ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ; ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಅಹವಾಲು ಸ್ವೀಕಾರ

| Updated By: ಆಯೇಷಾ ಬಾನು

Updated on: Feb 08, 2024 | 7:30 AM

ಇದೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜನ ಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಕಾರ್ಯಕ್ರಮಕ್ಕೆ ಬೇಕಾದ ಎಲ್ಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರ ಬಳಿ ಖುದ್ದು ಸಿದ್ದರಾಮಯ್ಯನವರೇ ಅಹವಾಲು ಸ್ವೀಕರಿಸಲಿದ್ದಾರೆ. ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಅಧಿಕಾರಿಗಳಿಗೆ ಸಿಎಂ ನಿರ್ದೇಶಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ; ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಅಹವಾಲು ಸ್ವೀಕಾರ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು, ಫೆ.08: ಇದೇ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಜನಸ್ಪಂದನ (Jana Spandana) ಕಾರ್ಯಕ್ರಮ ನಡೆಸಲಿದ್ದಾರೆ. ಕಳೆದ ಸೆಪ್ಟೆಂಬರ್‌ ನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ನಡೆಸಲಾಗಿತ್ತು. ಆಗ ಹೆಚ್ಚು ರೆಸ್ಪಾನ್ ದೊರೆತಿತ್ತು. ಈಗ ವಿಧಾನಸೌಧದ ಆವರಣದಲ್ಲಿ ರಾಜ್ಯಮಟ್ಟದ ಜನಸ್ಪಂದನ ಹಮ್ಮಿಕೊಳ್ಳಲಾಗಿದೆ. ಇಂದು ಇಡೀ ದಿನ ಜನಸ್ಪಂದನ ಕಾರ್ಯದಲ್ಲಿ ಸಿಎಂ ತೊಡಗಿಸಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಜನಸ್ಪಂದನ ನಡೆಯಲಿದೆ‌. ಜನಸ್ಪಂದನ ಕಾರ್ಯಕ್ರಮಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟಪ್ಸ್ ಮುಂಭಾಗ ಸಿಎಂ ಜನಸ್ಪಂದನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೃಹತ್ ಜರ್ಮನ್ ಟಂಟ್ ಹಾಕಲಾಗಿದೆ. 10 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ. 20 ಬೃಹತ್ ಎಲ್ ಇಡಿ ಸ್ಕ್ರೀನ್ ಅಳವಡಿಸಿದ್ದಾರೆ.

ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಅಂದರೆ ಆಧಾರ್ ಅಥವಾ ಪಡಿತರ ಕಾರ್ಡ್ ನೊಂದಿಗೆ ಬಂದು ರಿಜಿಸ್ಟರ್ ಮಾಡಿಕೊಳ್ಳಬೇಕು. ರಿಜಿಸ್ಟರ್ ಮಾಡಿಕೊಳ್ಳುವಾಗ ಯಾವ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಎಂದು ನೋಡಿ ಆ ಇಲಾಖೆಯ ಕೌಂಟರ್ ನಂಬರ್ ಕೊಡಲಾಗುತ್ತೆ. ಆ ಕೌಂಟರ್ ನಂಬರ್ ಬಳಿ ಹೋಗಿ ತಮ್ಮ ಮನವಿಯನ್ನ ಸಾರ್ವಜನಿಕರು ಕೊಡಬಹುದು‌. ಇದಕ್ಕಾಗಿ 36 ವಿವಿಧ ಇಲಾಖೆಯ ಕೌಂಟರ್ ಗಳನ್ನ ತೆರೆಯಲಾಗಿದೆ. ಕೌಂಟರ್ ಗಳಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೇ ಖುದ್ದು ಸಾರ್ವಜನಿಕ ಮನವಿ ಸ್ವೀಕರಿಸಲಿದ್ದಾರೆ. ಬಳಿಕ ಸಿಎಂ‌ ಸಿದ್ದರಾಮಯ್ಯನವರೇ ಖುದ್ದು ಆ ಕೌಂಟರ್ ಗಳಿಗೆ ತೆರಳಿ ಅರ್ಜಿಯನ್ನ ನೋಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಥಳದಲ್ಲೇ ಇರುಲು ಸೂಚಿಸಲಾಗಿದೆ.

ಇದನ್ನೂ ಓದಿ:Mysuru Suttur Math: ಸುತ್ತೂರು ಗದ್ದುಗೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಇನ್ನೂ ಆನ್ ಲೈನ್ ನಲ್ಲೂ ನೊಂದಣಿ ಮಾಡಿಕೊಳ್ಳಬಹುದು. ಸಿಎಂ ಜನಸ್ಪಂದನಕ್ಕೆ ಅಹವಾಲು ಸಲ್ಲಿಸಲು 1902 ಸಂಖ್ಯೆ ಗೆ ಕರೆ ಮಾಡಿ ನೊಂದಾಯಿಸಬಹುದು. ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಲಘು ಉಪಾಹಾರ ಮತ್ತು ನೀರನ ವ್ಯವಸ್ಥೆ ಕಲ್ಪಿಸಲಾಗುತ್ತೆ‌. ಜನಸ್ಪಂದನಕ್ಕೆ ಆಗಮಿಸುವ ಸಾರ್ವಜನಿಕರಿಗೆ ತಾವು ಇರುವಲ್ಲೇ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗುತ್ತೆ. ಜನಸ್ಪಂದನಕ್ಕೆ ಬರುವ ಸಾರ್ವಜನಿಕರಿಗೆ ಮೆಜೆಸ್ಟಿಕ್ ನಿಂದ ಹಾಗೂ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ವಿಧಾನಸೌಧಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹಿರಿಯ ನಾಗರೀಕರು ಹಾಗೂ ವಿಕಲ ಚೇತರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

ಕಳೆದ ಬಾರಿ ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ 4,030 ಅರ್ಜಿಗಳ ಬಂದಿದ್ದವು. ಆ ಪೈಕಿ 3,738 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಸಿಎಂ ಜನಸ್ಪಂದನ ಕಾರ್ಯಕ್ರಮ ಚಾಲನೆ ವೇಳೆ ಕಳೆದ ಬಾರಿ ಜನಸ್ಪಂದನದ ಅಂಕಿ ಅಂಶಗಳನ್ನ ವಿವರಣೆ ನೀಡುವ ಸಾಧ್ಯತೆ ಇದೆ, ಈ ಬಾರಿ ಇನ್ನೂ ಹೆಚ್ಚು ಅರ್ಜಿಗಳು ಬರುವ ನಿರೀಕ್ಷೆ ಇದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:52 am, Thu, 8 February 24