AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸಭೆ;ಇಲ್ಲಿದೆ ವಿವರ

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​, 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಬಳಿಕ ಅಧಿಕಾರ ಹಿಡಿದ ಬಳಿಕ, ಹಂತ ಹಂತವಾಗಿ ಒಂದೊಂದೆ ಯೋಜನೆಗಳನ್ನು ಜಾರಿ ಮಾಡಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಅಧ್ಯಕ್ಷತೆಯಲ್ಲಿ ಇಂದು(ನ.22) ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಜೊತೆ ಸಭೆ ನಡೆಸಲಾಗಿದ್ದು, ಇಲ್ಲಿದೆ ಮುಖ್ಯಾಂಶಗಳು.

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸಭೆ;ಇಲ್ಲಿದೆ ವಿವರ
ಸಿಎಂ ಸಿದ್ದರಾಮಯ್ಯ
Malatesh Jaggin
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 22, 2023 | 8:23 PM

Share

ಬೆಂಗಳೂರು, ನ.22: ರಾಜ್ಯದಲ್ಲಿ ಕಾಂಗ್ರೆಸ್(Congress)​ ಪಕ್ಷ ಬರೊಬ್ಬರಿ 130 ಕ್ಕೂ ಅಧಿಕ ಸೀಟ್​ಗಳನ್ನು ಗೆದ್ದು ಆಡಳಿತ ಚುಕ್ಕಾಣಿಯನ್ನು ಹಿಡಿದಿದೆ. ಇನ್ನು ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​, 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಬಳಿಕ ಅಧಿಕಾರ ಹಿಡಿದ ಬಳಿಕ, ಹಂತ ಹಂತವಾಗಿ ಒಂದೊಂದೆ ಯೋಜನೆಗಳನ್ನು ಜಾರಿ ಮಾಡಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಅಧ್ಯಕ್ಷತೆಯಲ್ಲಿ ಇಂದು(ನ.22) ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಜೊತೆ ಸಭೆ ನಡೆಸಲಾಗಿದೆ.

ಮುಖ್ಯಾಂಶಗಳು

ಶಕ್ತಿ ಯೋಜನೆ

ಶಕ್ತಿ ಯೋಜನೆ ಜಾರಿ ಆದಗಿನಿಂದ ನವೆಂಬರ್‌ 21 ರವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು(ಟಕೆಟ್​) ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಏಪ್ರಿಲ್‌ 2023 ರಲ್ಲಿ ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ 84.17 ಲಕ್ಷ ಇತ್ತು. ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಜೊತೆಗೆ ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇದನ್ನೂ ಓದಿ:ಗ್ಯಾರಂಟಿ ಯೋಜನೆ ಬಗ್ಗೆ ಕುಮಾರಸ್ವಾಮಿ ಹಾಕಿದ್ದ ಸವಾಲು ಸ್ವೀಕರಿಸಿದ ಡಿಕೆ ಶಿವಕುಮಾರ್: ಸ್ಥಳ, ದಿನಾಂಕ ಫಿಕ್ಸ್

ಅನ್ನಭಾಗ್ಯ

ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ. 7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಯಿತು. ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಗೃಹ ಜ್ಯೋತಿ

ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈವರೆಗೆ 2900 ಕೋಟಿ ರೂ. ಭರಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿಯೇ ಗೃಹ ಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಇದನ್ನೂ ಓದಿ:ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರದಿಂದ ಸರ್ಕಸ್, ಚಿನ್ನದ ಮೊಟ್ಟೆ ಗಣಿ ಇಲಾಖೆಯಲ್ಲಿ ರಾಜಧನ ಸೊರಿಕೆ ತಡೆಗೆ ವಿನೂತನ ಪ್ಲಾನ್!

ಗೃಹಲಕ್ಷ್ಮಿ ಯೋಜನೆ

ಇನ್ನು ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಸೂಚಿಸಿದರು. ಡಿಸೆಂಬರ್‌ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಲು ಸೂಚಿಸಿದರು. ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್