ರಾಜಕೀಯವಾಗಿ ನನ್ನನ್ನು ಮುಗಿಸಿಬಿಟ್ರೆ, ಇಡೀ ಕಾಂಗ್ರೆಸ್​ ಪಕ್ಷವನ್ನೇ ಮುಗಿಸಬಹುದು ಎಂಬ ಭ್ರಮೆಯಲ್ಲಿದ್ದಾರೆ – ಸಿದ್ದರಾಮಯ್ಯ

ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಿದ್ರೆ, ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಹಾಗೂ ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನನಗೆ ಮಸಿ ಬಳಿಯಬೇಕು ಅಂತಾ ಈ ರೀತಿ ಆರೋಪ ಮಾಡ್ತಿದ್ದಾರೆ ಎಂದರು.

ರಾಜಕೀಯವಾಗಿ ನನ್ನನ್ನು ಮುಗಿಸಿಬಿಟ್ರೆ, ಇಡೀ ಕಾಂಗ್ರೆಸ್​ ಪಕ್ಷವನ್ನೇ ಮುಗಿಸಬಹುದು ಎಂಬ ಭ್ರಮೆಯಲ್ಲಿದ್ದಾರೆ - ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
| Updated By: ಆಯೇಷಾ ಬಾನು

Updated on:Aug 19, 2024 | 2:11 PM

ಬೆಂಗಳೂರು, ಆಗಸ್ಟ್​.19: ನಾನು ಯಾವುದೇ ತಪ್ಪು ಮಾಡಿಲ್ಲ, ಮುಂದೆ ಮಾಡುವುದಿಲ್ಲ. ರಾಜಕೀಯ ದುರುದ್ದೇಶದಿಂದ ಇದನೆಲ್ಲ ಮಾಡ್ತಿದ್ದಾರೆ. ರಾಜಕೀಯವಾಗಿ ನಾವು ಎದುರಿಸುತ್ತೇವೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ರೆ, ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​​ ನೀಡುತ್ತಿದ್ದಂತೆ ಬಿಜೆಪಿ ಸಿಎಂ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಮತ್ತೊಂದೆಡೆ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಿದ್ರೆ, ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ತಿಳಿಸಿದರು. ಇನ್ನು ಇದದೇ ವೇಳೆ ಮಾನಸಿಕವಾಗಿ ನೀವು ಡಲ್​ ಆಗಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಡಲ್​ ಆಗಿಲ್ಲ, ಇನ್ನೂ ಸ್ಟ್ರಾಂಗ್ ಆಗಿದ್ದೇನೆ ಎಂದರು.

ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ; ಜಮೀರ್​

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದ ಸಿದ್ದರಾಮಯ್ಯ

ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇವೆ. ಪ್ರಾಸಿಕ್ಯೂಷನ್​ಗೆ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ಬೆಂಗಳೂರಿಗೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬರುತ್ತಿದ್ದಾರೆ. ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸ ಇದೆ. 40 ವರ್ಷದ ರಾಜಕೀಯ ಜೀವನದಲ್ಲಿ ಯಾವ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ನಾನು ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ಮಸಿ ಬಳಿಯಬೇಕು ಅಂತಾ ಈ ರೀತಿ ಆರೋಪ ಮಾಡ್ತಿದ್ದಾರೆ. ರಾಜಕೀಯ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇನ್ನು ಇದೇ ವೇಳೆ ಸಿಎಂ ಸಿದ್ದರಾಮಯ್ಯ, ಆ.23ರಂದು‌ ದೆಹಲಿ ಪ್ರವಾಸ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ದೆಹಲಿಗೆ ಹೊಗ್ತಿದ್ದೀನಿ. ಖರ್ಗೆಯವರು ಬೆಂಗಳೂರಿಗೆ ಬಂದಿದ್ದರು, ಮಾತನಾಡಿದ್ದೀನಿ ಎಂದರು. ನಾನು ಬಡವರ ಪರ ಇರೋದಕ್ಕೆ ಬಿಜೆಪಿ ಅವರಿಗೆ ಭಯ. ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೀನಿ ಅದಕ್ಕೆ ಅವರಿಗೆ ಭಯ. ಸಿದ್ದರಾಮಯ್ಯನ ರಾಜಕೀಯವಾಗಿ ಮುಗಿಸಿದ್ರೆ, ಕಾಂಗ್ರೆಸ್ಸನ್ನೆ ಮುಗಿಸಿದ್ವಿ ಅನ್ನೋ ಭ್ರಮೆಯಲ್ಲಿದ್ದಾರೆ. ಅವರ ಭ್ರಮೆ ಈಡೇರಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:01 pm, Mon, 19 August 24

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ