ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಹೇಗಿರಲಿದೆ ಕಾರ್ಯಕ್ರಮದ ಭದ್ರತೆ? ಪೊಲೀಸ್ ಆಯುಕ್ತರೇ ಕೊಟ್ರು ಮಾಹಿತಿ

ನಾಳೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಲೋಕಭವನಕ್ಕೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಕಾರ್ಯಕ್ರಮದ ಭದ್ರತೆ ಸಂಬಂಧ ನಗರ ಪೊಲೀಸ್​​ ಆಯುಕ್ತರು ಅಧಿಕಾರಿಗಳ ಸಭೆ ನಡೆಸಿ ಅದಾಗಲೇ ಸಲಹೆ ಮತ್ತು ಸೂಚನೆಗಲನ್ನು ನೀಡಿದ್ದಾರೆ. ಮತ್ತೊಂದೆಡೆ ಕರ್ನಾಟಕ ಲೋಕಭವನ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ಜನಸಂದಣಿ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧಾನಸೌಧ, ವಿಕಾಸಸೌಧ ಸಿಬ್ಬಂದಿಗೆ ನಾಳೆ ಮಧ್ಯಾಹ್ನ ಅರ್ಧದಿನ ರಜೆ ಘೋಷಿಸಲಾಗಿದೆ.

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಹೇಗಿರಲಿದೆ ಕಾರ್ಯಕ್ರಮದ ಭದ್ರತೆ? ಪೊಲೀಸ್ ಆಯುಕ್ತರೇ ಕೊಟ್ರು ಮಾಹಿತಿ
ಡಿಕೆಶಿ ಪದಗ್ರಹಣಕ್ಕೆ ಬಿಗಿ ಭದ್ರತೆ
Image Credit source: Tv9 Kannada

Updated on: Jun 02, 2026 | 4:04 PM

ಬೆಂಗಳೂರು, ಜೂನ್​​ 02: ಸಿಎಂ ಆಗಿ ಡಿ.ಕೆ.ಶಿವಕುಮಾರ್​ (DK Shivakumar) ಪ್ರಮಾಣವಚನ ಸ್ವೀಕಾರ ಹಿನ್ನೆಲೆ ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್​​ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್​​ ಆಯುಕ್ತ ಸೀಮಂತ್​​ ಕುಮಾರ್​​ ಸಿಂಗ್​ ಎಲ್ಲಾ ವಿಭಾಗದ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಸಂಚಾರ ವಿಭಾಗದ ಡಿಸಿಪಿಗಳ ಜೊತೆ ಸಭೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ. ಸಭೆ ಬಳಿಕ ಮಾಹಿತಿ ನೀಡಿರುವ ಪೊಲೀಸ್​​ ಆಯುಕ್ತರು, ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪವೇಶವಿರಲಿದೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಮುಖ್ಯಾಂಶಗಳು

  • ನಾಳೆ ಸಿಎಂ ಪದಗ್ರಹಣ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ
  • ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಇರಲಿದೆ ಪವೇಶ
  • ಕಾರ್ಯಕ್ರಮದಲ್ಲಿ ಭಾಗಿ ಸಾರ್ವಜನಿಕರಿಗಿಲ್ಲ ಅವಕಾಶ

ವಿವಿಧ ರೀತಿಯಲ್ಲಿ ಕಾರ್ಯಕ್ರಮಕ್ಕೆ ಪಾಸ್​ ಹಂಚಿಕೆ ಮಾಡಲಾಗಿದ್ದು, ಆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇವೆ. ಸಂಚಾರ ಮಾರ್ಗದಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದು, ರೋಡ್ ಶೋ ನಡೆಸುವುದರ ಭಗ್ಗೆ ಯಾವುದೇ ಮಾಹಿತಿ ಇಲ್ಲ. ಹೊರ ರಾಜ್ಯದಿಂದಲೂ ವಿಐಪಿಗಳು ಕಾರ್ಯಕ್ರಮಕ್ಕೆ ಬರುತ್ತಿರುವ ಹಿನ್ನೆಲೆ ಗಣ್ಯರ ಭದ್ರತೆಗೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ‌ ಎಂದು ಪೊಲೀಸ್ ಕಮಿಷನರ್​ ಸೀಮಂತ್ ಕುಮಾರ್ ಸಿಂಗ್​ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆಶಿ

ಅರ್ಧದಿನ ರಜೆ

ಕರ್ನಾಟಕ ಲೋಕಭವನ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ಜನಸಂದಣಿ ಸೇರುವ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಂಭವನೀಯತೆ ಇರುವುದರಿಂದ, ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಾಳ (ಜೂನ್​​ 03)ಮಧ್ಯಾಹ್ನ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಅಧೀನ ಕಾರ್ಯದರ್ಶಿ (ಕಾರ್ಯಕಾರಿ) ಆರ್.ಯದು ಕುಮಾರ್ ಆದೇಶಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us