ಬೆಂಗಳೂರು, ಅ.27: ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಕೇಂದ್ರ ಸರ್ಕಾರ ನಯಾಪೈಸೆ ಪರಿಹಾರ ಬಿಡುಗಡೆಮಾಡಿಲ್ಲ. ಮೋದಿ (Narendra Modi) ಅವರೇ ಜಗತ್ತಿನ ದುಃಖಕ್ಕೆಲ್ಲ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ ಎಂದು ಎಕ್ಸ್ನಲ್ಲಿ ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕದಲ್ಲಿ ಮಳೆ ಕೈ ಕೊಟ್ಟ ಪರಿಣಾಮ ಬರದ ಛಾಯೆ ಆವರಿಸಿದೆ. ಹೀಗಾಗಿ ಕೆಲವು ಜಿಲ್ಲೆಗಳನ್ನು ಬರ ಪೀಡಿತವೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇತ್ತೀಚೆಗೆ ಹಲವು ಜಿಲ್ಲೆಗಳಲ್ಲಿ ಬರಗಾಲದಂತಹ ಪರಿಸ್ಥಿತಿ ಹಿನ್ನೆಲೆ 4860 ರೂ.ಕೋಟಿ ಪರಿಹಾರಕ್ಕಾಗಿ ಕೆಂದ್ರಕ್ಕೆ ಸಿಎಂ ಮನವಿ ಮಾಡಿದ್ದರು. ಆದರೆ ರಾಜ್ಯಕ್ಕೆ ₹ 30,000 ಕೋಟಿಗಿಂತ ಹೆಚ್ಚು ನಷ್ಟುವಾಗಿದೆ ಎಂದು ಕೆಲವು ಖಾಸಗಿ ಮಾಧ್ಯಮಗಳು ವರದಿ ಮಾಡಿವೆ. ಸಿಎಂ ಸಿದ್ದರಾಮಯ್ಯನವರು ಬರ ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಸಿಎಂ ಸಿಟ್ಟಾಗಿದ್ದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ.
ಪ್ರಧಾನಿ @narendramodi ಅವರೇ,
ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ?ನಿಮ್ಮ ನೇತೃತ್ವದ @BJP4India ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?
ಇದು ನನ್ನ… pic.twitter.com/WmVs5zpHD4— Siddaramaiah (@siddaramaiah) October 27, 2023
ಇದನ್ನೂ ಓದಿ: ರಾಜಕೀಯದಲ್ಲಿ ವಿಲನ್ ಅಂತ ಇದ್ದರೆ ಅದು ಕುಮಾರಸ್ವಾಮಿ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ. ಪ್ರಧಾನಿ ಮೋದಿ ಅವರೇ, ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
The then BJP ruled states like Maharashtra, Gujarat, and Rajasthan received a downpour of relief funds, while Karnataka barely saw a drizzle.
The persistent neglect is evident. It’s high time to ensure justice for Karnataka. #WhyNoLoveForKarnataka?#ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ… pic.twitter.com/UorLKJFrsW
— Siddaramaiah (@siddaramaiah) October 27, 2023
ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಈವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ, ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ’ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಎಂದು ಕಿಡಿಕಾರಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ