AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ 2,454 ವಿವಿಧ ಹಂತದ ಪೊಲೀಸ್ ಹುದ್ದೆ ಭರ್ತಿ ಮಾಡ್ತೇವೆ; ಸಿಎಂ ಸಿದ್ದರಾಮಯ್ಯ

ನಿಮ್ಮ ವ್ಯಾಪ್ತಿಗಳಲ್ಲಿ ಅಪರಾಧ ನಿಯಂತ್ರಣ ಆಗದಿದ್ರೆ ಡಿಸಿಪಿ, ಎಸ್​​ಪಿ ಅವರೇ ನೇರ ಹೊಣೆಯಾಗಲಿದ್ದಾರೆ. ಒಳ್ಳೆ ಕೆಲಸ ಮಾಡುವ ಅಧಿಕಾರಿಗಳಿಗೆ ಸಹಕಾರ, ಪ್ರೋತ್ಸಾಹ ನಮ್ಮ ಸರ್ಕಾರ ನೀಡುತ್ತದೆ. ಕರ್ತವ್ಯಲೋಪ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶೀಘ್ರವೇ 2,454 ವಿವಿಧ ಹಂತದ ಪೊಲೀಸ್ ಹುದ್ದೆ ಭರ್ತಿ ಮಾಡ್ತೇವೆ; ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 15, 2023 | 5:04 PM

Share

ಬೆಂಗಳೂರು, ಸೆ.15: ಪೊಲೀಸರು ಜನರ ನಂಬಿಕೆ, ವಿಶ್ವಾಸಗಳಿಸಿ ಕೆಲಸ ಮಾಡಬೇಕು. ಅದಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಹೇಳಿದರು. ಬೆಂಗಳೂರಿನ ಪೊಲೀಸ್ (Police) ಪ್ರಧಾನ ಕಚೇರಿಯಲ್ಲಿ ನಡೆದ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು ‘ ಶೀಘ್ರವೇ 2,454 ವಿವಿಧ ಹಂತದ ಪೊಲೀಸ್ ಹುದ್ದೆ ಭರ್ತಿ ಮಾಡುತ್ತೇವೆ ಎನ್ನುವ ಮೂಲಕ ಪೊಲೀಸ್​ ಆಗುವ ಆಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇದರ ಜೊತೆಗೆ ಹೊಸದಾಗಿ 5 ಸಂಚಾರಿ ಠಾಣೆ, 6 ಮಹಿಳಾ ಠಾಣೆ ತೆರೆಯಲಾಗುವುದು ಎಂದಿದ್ದಾರೆ.

ಅಪರಾಧ ನಿಯಂತ್ರಣ ಆಗದಿದ್ರೆ ಡಿಸಿಪಿ, ಎಸ್​​ಪಿ ಹೊಣೆ

ನಿಮ್ಮ ವ್ಯಾಪ್ತಿಗಳಲ್ಲಿ ಅಪರಾಧ ನಿಯಂತ್ರಣ ಆಗದಿದ್ರೆ ಡಿಸಿಪಿ, ಎಸ್​​ಪಿ ಅವರೇ ನೇರ ಹೊಣೆಯಾಗಲಿದ್ದಾರೆ. ಒಳ್ಳೆ ಕೆಲಸ ಮಾಡುವ ಅಧಿಕಾರಿಗಳಿಗೆ ಸಹಕಾರ, ಪ್ರೋತ್ಸಾಹ ನಮ್ಮ ಸರ್ಕಾರ ನೀಡುತ್ತದೆ. ಕರ್ತವ್ಯಲೋಪ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು. ಇನ್ನು ಇದೇ ವೇಳೆ ಡ್ರಗ್ಸ್​​ನಿಂದ ಯುವ ಸಮುದಾಯ ಹಾಳಾಗುತ್ತಿದೆ. ಡ್ರಗ್ಸ್​​ ನಿರ್ಮೂಲನೆ ಒಂದು ಅಭಿಯಾನದ ರೀತಿಯಲ್ಲಿ ಆಗಬೇಕು. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡಬಾರದು ಎಂದರು.

ಇದನ್ನೂ ಓದಿ:ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ, ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು ಎಂದ ಸಿಎಂ ಸಿದ್ದರಾಮಯ್ಯ

ಹೊಸ ವಾಹನಗಳ ಖರೀದಿಗೆ ಪೊಲೀಸ್​ ಇಲಾಖೆಗೆ 100 ಕೋಟಿ ರೂ.

ಹೌದು, ಪೊಲೀಸ್​ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಸಿಎಂ ಬಂಪರ್​ ಕೊಡುಗೆ ನೀಡಿದ್ದಾರೆ. ಹೊಸ ವಾಹನಗಳ ಖರೀದಿಗೆ ಪೊಲೀಸ್​ ಇಲಾಖೆಗೆ 100 ಕೋಟಿ ರೂಪಾಯಿಗೆ ಮುಂದಿನ ಕ್ಯಾಬಿನೆಟ್​ನಲ್ಲಿ ಅನುದಾನಕ್ಕೆ ಅನುಮೋದನೆ ನೀಡಲಾಗುವುದು ಎಂದಿದ್ದಾರೆ. ಪೊಲೀಸ್​ ಸಿಬ್ಬಂದಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ನೈತಿಕ ಪೊಲೀಸ್​ಗಿರಿ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More