ಮೋದಿ ಅವರೇ ನೀವು ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ಕೇಂದ್ರದ ವಿರುದ್ಧ ಸಿಎಂ ಗರಂ

ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಕೇಂದ್ರ ಸರ್ಕಾರ ನಯಾಪೈಸೆ ಪರಿಹಾರ ಬಿಡುಗಡೆಮಾಡಿಲ್ಲ. ಮೋದಿ ಅವರೇ ಜಗತ್ತಿನ ದುಃಖಕ್ಕೆಲ್ಲ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ ಎಂದು ಎಕ್ಸ್​ನಲ್ಲಿ ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಮೋದಿ ಅವರೇ ನೀವು ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ಕೇಂದ್ರದ ವಿರುದ್ಧ ಸಿಎಂ ಗರಂ
ಸಿಎಂ ಸಿದ್ದರಾಮಯ್ಯ, ಪಿಎಂ ನರೇಂದ್ರ ಮೋದಿ
Follow us
TV9 Web
| Updated By: ಆಯೇಷಾ ಬಾನು

Updated on: Oct 27, 2023 | 2:17 PM

ಬೆಂಗಳೂರು, ಅ.27: ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಕೇಂದ್ರ ಸರ್ಕಾರ ನಯಾಪೈಸೆ ಪರಿಹಾರ ಬಿಡುಗಡೆಮಾಡಿಲ್ಲ. ಮೋದಿ (Narendra Modi) ಅವರೇ ಜಗತ್ತಿನ ದುಃಖಕ್ಕೆಲ್ಲ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ ಎಂದು ಎಕ್ಸ್​ನಲ್ಲಿ ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಮಳೆ ಕೈ ಕೊಟ್ಟ ಪರಿಣಾಮ ಬರದ ಛಾಯೆ ಆವರಿಸಿದೆ. ಹೀಗಾಗಿ ಕೆಲವು ಜಿಲ್ಲೆಗಳನ್ನು ಬರ ಪೀಡಿತವೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇತ್ತೀಚೆಗೆ ಹಲವು ಜಿಲ್ಲೆಗಳಲ್ಲಿ ಬರಗಾಲದಂತಹ ಪರಿಸ್ಥಿತಿ ಹಿನ್ನೆಲೆ 4860 ರೂ.ಕೋಟಿ ಪರಿಹಾರಕ್ಕಾಗಿ ಕೆಂದ್ರಕ್ಕೆ ಸಿಎಂ ಮನವಿ ಮಾಡಿದ್ದರು. ಆದರೆ ರಾಜ್ಯಕ್ಕೆ ₹ 30,000 ಕೋಟಿಗಿಂತ ಹೆಚ್ಚು ನಷ್ಟುವಾಗಿದೆ ಎಂದು ಕೆಲವು ಖಾಸಗಿ ಮಾಧ್ಯಮಗಳು ವರದಿ ಮಾಡಿವೆ. ಸಿಎಂ ಸಿದ್ದರಾಮಯ್ಯನವರು ಬರ ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಸಿಎಂ ಸಿಟ್ಟಾಗಿದ್ದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಾಜಕೀಯದಲ್ಲಿ ವಿಲನ್ ಅಂತ ಇದ್ದರೆ ಅದು ಕುಮಾರಸ್ವಾಮಿ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ. ಪ್ರಧಾನಿ ಮೋದಿ ಅವರೇ, ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಈವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ, ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ’ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಎಂದು ಕಿಡಿಕಾರಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು