AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ಧತಿ ಇರಕೂಡದು; ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಗುರುತಿಸಿರುವ ಮಲ ಹೊರುವವರಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ‘ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ಧತಿ(Manual scavenging) ಇರಕೂಡದು, ಯಾರಾದರೂ ಈ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ಧತಿ ಇರಕೂಡದು; ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jan 31, 2024 | 4:30 PM

Share

ಬೆಂಗಳೂರು ಜ.31: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ಧತಿ(Manual scavenging) ಇರಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಎಚ್ಚರಿಕೆ ನೀಡಿದರು.‌ ರಾಜ್ಯದಲ್ಲಿ ಗುರುತಿಸಿರುವ ಮಲ ಹೊರುವವರಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶವನ್ನು ಉದ್ಘಾಟಿಸಿ, ತಲಾ 40 ಸಾವಿರ ರೂ ಸಹಾಯಧನ ವಿತರಿಸಿ ಮಾತನಾಡಿದ ಅವರು ‘ಯಾರಾದರೂ ಈ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17 ಕ್ಕೆ ಏರಿಸಿದ್ದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ಧತಿಗೆ ಅವಕಾಶವೇ ಇಲ್ಲ. ಯಾರಾದರೂ ಈ ಕೆಲಸ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ವರಿಸಿದರು.

ಇದನ್ನೂ ಓದಿ:ಮಲ ಹೊರುವ ಪದ್ಧತಿ ನಿಷೇಧದ ಕಟ್ಟುನಿಟ್ಟಿನ ಪಾಲನೆಗೆ ಹೈಕೋರ್ಟ್ ತಾಕೀತು

ಸಮಾವೇಶದಲ್ಲಿ 4000 ಕ್ಕೂ ಹೆಚ್ಚು ಸಫಾಯಿ ಕರ್ಮಚಾರಿಗಳಿಗೆ ನಗದು ಸಹಾಯಧನ ವಿತರಣೆ

ಸಫಾಯಿ ಕರ್ಮಚಾರಿಗಳು ಮನೆ ಕಟ್ಟಿಕೊಳ್ಳಲು 7.5 ಲಕ್ಷ ನೆರವು ನೀಡುವ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು ನಮ್ಮ ಸರ್ಕಾರವೇ. ನಾನು ಮುಖ್ಯಮಂತ್ರಿಯಾಗಿ‌ ಈ ಕಾರ್ಯಕ್ರಮಗಳನ್ನು ಜಾರಿ‌ ಮಾಡಿದೆ. ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ. ಆದ್ದರಿಂದ ಸಂವಿಧಾನ ವಿರೋಧಿಗಳು ನಮ್ಮ ವಿರೋಧಿಗಳು ಎನ್ನುವುದನ್ನು ನಾವು-ನೀವು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದ ವಿರೋಧಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಿ ಎಂದು ಕರೆ ನೀಡಿದರು. ಇನ್ನು ಇದೇ ವೇಳೆ ಸಮಾವೇಶದಲ್ಲಿ 4000 ಕ್ಕೂ ಹೆಚ್ಚು ಸಫಾಯಿ ಕರ್ಮಚಾರಿಗಳಿಗೆ ನಗದು ಸಹಾಯಧನ ವಿತರಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಮಳವಳ್ಳಿ ಶಾಸಕ ನರೇಂದ್ರಸ್ವಾಮಿ, ಮಾಯ್ಕೊಂಡ ಶಾಸಕರಾದ ಬಸಂತಪ್ಪ , ನೆಲಮಂಗಲ ಶಾಸಕರಾದ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು