ಬೆಂಗಳೂರಿನಲ್ಲಿ 3 ದಿನ ಕಂಬಳ; ಉದ್ಘಾಟನೆಗೆ ಬರಲಿದ್ದಾರೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ
ತುಳು ಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆ ಮೊಟ್ಟ ಮೊದಲು ಬಾರಿಗೆ ರಾಜಾಧಾನಿಯಲ್ಲಿ ಕಂಬಳವನ್ನ ಮಾಡಲು ತುಳುಕೂಟ ನಿರ್ಧರಿಸಿದೆ. ಸಧ್ಯ ಈ ಕಂಬಳವನ್ನ ಪ್ಯಾಲೇಸ್ ಗ್ರೌಂಡ್ ನಲ್ಲಿ ಮಾಡಲು ಜಾಗ ಗುರುತಿಸಿದ್ದು, ಈಗಾಗಲೇ ಮೈಸೂರ್ ಒಡೆಯರ್ ಜೊತೆಗೂ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇನ್ನು ನವೆಂಬರ್ ತಿಂಗಳ 24, 25, 26 ನೇ ತಾರೀಖಿನಂದು ಕಂಬಳ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಬೆಂಗಳೂರು, ಸೆ.14: ಕರಾವಳಿ ಭಾಗದ ಸಾಂಪ್ರದಾಯಿಕ ಆಟ ಕಂಬಳ(Kambala) ಈ ವರ್ಷ ಮೊಟ್ಟ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ. ಕಂಬಳ ಎಂಬ ಜನಪ್ರಿಯ ಕ್ರೀಡೆಯನ್ನು ಸಾಮಾನ್ಯವಾಗಿ ಪ್ರತಿ ವರ್ಷ ಕರಾವಳಿ ಕರ್ನಾಟಕದ ಹಳ್ಳಿಗಳಲ್ಲಿ ಚಳಿಗಾಲದ ಸಮಯದಲ್ಲಿ ನಡೆಸಲಾಗುತ್ತದೆ. ಬೆಂಗಳೂರಿನಲ್ಲಿ ನವೆಂವರ್ 24, 25, 26ಕ್ಕೆ ಒಟ್ಟು ಮೂರು ದಿನಗಳ ಕಾಲ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನ ಕಂಬಳಕ್ಕೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ(Anushka Shetty) ಅವರು ಬರಲಿದ್ದಾರೆ ಎನ್ನಲಾಗುತ್ತಿದೆ.
ರಾಜಾಧಾನಿಯಲ್ಲಿ ಮೊಟ್ಟ ಮೊದಲ ಬಾರಿಗೆ ಕಂಬಳ ನಡೆಸಲು ತಯಾರಿ ನಡೆಯುತ್ತಿದೆ. ಕಂಬಳ, ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ- ಪುಷ್ಟವಾಗಿ ಬೆಳಸಿದ ಕೋಣಗಳನ್ನ ಹಸನಾಗಿ ಹದ ಮಾಡಿ ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಈ ಕ್ರೀಡೆಯನ್ನ ಉಡುಪಿ, ದಕ್ಷಿಣ ಕನ್ನಡದಲ್ಲಿ ಹೆಚ್ಚಾಗಿ ನಡೆಸುತ್ತಾರೆ. ಸಾಮಾನ್ಯವಾಗಿ ಈ ಕಂಬಳವನ್ನ ರೈತಾಪಿ ಜನರು ಭತ್ತದ ಕೊಯಿಲಿನ ನಂತರದಲ್ಲಿ ಮನರಂಜನೆಗೋಸ್ಕರ ಈ ಕ್ರೀಡೆಯನ್ನ ಏರ್ಪಡಿಸಲಾಗುತ್ತಿತ್ತು. ಆದ್ರೆ ಈ ವರ್ಷ ತುಳು ಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಕಂಬಳ ಮಾಡಲು ಸಿದ್ದತೆ ನಡೆಯುತ್ತಿದೆ.
ಇದನ್ನೂ ಓದಿ: Kambala: ಕಂಬಳದಲ್ಲಿ ಮಹಿಳೆಯರಿಗೂ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ
ಹೌದು, ತುಳು ಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆ ಮೊಟ್ಟ ಮೊದಲು ಬಾರಿಗೆ ರಾಜಾಧಾನಿಯಲ್ಲಿ ಕಂಬಳವನ್ನ ಮಾಡಲು ತುಳುಕೂಟ ನಿರ್ಧರಿಸಿದೆ. ಸಧ್ಯ ಈ ಕಂಬಳವನ್ನ ಪ್ಯಾಲೇಸ್ ಗ್ರೌಂಡ್ ನಲ್ಲಿ ಮಾಡಲು ಜಾಗ ಗುರುತಿಸಿದ್ದು, ಈಗಾಗಲೇ ಮೈಸೂರ್ ಒಡೆಯರ್ ಜೊತೆಗೂ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇನ್ನು ನವೆಂಬರ್ ತಿಂಗಳ 24, 25, 26 ನೇ ತಾರೀಖಿನಂದು ಕಂಬಳ ನಡೆಸಲು ದಿನಾಂಕ ನಿಗದಿ ಮಾಡಿದ್ದು, ಕಂಬಳಕ್ಕೆ 150 ಜೋಡಿಯ ಕೋಣಗಳು ಬರಲಿವೆಯಂತೆ. ಇನ್ನು ಈ ಮೂರು ದಿನಗಳ ಕಾಲ ಈ ಕಂಬಳ ನಡೆಯಲಿದ್ದು, ಅಂದಾಜು 5 ಲಕ್ಷಕ್ಕು ಹೆಚ್ಚು ಜನರು ಬರುವ ಸಾಧ್ಯತೆ ಇದೆ. ಕಂಬಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಅನುಷ್ಕಾ ಶೆಟ್ಟಿ, ಸೇರಿದಂತೆ ಹಲವರು ಬರುವ ಸಾಧ್ಯತೆ ಇದೆ. ಕಂಬಳಕ್ಕೆ ಬರುವ ಕೋಣಗಳನ್ನ ವಾಹನಗಳಲ್ಲಿ ತರಿಸಲಿದ್ದು, ಸಕಲೇಶಪುರ, ಹಾಸನ, ನೆಲಮಂಗಲ ಮೂರು ಕಡೆ ಕೋಣಗಳಿಗೆ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗುವುದು. ಬೆಂಗಳೂರಿಗೆ ಒಂದು ದಿನದ ಮುಂಚಿತವಾಗಿ ಕೊಣಗಳು ಬರಲಿವೆಯಂತೆ. ಇನ್ನು ಕಂಬಳಕ್ಕೆ ಬೇಕಾದ ಕೆಸರು ಗದ್ದೆಯನ್ನ ರೆಡಿಮಾಡಲು ಮಣ್ಣಿನ ಟೆಸ್ಟಿಂಗ್ ಹಾಗೂ ನೀರಿನ ಟೆಸ್ಟಿಂಗ್ ಕಂಪ್ಲೀಟ್ ಆಗಿದ್ದು, ಬರುವ ಜನರಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಒಟ್ನಲ್ಲಿ, ಇಷ್ಟು ದಿನ ಕರಾವಳಿ ಭಾಗದಲ್ಲಿ ಕಂಬಳ ನಡೆಯುವುದನ್ನ ನೋಡುತ್ತಿದ್ವಿ. ಇದೀಗಾ ನಮ್ಮ ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿರುವುದು ಬಹಳ ವಿಶೇಷವಾಗಿದ್ದು, ಆ ದಿನವನ್ನ ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ