ಬೆಂಗಳೂರು, ಫೆ.19: ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಗಾಗಿ ಸಿಎಂ ಸಿದ್ದರಾಮಯ್ಯ (Siddaramaiah) ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಬಜೆಟ್ ಮಂಡನೆ (Karnataka Budget) ಬಳಿಕ ಎರಡು ದಿನ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಸಣ್ಣ ಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿತ್ತು ಎನ್ನಲಾಗಿದೆ. ಹೀಗಾಗಿ ವಿಶ್ರಾಂತಿ ಪಡೆಯಲು ಸದ್ಯ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಮಧ್ಯಾಹ್ನದ ನಂತರ ನಡೆಯುವ ಸದನಕ್ಕೆ ಮತ್ತೆ ಹಾಜರಾಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಕರ್ನಾಟಕ ಬಜೆಟ್ ಮಂಡನೆ ಬಳಿಕ ನಿರಂತರವಾಗಿ ಜಿಲ್ಲಾ ಪ್ರವಾಸಗಳನ್ನು ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. 3 ಗಂಟೆ 15 ನಿಮಿಷ ಸುದೀರ್ಘ ಬಜೆಟ್ ಭಾಷಣ ಮತ್ತು 2 ದಿನ ನಿರಂತರ ಜಿಲ್ಲಾ ಪ್ರವಾಸಗಳಲ್ಲಿ ಭಾಷಣ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯನವರಿಗೆ ಗಂಟಲು ನೋವುನ ಸಮಸ್ಯೆ ಎದುರಾಗಿದೆ. ಹೀಗಾಗಿ ವಿಶ್ರಾಂತಿಯ ಅವಶ್ಯಕತೆ ಇದ್ದು ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.
ಫೆಬ್ರವರಿ 16ರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದರು. ಬಳಿಕ ಎರಡು ದಿನ ನಿರಂತರ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಫೆ. 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿ ಮಂಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಬಳಿಕ ಫೆ.18ರ ಭಾನುವಾರ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿದ್ದರು. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಭಾಷಣ ಮಾಡಿದ್ದರು.
ಇದನ್ನೂ ಓದಿ: ಎಫ್ಐಆರ್ ರದ್ದು ಕೋರಿ ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್
ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್ಐಆರ್ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿದೆ. ಇದೇ ವೇಳೆ, ಮುಂದಿನ ಆದೇಶದವರೆಗೆ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರೊಂದಿಗೆ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ತುಸು ನಿರಾಳರಾಗುವಂತಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:12 pm, Mon, 19 February 24