Karnataka Rains: ಜಿಲ್ಲಾಧಿಕಾರಿಗಳ ಆದೇಶ ಪಾಲಿಸುವಂತೆ ವಿದ್ಯಾರ್ಥಿ, ಪೋಷಕರಿಗೆ ಸಿಎಂ ಮನವಿ

ಟ್ವೀಟ್ ಮೂಲಕ ಡಿಸಿಗಳ ಆದೇಶವನ್ನು ಪಾಲಿಸುವಂತೆ ವಿದ್ಯಾರ್ಥಿಗಳು, ಪೋಷಕರಿಗೆ CM ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಅತಿವೃಷ್ಟಿ ಮತ್ತು ಪ್ರವಾಹದ ಮುನ್ಸೂಚನೆ ಇರುವ ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಈಗಾಗಲೇ ರಜೆ ನೀಡಿದ್ದಾರೆ. ಹೀಗಾಗಿ ಅವರ ಆದೇಶವನ್ನು ಪಾಲಿಸಿ ಎಂದಿದ್ದಾರೆ.

Karnataka Rains: ಜಿಲ್ಲಾಧಿಕಾರಿಗಳ ಆದೇಶ ಪಾಲಿಸುವಂತೆ ವಿದ್ಯಾರ್ಥಿ, ಪೋಷಕರಿಗೆ ಸಿಎಂ ಮನವಿ
ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jul 26, 2023 | 7:06 AM

ಬೆಂಗಳೂರು, ಜುಲೈ 26: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ(Karnataka Rains). ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಹಿನ್ನೆಲೆ, ಪರಿಸ್ಥಿತಿ ಅವಲೋಕ, ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ(Siddaramaiah) ಇಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಸಭೆ ಕರೆದಿದ್ದಾರೆ. ಸಂಜೆ 4ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಇನ್ನು ಮತ್ತೊಂದೆಡೆ ಟ್ವೀಟ್ ಮೂಲಕ ಡಿಸಿಗಳ ಆದೇಶವನ್ನು ಪಾಲಿಸುವಂತೆ ವಿದ್ಯಾರ್ಥಿಗಳು, ಪೋಷಕರಿಗೆ CM ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಆಗುತ್ತಿದೆ. ಮಳೆಯಿಂದ ಹಠಾತ್​ ಪ್ರವಾಹ ಸಂಭವಿಸುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಅತಿವೃಷ್ಟಿ ಮತ್ತು ಪ್ರವಾಹದ ಮುನ್ಸೂಚನೆ ಇರುವ ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಈಗಾಗಲೇ ರಜೆ ನೀಡಿದ್ದಾರೆ. ಡಿಸಿಗಳ ಆದೇಶವನ್ನು ವಿದ್ಯಾರ್ಥಿಗಳು, ಪೋಷಕರು ಪಾಲನೆ ಮಾಡಬೇಕು ಎಂದು ಟ್ವೀಟ್ ಮೂಲಕ ವಿದ್ಯಾರ್ಥಿಗಳು, ಪೋಷಕರಿಗೆ CM ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Karnataka Rains: ಮಳೆಯಬ್ಬರಕ್ಕೆ ದಕ್ಷಿಣ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಘೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ. ಜೊತೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಟ್ರಕ್ಕಿಂಗ್ಗೆ ನಿಷೇಧ ಹೇರಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೆರೆ, ನದಿ, ಸಮುದ್ರತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಮುನ್ನೆಚ್ಚರಿಕೆ ವಹಿಸಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ದಕ್ಷಿಣ ಕನ್ನಡ, ಉಡುಪಿಯಲ್ಲಿ ಡಿಸಿಗಳು ಮನವಿ ಮಾಡಿದ್ದಾರೆ. ಕಾಲೇಜಿಗೆ ಬರಲಾಗದ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗೆ ಸೂಚಿಸಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದ್ದು. ಕೊಡಗು ಜಿಲ್ಲೆಯ ಅಂಗನವಾಡಿ, ಶಾಲೆ ಕಾಲೇಜುಗಳಿಗೂ ರಜೆ ನೀಡಲಾಗಿದೆ. ಇಂದು ಸಂಜೆ 4ಗಂಟೆಗೆ ಸಿಎಂ ಮಳೆ ಸಂಬಂಧ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ