ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರವೇ ಭರಿಸಲಿದೆ ಚಿಕಿತ್ಸಾ ವೆಚ್ಚ

ಸಿಎಂ ಸಿದ್ದರಾಮಯ್ಯನವರು ಬ್ರೂಕ್​ ಫೀಲ್ಡ್​ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಸರ್ಕಾರವೇ ಗಾಯಾಳುಗಳು ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ತಿಳಿಸಿದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರವೇ ಭರಿಸಲಿದೆ ಚಿಕಿತ್ಸಾ ವೆಚ್ಚ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ
Follow us
TV9 Web
| Updated By: ಆಯೇಷಾ ಬಾನು

Updated on: Mar 02, 2024 | 1:15 PM

ಬೆಂಗಳೂರು, ಮಾರ್ಚ್.02: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ (Bengaluru Rameshwaram Cafe) ನಡೆದ ಬಾಂಬ್ ಸ್ಫೋಟ ಪ್ರಕರಣದ ಗಾಯಾಳುಗಳಿರುವ ಬ್ರೂಕ್​ ಫೀಲ್ಡ್​ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

ಸಿಎಂ ಆಗಮನ ಹಿನ್ನೆಲೆ ಆಸ್ಪತ್ರೆಗಳ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡ್ತಿರೋ ವೈದ್ಯ ರವಿಬಾಬು ರಿಪೋರ್ಟ್ ಕೈಲಿಡಿದು ಸಿಎಂಗೆ ಮಾಹಿತಿ ನೀಡಿದ್ದಾರೆ. ಇನ್ನು ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಬ್ರೂಕ್​ ಫೀಲ್ಡ್​ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇನ್ನು ಎರಡು ದಿನದಲ್ಲಿ ಆರೋಪಿ ಪತ್ತೆ ಹಚ್ಚಿ ಬಂಧಿಸುತ್ತೇವೆ. ಆರೋಪಿ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ತನಿಖೆಯಲ್ಲಿ ಏಕೆ, ಯಾರು ಮಾಡಿದ್ದಾರೆ ಎಂದು ಗೊತ್ತಾಗಲಿದೆ. ಕುಕ್ಕರ್​ ಸ್ಫೋಟ ಪ್ರಕರಣ​​, ಈ ಕೇಸ್​ಗೂ ಸಾಮ್ಯತೆ ಇದೆಯಾ ಎಂದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ -ಪ್ರಹ್ಲಾದ್ ಜೋಶಿ

ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲಿರುವ ಸರ್ಕಾರ

ಶಂಕಿತ ಹೋಗಿರೋದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಸ್ಕ್ ಹಾಕಿಕೊಂಡಿದ್ದಾನೆ, ಬಸ್ ನಲ್ಲಿ ಬಂದಿರೋ ಸುಳಿವು ಸಿಕ್ಕಿದೆ. ಪೊಲೀಸರು ಆದಷ್ಟು ಬೇಗ ಶಂಕಿತನನ್ನ ಪತ್ತೆ ಹಚ್ಚುತ್ತಾರೆ. ಇನ್ನೂ ಯಾರು ಅಂತಾ ಗೊತ್ತಾಗಲಿಲ್ಲ ಯಾವ ಸಂಘಟನೆ ಅಂತಾ ತನಿಖೆ ಆಗುತ್ತೆ. ಬಿಜೆಪಿ ಅವರ ಕಾಲದಲ್ಲೂ ಭಧ್ರತೆ ಫೆಲ್ಯೂರ್ ಆಗಿಲ್ವಾ? ಅವರ ಕಾಲದಲ್ಲೂ ಬ್ಲಾಸ್ಟ್ ಆಗಿದೆ ಅವರ ಕಾಲದಲ್ಲೂ ಫೇಲ್ಯೂರ್ ಆಗಿದೆ. ಆಸ್ಪತ್ರೆಯ ಎಲ್ಲಾ ಖರ್ಚು ಸರ್ಕಾರ ನೋಡಿಕೊಳ್ಳುತ್ತೆ. ಗಾಯಾಳುಗಳ ಆಸ್ಫತ್ರೆ ವೆಚ್ಚ ಸರ್ಕಾರ ಭರಿಸಲು ನಿರ್ಧಾರ ಮಾಡಿದೆ. ಬೆಸ್ಟ್ ಟ್ರೀಟ್ಮೆಂಟ್ ಕೊಡೋದಕ್ಕೆ ಹೇಳಿದ್ದೀನಿ. ಗಾಯಾಳುಗಳಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಸ್ವರ್ಣಾಂಬ ಎಂಬುವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಇನ್ನು ಮತ್ತೊಂದೆಡೆ ವೈದೇಹಿ ಆಸ್ಪತ್ರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನಾಲ್ವರು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವ್ಯಾ, ನಾಗಶ್ರೀ, ಶಂಕರ್, ಮೋಹನ್ ಆರೋಗ್ಯ ವಿಚಾರಿಸಿದ್ದಾರೆ.

ರಾಮೇಶ್ವರಂ ಕೆಫೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ಬಾಂಬ್ ಸ್ಫೋಟಗೊಂಡ ರಾಮೇಶ್ವರಂ ಕೆಫೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸ್ಫೋಟ ಸಂಭವಿಸಿದ ಸ್ಥಳ ಪರಿಶೀಲಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್