ಒಡಿಶಾ ರೈಲು ದುರಂತದ ಬಗ್ಗೆ ವರದಿ ಸಲ್ಲಿಸುವಂತೆ ಸಿಎಸ್ ವಂದಿತಾ ಶರ್ಮಾಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಒಡಿಶಾದ ಬಹನಾಗ ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಅಪಘಾತ ನಡೆದ ಸಂಬಂಧ ವರದಿ ಸಲ್ಲಿಸುವಂತೆ ಸಿಎಸ್​​ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಒಡಿಶಾ ರೈಲು ದುರಂತದ ಬಗ್ಗೆ ವರದಿ ಸಲ್ಲಿಸುವಂತೆ ಸಿಎಸ್ ವಂದಿತಾ ಶರ್ಮಾಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿದ್ದರಾಮಯ್ಯ, ಮುಖ್ಯಮಂತ್ರಿ
Follow us
ಆಯೇಷಾ ಬಾನು
|

Updated on: Jun 03, 2023 | 1:31 PM

ಬೆಂಗಳೂರು: ಒಡಿಶಾದ ಬಹನಾಗ ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಅಪಘಾತ(Odisha Train Accident) ನಡೆದ ಸಂಬಂಧ ಸಿಎಸ್ ವಂದಿತಾ ಶರ್ಮಾ(Vandita Sharma) ಅವರು ಸಿಎಂ ಸಿದ್ದರಾಮಯ್ಯನವರನ್ನು(Siddaramaiah) ಭೇಟಿ ಮಾಡಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಕರ್ನಾಟಕದ ಎಷ್ಟು ಪ್ರಯಾಣಿಕರು ದುರಂತ ನಡೆದ ರೈಲಿನಲ್ಲಿದ್ದರು. ರೈಲು ದುರಂತದಿಂದ ನಮ್ಮ ರಾಜ್ಯದವರಿಗೆ ಏನಾದರು ಆಗಿದೆಯಾ? ಎಂಬ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಇನ್ನು ಈ ಸಂಬಂಧ ವರದಿ ಸಲ್ಲಿಸುವಂತೆ ಸಿಎಸ್​​ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇನ್ನು ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅವರಿಗೆ ಅಗತ್ಯ ನೆರವನ್ನು ಒದಗಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. “ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ” ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮಧ್ಯಾಹ್ನ 2.30ಕ್ಕೆ ಭುವನೇಶ್ವರಕ್ಕೆ ತೆರಳುವ ಸಂತೋಷ್ ಲಾಡ್

ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಧ್ಯಾಹ್ನ 2.30 ಕ್ಕೆ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ಭುವನೇಶ್ವರಕ್ಕೆ ತೆರಳಲಿದ್ದಾರೆ. ಚಾರ್ಟರ್ಡ್ ಫ್ಲೈಟ್ ಮೂಲಕ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ತಂಡದ ಜೊತೆ ತೆರಳುತ್ತಿದ್ದು ಕನ್ನಡಿಗರ ಸುರಕ್ಷತೆ ಬಗ್ಗೆ ರೈಲ್ವೇ ಡಿಐಜಿಯಿಂದ ಮಾಹಿತಿ ಪಡೆಯಲಿದ್ದಾರೆ. ಸದ್ಯ ದೂರವಾಣಿ ಮೂಲಕ ರೈಲ್ವೆ ಡಿಐಜಿ ಶಶಿಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ.

ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಶೇಷ ವಿಮಾನದ ಮೂಲಕ ಒಡಿಶಾದ ಭುವನೇಶ್ವರಕ್ಕೆ ತೆರಳ್ತಿದ್ದೇನೆ. ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಜೊತೆ ಹೋಗುತ್ತಿದ್ದೇನೆ. ಭುವನೇಶ್ವರದಿಂದ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ತೆರಳಬೇಕಾಗಿದೆ. ಸುರಕ್ಷಿತವಾಗಿ ಕನ್ನಡಿಗರನ್ನು ಕರೆತರುವುದು ನಮ್ಮ ಜವಾಬ್ದಾರಿ ಆಗಿದೆ. ಕನ್ನಡಿಗರಿಗೆ ಯಾವುದೇ ತೊಂದರೆ ಇದ್ದರೆ ಚಿಕಿತ್ಸೆ ಕೊಡಿಸಲು ಕ್ರಮ ಕೈಗೊಳ್ಳಲಾಗುತ್ತೆ. ಪ್ರಾಥಮಿಕ ಮಾಹಿತಿ ಪ್ರಕಾರ ಕನ್ನಡಿಗರಿಗೆ ಯಾವ ಸಮಸ್ಯೆ ಆಗಿಲ್ಲ. ದುರಂತ ಸ್ಥಳದಲ್ಲಿರುವ ಕನ್ನಡಿಗರು ನನಗೆ ಕರೆ ಮಾಡಬಹುದು. ನನ್ನ ಮೊಬೈಲ್ ಸಂಖ್ಯೆ 9845739999ಗೆ ಸಂಪರ್ಕಿಸಬಹುದು. ಕನ್ನಡಿಗರನ್ನು ಕರೆತರುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ