Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಬ್ಯಾಂಕ್ವೇಟ್​ ಹಾಲ್​ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಯುವ ನಿಧಿ ಯೋಜನೆಯ ನೋಂದಣಿಗೆ ಚಾಲನೆ ನೀಡಿದರು. ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈದರಾಬಾದ್​​-ಕರ್ನಾಟಕ ಭಾಗದ ಹುದ್ದೆಗಳ ಭರ್ತಿ ಮಾಡುತ್ತೇವೆ. ಈ ಭಾಗದಲ್ಲಿ ಉದ್ಯೋಗ ಭತ್ಯೆಯನ್ನು ನೀಡಲಾಗುತ್ತಿದೆ ಎಂದರು.

ವಿಧಾನಸೌಧದಲ್ಲಿ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ
Follow us
Anil Kalkere
| Updated By: ಆಯೇಷಾ ಬಾನು

Updated on: Dec 26, 2023 | 2:46 PM

ಬೆಂಗಳೂರು, ಡಿ.26: ಕಾಂಗ್ರೆಸ್ ಸರ್ಕಾರ​ ರಾಜ್ಯದ ಜನರಿಗೆ ಈಗಾಗಲೇ ನಾಲ್ಕು ಗ್ಯಾರಂಟಿಗಳ ಗಿಫ್ಟ್​ ನೀಡಿದೆ. ಸದ್ಯ ಈಗ ಐದನೇ ಗ್ಯಾಂಟಿ ಆಗಿರುವ ಯುವ ನಿಧಿ ಯೋಜನೆಯ (Yuva Nidhi Scheme) ನೋಂದಣಿಗೂ ಚಾಲನೆ ಸಿಕ್ಕಿದೆ. ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಮತ ಲೆಕ್ಕಾಚಾರ ಹಾಕಿ ಯುವನಿಧಿಗೆ ಚಾಲನೆ ನೀಡಲಾಗ್ತಿದೆ. ಕಾಂಗ್ರೆಸ್​ ಐದು ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ನೋಂದಣಿಗೆ ಇಂದು ಚಾಲನೆ ನೀಡಲಾಯ್ತು. ವಿಧಾನಸೌಧದ ಬ್ಯಾಂಕ್ವೇಟ್​ ಹಾಲ್​ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar)​ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜನವರಿ 12 ಸ್ವಾಮಿ ವಿವೇಕಾನಂದರ ಜನ್ಮದಿನದಂದು ಶಿವಮೊಗ್ಗದಲ್ಲಿ ಈ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ. ಅಂದು ನಿರುದ್ಯೋಗಿ ಯುವಕರ ಖಾತೆಗೆ ನೇರವಾಗಿ ಹಣ ಜಮೆ ಆಗಲಿದೆ. ಯುವನಿಧಿ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ನಡೆದಿದ್ದು, ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಐದನೇ ಗ್ಯಾರಂಟಿಗೆ ಚಾಲನೆ ಕೊಡೋ ಮೂಲಕ ಕಾಂಗ್ರೆಸ್​ ಯುವ ಮತಗಳ ಮೇಲೆ ಕಣ್ಣಿಟ್ಟಿದೆ. ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿ ವರ್ಷದಲ್ಲಿ 250 ಕೋಟಿ ಹಾಗೂ ಮುಂದಿನ ವರ್ಷಕ್ಕೆ 1,250 ಕೋಟಿ ರೂ. ವೆಚ್ಚ ತಗುಲಲಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟ್​ಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಹೊಸ್ತಿನಲ್ಲಿ ಯುವ ಸಮುದಾಯದ ಮತಬೇಟೆಗೆ ಇಳಿದ ಕಾಂಗ್ರೆಸ್, ಇಂದಿನಿಂದ ಯುವ ನಿಧಿ ನೋಂದಣಿ ಆರಂಭ

ಇನ್ನು ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೀವು ಎರಡು ವರ್ಷದೊಳಗೆ ಉದ್ಯೋಗ ಪಡೆದುಕೊಳ್ಳಬೇಕು. ಅದಕ್ಕೆ ಬೇಕಾದ ತರಬೇತಿಯನ್ನ ಕೌಶಲ್ಯಾಭಿವೃದ್ಧಿ ಇಲಾಖೆ ಮಾಡುತ್ತೆ. ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೂ ಪ್ರೋತ್ಸಾಹ ನೀಡುತ್ತಿದ್ದೇವೆ. ಬಂಡವಾಳ ಹೂಡಿಕೆಗೆ ಪ್ರೋತ್ಸಾಹಿಸಿದರೆ ಹೆಚ್ಚು ಉದ್ಯೋಗ ಸೃಷ್ಟಿ ಆಗುತ್ತೆ. ಹೈದರಾಬಾದ್​​-ಕರ್ನಾಟಕ ಭಾಗದ ಹುದ್ದೆಗಳ ಭರ್ತಿ ಮಾಡುತ್ತೇವೆ. ಈ ಭಾಗದಲ್ಲಿ ಉದ್ಯೋಗ ಭತ್ಯೆಯನ್ನು ನೀಡಲಾಗುತ್ತಿದೆ. ಹೀಗಾಗಿ ಅಲ್ಲಿ ವೈದ್ಯರು, ಶಿಕ್ಷಕರು, ಪ್ರೊಫೆಸರ್​​ಗಳು ಆಗಲು ಸಾಧ್ಯವಾಯ್ತು. ನಿರುದ್ಯೋಗ ನಿವಾರಣೆಗೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತೆ ಎಂದರು.

ನನಗೆ ಹಾಗೂ ಸಿದ್ದರಾಮಯ್ಯರಿಗೂ ಇದು ಕನಸಿನ ಕರ್ನಾಟಕ

ಸರ್ಕಾರದ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ನನಗೆ ಅತೀ ಸಂತೋಷ, ಪವಿತ್ರವಾದ ದಿನ‌ ಇವತ್ತು. ವೇದಿಕೆ ಮೇಲೆ ಮಹಾತ್ಮ ಗಾಂಧಿಜೀಯ ಕನಸಿನ ಭಾರತ ಅನ್ನುವ ಪುಸ್ತಕವನ್ನ ಶರಣು ಪ್ರಕಾಶ್ ಪಾಟೀಲ್ ಕೊಟ್ರು. ನನಗೂ ಸಿದ್ದರಾಮಯ್ಯರಿಗೂ ಇದು ಕನಸಿನ ಕರ್ನಾಟಕ. ನಾವು ವಿದ್ಯಾರ್ಥಿಗಳಿದ್ದಾಗ ಇಂತಹ ಭಾಗ್ಯಗಳು ಸಿಕ್ಕಿಲ್ಲ. ಅವಕಾಶಗಳನ್ನ‌ ಸೃಷ್ಟಿಸಿಕೊಳ್ಳುವವನು ನಿಜವಾದ ಬುದ್ದಿವಂತ ಅಂತ ವಿವೇಕಾನಂದರು ಹೇಳಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡ ದಿನ‌ ನೆನಪಾಗುತ್ತೆ. ಮಹಿಳೆ ಮತ್ತು ಯುವಕರ ಮೇಲೆ ವಿಶ್ವಾಸ ಇಡಬೇಕು. ಕೃಷಿಕ, ಕಾರ್ಮಿಕ ಎಲ್ಲರೂ ಸೇರಿ‌ ಶಕ್ತಿ ತುಂಬಿತ್ತಾರೆ ಅಂತ ಅಂದು ಭಾಷಣ ಮಾಡಿ ಅಧಿಕಾರ ತಗೆದುಕೊಂಡೆ.

ಇದು ಬದಲಾವಣೆ ಅಲ್ಲ, ನಿಮ್ಮ ಶಕ್ತಿಗೆ ಉಸಿರು ತುಂಬುವ ಕೆಲಸ. ಜಿಗುಪ್ಸೆ ಆಗಬಾರದು ಈ ಯೋಜನೆ ತಂದಿದ್ದೇವೆ. ಇದು ನಮ್ಮ ಸರ್ಕಾರದ ಕಾರ್ಯಕ್ರಮ ಅಲ್ಲ, ನಿಮ್ಮ‌ ಕಾರ್ಯಕ್ರಮ. ಅಧಿಕಾರದ ಋಣ ತೀರಿಸುವ ಕೆಲಸ ಮಾಡುತ್ತೇವೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ