದನ್ನು ಕಂಡ ಸಿದ್ದರಾಮಯ್ಯ ಅಭಿಮಾನಿಗಳು ವ್ಯಕ್ತಿಗೆ ಕಪಾಳಮೋಕ್ಷ ಮಾಡಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

Bengaluru News: ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದಕ್ಕೆ ವ್ಯಕ್ತಿಗೆ ಕಪಾಳಮೋಕ್ಷ
ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದಕ್ಕೆ ವ್ಯಕ್ತಿಗೆ ಕಪಾಳಮೋಕ್ಷ
Follow us
ಆಯೇಷಾ ಬಾನು
|

Updated on: Jun 04, 2023 | 10:49 AM

ಬೆಂಗಳೂರು: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರದರ್ಶನ ಹೆಚ್ಚಾಗುತ್ತಿದೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಕೆಲ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟರ್ ನೋಡಿ ಬೈಯ್ದಿದ್ದಾನೆ. ಇದನ್ನು ಕಂಡ ಸಿದ್ದರಾಮಯ್ಯ ಅಭಿಮಾನಿಗಳು(Siddaramaiah Fans) ವ್ಯಕ್ತಿಗೆ ಕಪಾಳಮೋಕ್ಷ(Slap) ಮಾಡಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ವ್ಯಕ್ತಿಯನ್ನು ಸಿದ್ದರಾಮಯ್ಯ ಪೋಸ್ಟರ್ ಬಳಿ ಎಳೆ ತಂದು ಕ್ಷಮೆ ಕೇಳುವಂತೆ ಕೆನ್ನೆಗೆ ಬಾರಿಸಿದ್ದಾರೆ.​​ ಸಿದ್ದರಾಮಯ್ಯ ಅಲ್ಲದೇ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರ ಬಗ್ಗೆಯೂ ಈ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ತಿಳಿದು ಬಂದಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದ ಸಿದ್ದರಾಮಯ್ಯ

ಕಳೆದ ಮಾರ್ಚ್ ತಿಂಗಳಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದರು. ಅದು ದೊಡ್ಡ ಮಟ್ಟಿಗೆ ಸುದ್ದಿಯಾಗಿತ್ತು. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದರು. ಶಾಸಕ ರಾಮಪ್ಪ ಅವರಿಗೆ ಟಿಕೆಟ್​ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಮಾರ್ಚ್ 24ರಂದು ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಆ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದರು. ವಿಡಿಯೋ ಫುಲ್​ ವೈರಲ್ ಆಗಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ