ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 1000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಫೆಬ್ರವರಿ 13ರಂದು ಹಾವೇರಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಮನೆ ಮಾಲೀಕತ್ವ ಹಕ್ಕುಪತ್ರಗಳನ್ನು ವಿತರಿಸಲಿದೆ. ದಶಕಗಳಿಂದ ಕಾನೂನುಬದ್ಧ ಹಕ್ಕಿಲ್ಲದೆ ವಾಸಿಸುತ್ತಿದ್ದ ಕುಟುಂಬಗಳಿಗೆ ಭದ್ರತೆ ಒದಗಿಸುವುದು ಇದರ ಉದ್ದೇಶವಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಿಂದ ನಾಲ್ಕು ಲಕ್ಷ ಜನರಿಗೆ ಪ್ರಯೋಜನವಾಗಲಿದೆ.

ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ!
ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ!

Updated on: Jan 30, 2026 | 3:08 PM

ಬೆಂಗಳೂರು, ಜನವರಿ 30: ಕಾಂಗ್ರೆಸ್ (Congress) ಸರ್ಕಾರದ ಆಡಳಿತಕ್ಕೆ 1000 ದಿನಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 13ರಂದು ಹಾವೇರಿಯಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಮನೆ ಮಾಲೀಕತ್ವ ಹಕ್ಕುಪತ್ರಗಳನ್ನು ವಿತರಿಸಲು ಮುಂದಾಗಿದ್ದಾರೆ. ದಶಕಗಳಿಂದ ತಮ್ಮ ಮನೆಗಳಲ್ಲಿ ವಾಸಿಸುತ್ತಿದ್ದರೂ ಕಾನೂನುಬದ್ಧ ಹಕ್ಕುಪತ್ರವಿಲ್ಲದೆ ಬದುಕುತ್ತಿದ್ದ ಅಸಹಾಯಕ ಕುಟುಂಬಗಳಿಗೆ ಭದ್ರತೆ ಒದಗಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಕೃಷ್ಣ ಭೈ​ರೇಗೌಡ ನೇತೃತ್ವದ ಅಭಿಯಾನ

ಈ ಮಹತ್ವಾಕಾಂಕ್ಷಿ ಯೋಜನೆಗೆ ಕಳೆದ ವರ್ಷ ಮೇ ತಿಂಗಳಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಹೊಸಪೇಟೆಯಲ್ಲಿ ಚಾಲನೆ ನೀಡಿದ್ದು, 2015ರಲ್ಲಿ ಕರ್ನಾಟಕ ಪ್ರವಾಸದ ವೇಳೆ ನೀಡಿದ್ದ ಭರವಸೆಯನ್ನು ಈಡೇರಿಸಿದ್ದರು. ಆಗ 1,11,111 ಜನರಿಗೆ ಮನೆ ಹಕ್ಕುಪತ್ರ ವಿತರಿಸಲಾಗಿತ್ತು. ಪ್ರಸ್ತುತ ಈ ಅಭಿಯಾನದ ನೇತೃತ್ವವನ್ನು ಆದಾಯ ಸಚಿವ ಕೃಷ್ಣ ಭೈ​ರೇಗೌಡ ವಹಿಸಿಕೊಂಡಿದ್ದಾರೆ. ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಚಿವರ ಎಕ್ಸ್ ಪೋಸ್ಟ್ ಇಲ್ಲಿದೆ

ನಿಮ್ಮ ಮನೆಗೇ ಬರುತ್ತೆ ಹಕ್ಕುಪತ್ರ

ಗುರುವಾರ ವೀಡಿಯೋ ಸಂವಾದದ ಮೂಲಕ ಉಪ ವಿಭಾಗಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಕೃಷ್ಣ ಭೈ​ರೇಗೌಡ, ಮುಂದಿನ ಒಂದು ವಾರದಲ್ಲಿ ಎಲ್ಲ ದಾಖಲೆಗಳು ಮತ್ತು ಹಕ್ಕುಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಿದ್ದಾರೆ. ಯಾವುದೇ ಅರ್ಜಿ ಆಹ್ವಾನಿಸದೇ, ಮನೆ ಮನೆಗೆ ತೆರಳಿ ಹಕ್ಕುಪತ್ರ ವಿತರಿಸುವುದಾಗಿ ಸಚಿವ ಹೇಳಿದ್ದಾರೆಂದು ದಿ ಎಕನೊಮಿಕ್ಸ್ ಟೈಮ್ಸ್ ವರದಿ ಮಾಡಿದೆ. ಈ ಕಾರ್ಯಕ್ರಮದಿಂದ ಸುಮಾರು ನಾಲ್ಕು ಲಕ್ಷ ಜನರಿಗೆ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ.

ಹಿಂದಿನ ಬಿಜೆಪಿ ಆಡಳಿತದ ಅವಧಿಯ ಆರು ವರ್ಷಗಳಲ್ಲಿ ಕೇವಲ 1.08 ಲಕ್ಷ ಕುಟುಂಬಗಳಿಗೆ ಮಾತ್ರ ಹಕ್ಕುಪತ್ರ ವಿತರಿಸಲಾಗಿತ್ತು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ, ಈ ಯೋಜನೆಯನ್ನು ಆದಾಯ ಇಲಾಖೆ ಪ್ರಮುಖ ಅಭಿಯಾನವಾಗಿ ಕೈಗೆತ್ತಿಕೊಂಡಿದ್ದು, ಸಮಾನ ವಸತಿಗಳನ್ನು ಗುರುತಿಸಿ ಪ್ರಕ್ರಿಯೆ ಪೂರ್ಣಗೊಳಿಸಲು ಮುಂದಾಗಿದೆ. ಸರ್ಕಾರ ನೀಡುತ್ತಿರುವ ಹಕ್ಕುಪತ್ರಗಳು ಡಿಜಿಟಲ್ ರೂಪದಲ್ಲಿದ್ದು, ದಾಖಲೆ ಕಳೆದುಹೋಗುವ ಅಥವಾ ಹಾನಿಯಾಗುವ ಸಮಸ್ಯೆ ತಪ್ಪಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.