ಬೆಳ್ಳಂದೂರು, ವರ್ತೂರು ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಿಎಂ ಯಡಿಯೂರಪ್ಪ ಸೂಚನೆ
BDA: ಬಿ.ಡಿ.ಎ ಗೆ ಸೇರಿದ ವಾಣಿಜ್ಯ ಸಂಕೀರ್ಣಗಳನ್ನು ಪಿ.ಪಿ.ಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಕುರಿತು ಪರಿಶೀಲಿಸುವಂತೆ ಸೂಚಿಸಿದ ಅವರು, ಖಾಲಿ ನಿವೇಶನಗಳು, ಪ್ಲಾಟ್‍ಗಳು ಹಾಗೂ ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆಯನ್ನು ಚುರುಕುಗೊಳಿಸಿ ಪ್ರಾಧಿಕಾರದ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.
ಬೆಂಗಳೂರು: ಮಳೆಗಾಲ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಹೂಳೆತ್ತಿ ವಿಲೇವಾರಿ ಮಾಡುವ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಚಿಕ್ಕಬಾಣಾವರ, ಕೊಮ್ಮ ಘಟ್ಟ ಹಾಗೂ ರಾಮಸಂದ್ರ ಕೆರೆಗಳ ಅಭಿವೃದ್ಧಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಿದರು.
ಸಭೆಯಲ್ಲಿ ಸಿಎಂ ಯಡಿಯೂರಪ್ಪ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಕ್ಷಿಪ್ರ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು. ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಅನುಷ್ಠಾನಕ್ಕೆ ಟರ್ಕಿ ಇಸ್ರೇಲ್ ಹಾಗೂ ಸ್ವಿಸ್ ದೇಶಗಳ ಕಂಪನಿಗಳು ಆಸಕ್ತಿ ತೋರಿದ್ದು ಶೀಘ್ರವಾಗಿ ಟೆಂಡರ್ ಅಂತಿಮಗೊಳಿಸಿ. ಸಚಿವ ಸಂಪುಟದ ಅನುಮೋದನೆ ಪಡೆದು ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸಿಎಂ ಯಡಿಯೂರಪ್ಪ ತಿಳಿಸಿದರು. ನಾಡಪ್ರಭು ಕೆಂಪೇಗೌಡ ಬಡಾವಣೆ ಹಾಗೂ ಡಾ ಕೆ.ಶಿವರಾಮ ಕಾರಂತ ಬಡಾವಣೆಗಳಲ್ಲಿ ಮೂಲ ಸೌಲಭ್ಯಗಳಾದ ಒಳಚರಂಡಿ, ವಿದ್ಯುತ್ ಸಂಪರ್ಕ ರಸ್ತೆ ಮುಂತಾದ ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡುವಂತೆಯೂ ಅವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.
ಕಳೆದ ಸಾಲಿನಲ್ಲಿ ಬಿ.ಡಿ.ಎ 2066.72 ಕೋಟಿ ಆದಾಯ ಗಳಿಸಿದ್ದು, 1,332.44 ಕೋಟಿ ಹಣ ವೆಚ್ಚವಾಗಿದೆ. ಈ ಬಾರಿ 9,530 ಕೋಟಿ ಆದಾಯವನ್ನು ನಿರೀಕ್ಷಿಸಲಾಗಿದೆ. ಬಿ.ಡಿ.ಎ ಗೆ ಸೇರಿದ ವಾಣಿಜ್ಯ ಸಂಕೀರ್ಣಗಳನ್ನು ಪಿ.ಪಿ.ಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಕುರಿತು ಪರಿಶೀಲಿಸುವಂತೆ ಸೂಚಿಸಿದ ಅವರು, ಖಾಲಿ ನಿವೇಶನಗಳು, ಪ್ಲಾಟ್‍ಗಳು ಹಾಗೂ ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆಯನ್ನು ಚುರುಕುಗೊಳಿಸಿ ಪ್ರಾಧಿಕಾರದ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.
ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ 6,431 ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವುದರಿಂದ ಕಾನೂನು ವಿಭಾಗವನ್ನು ಬಲಪಡಿಸಲು ಉತ್ತಮ ವಕೀಲರನ್ನು ನೇಮಿಸಿಕೊಳ್ಳಬೇಕು. ಪ್ರಾಧಿಕಾರವು ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಗಣಕೀಕರಣ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಅವರು ಸಲಹೆ ನೀಡಿದರು. ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಲ್ಯಾಂಡ್ ಆಡಿಟ್ ಸಮೀಕ್ಷೆಯ ವರದಿಯಂತೆ ಪ್ರಾಧಿಕಾರಕ್ಕೆ ಲಭ್ಯವಿರುವ ಒಟ್ಟು ಆಸ್ತಿಯ ಕುರಿತ ಮಾಹಿತಿಯನ್ನು ಒದಗಿಸಲು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ.ರಮಣರೆಡ್ಡಿ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಬಿ.ಡಿ.ಎ. ಆಯುಕ್ತ ರಾಜೇಶ್ ಗೌಡ ಭಾಗವಹಿಸಿದ್ದರು.
How to Apply: ಯುವಜನರಿಗೆ ಬರಹದ ತರಬೇತಿ ನೀಡಲು YUVA ಯೋಜನೆ ಆರಂಭಿಸಿದ ಕೇಂದ್ರ, 50 ಸಾವಿರ ಶಿಷ್ಯವೇತನ
(CM Yeddyurappa instructs to complete dredging work of Bellandur and Vartur lakes of Bengaluru in BDA meeting)
Published On - 11:15 pm, Tue, 8 June 21