6 ಟಿಎಂಸಿ ನೀರು ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೇಸಿಗೆ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

6 ಟಿಎಂಸಿ ನೀರು ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ, ಸಿಎಂ ಏಕನಾಥ್ ಶಿಂಧೆ
Follow us
ಗಂಗಾಧರ​ ಬ. ಸಾಬೋಜಿ
|

Updated on:May 31, 2023 | 4:17 PM

ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ (water) ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಸಿಎಂ ಸಿದ್ಧರಾಮಯ್ಯ (Cm Siddaramaiah) ಪತ್ರ ಬರೆದಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ಜನರಿಗೆ ಕುಡಿಯುವ ನೀರು ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಉಜ್ಜನಿ, ಕೋಯ್ನಾ ಡ್ಯಾಂನಿಂದ ಕೃಷ್ಣಾ ಹಾಗೂ ಭೀಮಾ ನದಿಗೆ ತಲಾ 3 ಟಿಎಂಸಿ ಅಂತೆ ಒಟ್ಟು 6 ಟಿಎಂಸಿ ನೀರು ಬಿಡುಗಡೆಗೆ ಕರ್ನಾಟಕ ಮನವಿ ಮಾಡಿದೆ.

ಮೇ ತಿಂಗಳಲ್ಲಿ 1 ಟಿಎಂಸಿ ನೀರು ಬಿಡುಗಡೆಗೆ ಪತ್ರ ಬರೆಯಲಾಗಿತ್ತು. ಆಗ ಜಲಾಶಯದಿಂದ ನೀರು ಬಿಡುಗಡೆ ಮಾಡಿದಕ್ಕೆ ಧನ್ಯವಾದಗಳು. ಈಗ ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿಗಾಗಿ ಮತ್ತೆ ನೀರು ಬಿಡುಗಡೆ ಮಾಡುವಂತೆ ಪತ್ರದ ಮೂಲಕ ಕೋರಲಾಗಿದೆ.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3,000 ಕೋಟಿ ರೂ. ಅಕ್ರಮ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ

ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರತೆ ಇನ್ನೂ ಮುಂದುವರೆದಿದೆ. ಜೊತೆಗೆ ಈ ಭಾಗದಲ್ಲಿ ಮುಂಗಾರು ಸಹ ಇನ್ನೂ ಆರಂಭವಾಗಿಲ್ಲ. ಹಾಗಾಗಿ ಮಾನವರು ಮತ್ತು ಜಾನುವಾರುಗಳ ಬಳಕೆಗಾಗಿ ನೀರಿನ ಅವಶ್ಯಕತೆಯಿದೆ. ಕುಡಿಯುವ ನೀರಿನ ಪೂರೈಕೆಗಾಗಿ ವಾರ್ನಾ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ತಕ್ಷಣ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶನ ನೀಡಬೇಕೆಂದು ಸಿಎಂ ಸಿದ್ಧರಾಮಯ್ಯ ವಿನಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:01 pm, Wed, 31 May 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ