Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕ್ಸಲರು ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರ ಬಯಸುತ್ತದೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರ ನಕ್ಸಲೀಯರ ಶರಣಾಗತಿಗೆ ಪ್ರೋತ್ಸಾಹ ನೀಡುತ್ತಿದೆ. ಶರಣಾಗತರಾದವರಿಗೆ ಪುನರ್ವಸತಿ, ಆರ್ಥಿಕ ನೆರವು ಮತ್ತು ಕೌಶಲ್ಯ ತರಬೇತಿ ಒದಗಿಸಲಾಗುವುದು. ಹಿಂಸಾಚಾರ ಬಿಟ್ಟು ಶಾಂತಿಯುತ ಪರಿಹಾರಕ್ಕಾಗಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನಕ್ಸಲರು ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರ ಬಯಸುತ್ತದೆ: ಸಿಎಂ ಸಿದ್ದರಾಮಯ್ಯ
ನಕ್ಸಲರು ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರ ಬಯಸುತ್ತದೆ: ಸಿಎಂ ಸಿದ್ದರಾಮಯ್ಯ
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: Dec 30, 2024 | 10:02 PM

ಬೆಂಗಳೂರು, ಡಿಸೆಂಬರ್​ 30: ಕರ್ನಾಟಕದ ಎಲ್ಲಾ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದ್ದಾರೆ.

ನಕ್ಸಲೀಯರು ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: ಉಡುಪಿ: ಎನ್​ಕೌಂಟರ್ ನಡೆದ ಪೀತಬೈಲ್​ನಲ್ಲಿ ತೀವ್ರ ಶೋಧ, ಶರಣಾಗತಿಗೆ ನಕ್ಸಲರಿಗೆ ಡಿಸಿಎಂ ಸೂಚನೆ

ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ.

ಹಿಂಸೆ, ಸಾವು-ನೋವು

ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ. ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ ಇತರರ ಜೀವಹಾನಿಗೂ ಕಾರಣವಾಗುತ್ತಾರೆ ಎಂದಿದ್ದಾರೆ.

ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ. ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡಿದ್ದಾರೆ.

ಸರ್ಕಾರದ ಭರವಸೆ 

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ, ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಲಾಗಿದೆ.

ಇದನ್ನೂ ಓದಿ: ನಕ್ಸಲ್​ ವಿಕ್ರಂಗೌಡ ಎನ್​ಕೌಂಟರ್​ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಜಿಪಿ ಪ್ರಣಬ್ ಮೊಹಂತಿ

ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ