ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಂತೆ ಕೆಎಂಎಫ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರವನ್ನು ಕಡಿತ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಎಂಎಫ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಂತೆ ಕೆಎಂಎಫ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on: Jun 04, 2023 | 3:29 PM

ಬೆಂಗಳೂರು: ಇತ್ತೀಚಿಗೆ ಮನ್ಮುಲ್ (Manmul) ಮತ್ತು ಬಮುಲ್ (Bamul) ​ರೈತರಿಗೆ ನೀಡುತ್ತಿದ್ದ ಹಾಲಿನ ಪ್ರೋತ್ಸಾಹಧನವನ್ನು ಕಡಿಮೆ ಮಾಡಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಜೂ.​04) ಕೆಎಂಎಫ್​ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರವನ್ನು ಕಡಿತ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು. ಹಾಲಿನ ಪ್ರೋತ್ಸಾಹಧನ ಕಡಿತ ಮಾಡಿದರೇ ರೈತರಿಗೆ ತೊಂದರೆಯಾಗುತ್ತೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ

ಬೆಂಗಳೂರು: ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿತ್ತು. ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು.

ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗುವುದು ಎಂದು ಕಾರಣ ನೀಡಿತ್ತು.

ಇದನ್ನೂ ಓದಿ: ದರ ಬದಲಾವಣೆ ಮಾಡದೇ ಹಾಲಿನ ಕೊರತೆ ನೀಗಿಸಲು ಕೆಎಂಎಫ್​ ಮಾಸ್ಟರ್ ಪ್ಲಾನ್

ಎರಡು ತಿಂಗಳ ಹಿಂದೆ ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿತ್ತು. ನಂತರ ದಿನಗಳಲ್ಲಿ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದ ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ.

ಇದರಿಂದ ಅದು 16 ಲಕ್ಷ ಲೀಟರ್​ಗೆ ತಲುಪುವ ಮೂಲಕ ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಹೀಗಾಗಿ ಜಿಲ್ಲಾ ಹಾಲು ಒಕ್ಕೂಟ ಲೀಟರ್​​ಗೆ 1.50 ರೂ. ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಆದೇಶ ಹೊರಡಿಸಿತ್ತು.

ರೈತರಿಗೆ ಬಿಗ್ ಶಾಕ್ ಕೊಟ್ಟ ಮನ್ಮುಲ್: ಖರೀದಿ ಹಾಲಿನ ದರ ಕಡಿತ

ಮಂಡ್ಯ: ಮನ್ಮುಲ್ ರೈತರಿಗೆ ಬಿಗ್ ಶಾಕ್ ಕೊಟ್ಟಿತ್ತು. ರೈತರಿಂದ ಖರೀದಿಸುವ ಹಾಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಲೀಟರ್ ಗೆ 1 ರೂ. ಕಡಿತ ಮಾಡಿ ಆದೇಶ ಹೊರಡಿಸಿತ್ತು. ಜೂನ್ 1ರಿಂದಲೇ ಪರಿಷ್ಕೃತ ಆದೇಶ ಜಾರಿ ಮಾಡಲಾಗಿತ್ತು. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಯಲಿದೆ.

ಮೇ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜೂ.1 ರಿಂದ ಮುಂದಿನ ಆದೇಶದವರೆಗೆ ಈ ನೂತನ ದರ ಪರಿಷ್ಕರಣೆ ಮುಂದುವರಿಯುತ್ತದೆ ಎಂದು ಮನ್ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ ಪಿ.ಆರ್.ಮಂಜೇಶ್ ಸುತ್ತೋಲೆ ಹೊರಡಿಸಿದ್ದರು. ಜಿಲ್ಲಾ ಹಾಲು ಒಕ್ಕೂಟವು ಪ್ರತಿದಿನ 9,38,035 ಕೆಜಿ ಹಾಲನ್ನು ಸಂಗ್ರಹಿಸುತ್ತಿದೆ.

ಬೇಸಿಗೆ ಕಾಲದಲ್ಲಿ ಹಸಿರು ಮೇವಿನ ಕೊರತೆಯಿಂದ ಉತ್ಪಾದಕರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಸದ್ಯ ನೂತನ ದರದಂತೆ ಸಂಘಗಳಿಗೆ ಶೇ 4.0 ಜಿಡ್ಡು ಮತ್ತು ಶೇ 8.5 ಜಿಡ್ಡೇತರ ಘನಾಂಶಕ್ಕೆ 33.15 ರೂ. ಬದಲು 32.15 ರೂ ಹಾಗೂ ಉತ್ಪಾದಕರಿಗೆ 32.25 ರೂ ಬದಲು 31.25 ರೂ. ನಿಗಧಿಗೊಳಿಸಲಾಗಿತ್ತು.

ಒಕ್ಕೂಟದ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಅರಂಭವಾಗಿದ್ದು, ಹಸಿರು ಮೇವಿನ ಲಭ್ಯತೆ ಸುಧಾರಿಸಿದೆ. ಹೀಗಾಗಿ ದರ ಕಡಿತ ಮಾಡಲಾಗಿದೆ ಎಂದು ಮನ್‌ಮುಲ್ ಆಡಳಿತ ಮಂಡಳಿ ದರ ಇಳಿಕೆಗೆ ಸಮರ್ಥನೆ ನೀಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ