ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಕರವೇ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ?

ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಆಗ್ರಹಿಸಿ ಇಂದು (ಡಿ.27) ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕೋಲಾರ(Kolar)ದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah)ನವರು, ಕಾನೂನು ಕೈಗೆ ತೆಗೆದುಕೊಂಡರೆ ಅಂಥವರ ವಿರುದ್ಧಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರಂತೆ.

ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಕರವೇ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ?
ಸಿದ್ದರಾಮಯ್ಯ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 27, 2023 | 6:25 PM

ಬೆಂಗಳೂರು, ಡಿ.27: ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಆಗ್ರಹಿಸಿ ಇಂದು (ಡಿ.27) ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕೋಲಾರ(Kolar)ದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah)ನವರು ‘ನಾರಾಯಣಗೌಡ ಬಣದವರು ಕನ್ನಡ ನಾಮಫಲಕ ಹಾಕುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ಕಾನೂನು ಕೈಗೆ ತೆಗೆದುಕೊಂಡರೆ ಅಂಥವರ ವಿರುದ್ಧಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮಾತನಾಡಿ ‘ ಯಾವುದೇ ಹೋರಾಟಗಾರರು ಕಾನೂನು ಕೈಗೆತ್ತಿಕೊಳ್ಳುವುದು ಬೇಡ. ಪ್ರತಿಭಟನಾಕಾರರು ಮತ್ತೊಬ್ಬರಿಗೆ ತೊಂದರೆ ನೀಡಬಾರದು ಎಂದರು. ಕಡ್ಡಾಯ ಕನ್ನಡ ನಾಮ ಫಲಕ ಹಾಕಲು, ಕಾನೂನು ತರಲು ಅಧಿವೇಶನದಲ್ಲಿ ಬಿಲ್ ಪಾಸ್ ಮಾಡಿದ್ದೇವೆ. ಕನ್ನಡ ಪರ ಸಂಘಟನೆಗಳಂತೆ ನಮ್ಮ ಇಲಾಖೆ ಕೆಲಸ ಮಾಡಲಿದೆ. ಇಲ್ಲಿ ಬಂದವರಿಗೆ ಕನ್ನಡ ಕಲಿಸಬೇಕು. ಇದಕ್ಕೋಸ್ಕರ ಕಾನೂನು ಮಾಡಿದ್ರೆ ಪಾಲಿಸುತ್ತಾರೆ. ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಮಹಿಷಿ ವರದಿ ಜಾರಿಗೆ ಈಗಾಗಲೇ ಮೂರು ಸಭೆಗಳನ್ನು ನಡೆಸಿದ್ದೇವೆ ಎಂದು ಬೆಂಗಳೂರಿನಲ್ಲಿ ಹೇಳಿದರು.

ಇದನ್ನೂ ಓದಿ:ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ‌ ಕಡ್ಡಾಯ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ-ಶ್ರೀನಿವಾಸ್​ ಪೂಜಾರಿ

ಪರಿಷತ್ ವಿಪಕ್ಷ ನಾಯಕ ಶ್ರೀನಿವಾಸ್​​ ಪೂಜಾರಿ ಮಾತನಾಡಿ ‘ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಕರವೇ ಜನಜಾಗೃತಿ ಮಾಡುತ್ತಿದ್ದು, ಯಾವುದೇ ಹಿಂಸಾತ್ಮಕ ಕೃತ್ಯಗಳಿಗೆ ಅವಕಾಶ ಕೊಡಬಾರದು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ರಾಜ್ಯ ಸರ್ಕಾರ ಕನ್ನಡ ಫಲಕ ಹಾಕಿಸುವ ಕೆಲಸ ಮಾಡಬೇಕು ಎಂದರು.

ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಧರಣಿ

ಬೆಂಗಳೂರಿನ ಮಾಲ್ ಆಫ್ ಏಷ್ಯಾ ಬಳಿ ಕರವೇ ಕಾರ್ಯಕರ್ತರು ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾಲ್​ನ ಹಿಂಬದಿ ಗೇಟ್​ನಿಂದ ಒಳಗೆ ನುಗ್ಗಲು ಪ್ರಯತ್ನಿಸಿದರು. ಈ ಹಿನ್ನಲೆ ಎಚ್ಚೆತ್ತ ಪೊಲೀಸರು ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ.

ಫೆಬ್ರವರಿ 28ರೊಳಗೆ ಮಾಡ್ತೇವೆ ಎಂದ ಮಾಲ್ ಆಫ್ ಏಷ್ಯಾ ಆಡಳಿತ ಮಂಡಳಿ

ಈ ಕುರಿತು ಮಾತನಾಡಿದ ಮಾಲ್ ಆಫ್ ಏಷ್ಯಾ ಆಡಳಿತ ಮಂಡಳಿಯು ‘ನಾವು ಪಾಲಿಕೆ ಆದೇಶ ಕೊಟ್ಟಿರುವ ಹಾಗೇ ಫೆಬ್ರವರಿ 28ರೊಳಗೆ ಚೇಂಜ್​ ಮಾಡುತ್ತೇವೆ. ಕಮಿಷನರ್ ಅವರ ಹತ್ತಿರ ಟೈಮ್ ತಗೊಂಡಿದ್ದೇವೆ.‘ ಅಷ್ಟರಲ್ಲಿ ಮಾಡಿಸುತ್ತೇವೆ ಎಂದು ಉಡಾಫೆ ಉತ್ತರ ನೀಡಿದ್ದಾರೆ.60% ರೂಲ್ಸ್ ನಂತೆ ಬೋರ್ಡ್ ಹಾಕುತ್ತೇವೆ. ಇಲ್ಲಿ ಕನ್ನಡದವರು ಇದ್ದೇವೆ, ಕನ್ನಡದವರಿಗೇ ಕೆಲಸ ಕೊಟ್ಟಿದ್ದೇವೆ. ನಮಗೆ ಮೇಲಗಡೆಯಿಂದ ಆದೇಶ ಬರಬೇಕಿತ್ತು. ಈಗ ಅನುಮತಿ ಕೊಟ್ಟಿದ್ದಾರೆ. ಆದಷ್ಟು ಬೇಗ ಹಾಕುತ್ತೇವೆ ಎಂದು ಆಡಳಿತ ಮಂಡಳಿ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ