ಆಯಾ ವರ್ಷವೇ ಪ್ರಶಸ್ತಿ ನೀಡಿ ಗೌರವಿಸಬೇಕು- ಸಿಎಂ ಸಿದ್ದರಾಮಯ್ಯ
ವರ್ಷಗಳ ಬಳಿಕ ಕನ್ನಡ ಸಂಸ್ಕೃತಿ ಇಲಾಖೆಯು ತನ್ನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಿದ್ದು, ಅದರಲ್ಲಿ 21 ವಿಭಾಗಗಳಲ್ಲಿ ಸಾಧಕರ ಪಟ್ಟಿ ಬಿಡುಗಡೆಗೊಳಿಸಿತ್ತು. ಜೊತೆಗೆ ಈ ಹಿಂದೆ ಘೋಷಣೆ ಮಾಡಲಾಗಿದ್ದ, 2018-19, 2020-21, 2021-22 ಹಾಗೂ 2022-23ನೇ ಸಾಲಿನ ಪ್ರಶಸ್ತಿಗಳು ನಾನಾ ಕಾರಣಗಳಿಗಾಗಿ ವಿತರಣೆ ಆಗಿರಲಿಲ್ಲ. ವಿತರಣೆ ಆಗದೇ ಇರುವ 31 ಪ್ರಶಸ್ತಿಗಳು ಸೇರಿದಂತೆ ಒಟ್ಟು 75 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು, ಜ.31: ಪ್ರಶಸ್ತಿ ನೀಡಿಕೆ ಮುಂದೂಡಬಾರದು, ಆಯಾ ವರ್ಷವೇ ನೀಡಿ ಗೌರವಿಸಬೇಕು ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು ‘ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ ನಾವು ಮೂಗು ತೀರಿಸುವುದಿಲ್ಲ. ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ ಎಂದರು.
4 ವರ್ಷಗಳ ಬಳಿಕ ಕನ್ನಡ ಸಂಸ್ಕೃತಿ ಇಲಾಖೆಯು ತನ್ನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಿದ್ದು, ಅದರಲ್ಲಿ 21 ವಿಭಾಗಗಳಲ್ಲಿ ಸಾಧಕರ ಪಟ್ಟಿ ಬಿಡುಗಡೆಗೊಳಿಸಿತ್ತು. ನಾ ಡಿಸೋಜಾ, ಆನಂದ ತೆಲ್ತುಂಬಡೆ, ಧಾರವಾಡದ ಡಾ. ಎನ್.ಜಿ. ಮಹದೇವಪ್ಪ ಸೇರಿ 75 ಸಾಧನಕರು ಆಯ್ಕೆಯಾಗಿದ್ದಾರೆ. ಜೊತೆಗೆ ಈ ಹಿಂದೆ ಘೋಷಣೆ ಮಾಡಲಾಗಿದ್ದ, 2018-19, 2020-21, 2021-22 ಹಾಗೂ 2022-23ನೇ ಸಾಲಿನ ಪ್ರಶಸ್ತಿಗಳು ನಾನಾ ಕಾರಣಗಳಿಗಾಗಿ ವಿತರಣೆ ಆಗಿರಲಿಲ್ಲ. ವಿತರಣೆ ಆಗದೇ ಇರುವ 31 ಪ್ರಶಸ್ತಿಗಳು ಸೇರಿದಂತೆ ಒಟ್ಟು 75 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದನ್ನೂ ಓದಿ:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ-ರಾಜ್ಯ ಪ್ರಶಸ್ತಿ ಪ್ರಕಟ: ಇಲ್ಲಿದೆ ವಿವರ
ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ-ಸಿಎಂ
ಇನ್ನು ನಮ್ಮ ಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ. ಪ್ರಶಸ್ತಿಗಳ ಆಯ್ಕೆ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿಬಿಡುತ್ತೇನೆ. ನಮ್ಮ ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ ಎಂದು ಹೇಳಿದರು.
ಬಸವಣ್ಣನವರು ಮೌಡ್ಯ ಮುಕ್ತ, ಜಾತಿ ಮುಕ್ತ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಅದಕ್ಕೆ ದೇಹವೇ ದೇಗುಲ ಎಂದು ವಚನಕಾರರು ಪ್ರತಿಪಾದಿಸಿದ್ದಾರೆ. ಆದರೆ, ಕೆಲವರು ದೇವಸ್ಥಾನದಲ್ಲಿ ಮಾತ್ರ ದೇವರಿದ್ದಾನೆ ಎಂಬುವ ನಂಬಿಕೆಯಿಂದ ಹೋಗುತ್ತಾರೆ. ಅವರ ನಂಬಿಕೆಯನ್ನೂ ಗೌರವಿಸುತ್ತೇವೆ, ದೇವಸ್ಥಾನಕ್ಕೆ ಹೋಗುವವರು ಅವರ ಇಷ್ಟದ ಉಡುಪು ಧರಿಸಿ ಹೋಗಬಹುದು. ಈ ವಿಚಾರದಲ್ಲೂ ನಮ್ಮದೇನೂ ಅಭ್ಯಂತರ ಇಲ್ಲ. ದೇವರು, ಧರ್ಮದ ಬಗ್ಗೆ ಯಾರ ನಂಬಿಕೆ ಏನೇ ಇದ್ದರೂ ಎಲ್ಲರೂ ಮೊದಲು ಮನುಷ್ಯರಾಗಬೇಕು. ಮನುಷ್ಯ ಮನುಷ್ಯರನ್ನು ದ್ವೇಷಿಸಬಾರದು, ಇದೇ ಅತ್ಯುನ್ನತ ಮೌಲ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ