ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯ: ತೆಂಗು ಬೆಳೆಗಾರರಿಂದ ಅ. 3ರಂದು ರಾಜಭವನ ಚಲೋ

ಕೇಂದ್ರದಿಂದ ಪ್ರತಿ ಕ್ವಿಂಟಾಲ್​ಗೆ 20,000 ರೂ.ಗಳ ಕನಿಷ್ಠ ಬೆಂಬಲ ಬೆಲೆ ಮತ್ತು ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಾಲ್ಗೆ 5,000 ರೂ.ಗಳ ಹೆಚ್ಚುವರಿ ಪ್ರೋತ್ಸಾಹಧನವನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕದ ತೆಂಗು ಬೆಳೆಗಾರರು ಮಂಗಳವಾರ ರಾಜಭವನ ಚಲೋ ಚಳವಳಿಗೆ ಕರೆ ನೀಡಲಾಗಿದೆ.

ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯ: ತೆಂಗು ಬೆಳೆಗಾರರಿಂದ ಅ. 3ರಂದು ರಾಜಭವನ ಚಲೋ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Oct 02, 2023 | 9:03 AM

ಬೆಂಗಳೂರು, ಅಕ್ಟೋಬರ್​ 02: ಕೇಂದ್ರದಿಂದ ಪ್ರತಿ ಕ್ವಿಂಟಾಲ್​ಗೆ 20,000 ರೂ.ಗಳ ಕನಿಷ್ಠ ಬೆಂಬಲ ಬೆಲೆ ಮತ್ತು ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಾಲ್ಗೆ 5,000 ರೂ.ಗಳ ಹೆಚ್ಚುವರಿ ಬೆಂಬಲ ಹಣ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್ಆರ್ಎಸ್) ಬೆಂಬಲದೊಂದಿಗೆ ಕರ್ನಾಟಕದ ತೆಂಗು ಬೆಳೆಗಾರರು ಮಂಗಳವಾರ ರಾಜಭವನ ಚಲೋ (Raj Bhavan Chalo) ಕರೆ ನೀಡಿದೆ. ಕರ್ನಾಟಕ ರಾಜ್ಯ ರೈತ ಸಂಘದ  ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಕಳೆದ 5-6 ವರ್ಷಗಳಿಂದ ಕೊಬ್ಬರಿ ಬೆಲೆ ಕ್ವಿಂಟಾಲ್ಗೆ 18,000 ರೂ.ಗಳಿಂದ ಕೇವಲ 7,000 ರೂ.ಗೆ ಕುಸಿದಿದ್ದರಿಂದ ರಾಜ್ಯದ ತೆಂಗು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ಆಮದು-ರಫ್ತು ನೀತಿಯೇ ಬೆಲೆ ಕುಸಿತಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ.

ಭಾರತವು ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್ನಿಂದ ತಾಳೆ ಎಣ್ಣೆ ಮತ್ತು ಅರ್ಜೆಂಟೀನಾ, ಬ್ರೆಜಿಲ್, ರಷ್ಯಾ ಮತ್ತು ಉಕ್ರೇನ್ನಿಂದ ಸೋಯಾ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರವು ಮಲೇಷ್ಯಾ, ಇಂಡೋನೇಷ್ಯಾ, ಸೌದಿ ಮತ್ತು ಥೈಲ್ಯಾಂಡ್ನಿಂದ ತೆಂಗಿನ ಎಣ್ಣೆಯನ್ನು ಸಹ ಆಮದು ಮಾಡಿಕೊಳ್ಳುತ್ತಿದೆ. ಈ ಆಮದಿನಿಂದ ಭಾರತದಲ್ಲಿ ತೆಂಗಿನ ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾಗಿದೆ, ಇದು ಕೊಬ್ಬರಿ ಬೆಲೆ ಕುಸಿತಕ್ಕೆ ಕಾರಣವಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರು ಗುಲಾಬಿ ಈರುಳ್ಳಿ ರಫ್ತಿಗೆ ನಿರ್ಬಂಧ ರದ್ದು; ಸೆ. 29ರಿಂದಲೇ ಅನುಮತಿ; ಆದರೆ ಷರತ್ತುಗಳಿವೆ

ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ನಾಫೆಡ್) ಕಳಪೆ ಗುಣಮಟ್ಟದ ಕಾರಣ ನೀಡಿ ಕೊಬ್ಬರಿ ಖರೀದಿಯನ್ನು ಒಟ್ಟು ಉತ್ಪಾದನೆಯ ಕಾಲು ಭಾಗಕ್ಕೆ ಸೀಮಿತಗೊಳಿಸಿದೆ. ಹೆಚ್ಚಿನ ಪ್ರಮಾಣದ ಕೊಬ್ಬರಿಯನ್ನು ನಾಫೆಡ್ ತಿರಸ್ಕರಿಸುತ್ತದೆ, ಇದರಿಂದ ರೈತರಿಗೆ ಅನ್ಯಾಯವಾಗುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ‘ಜಾತ್ಯಾತೀತ’ ಸಿದ್ದರಾಮಯ್ಯರಿಗಿದೆಯೇ? ಬಿಜೆಪಿ ಪ್ರಶ್ನೆ

ತೋಟಗಾರಿಕೆ ಇಲಾಖೆಯು ಪ್ರತಿ ಕ್ವಿಂಟಾಲ್​ಗೆ ₹ 16,700 ಬೆಂಬಲ ಬೆಲೆ ನೀಡುವಂತೆ ಶಿಫಾರಸು ಮಾಡಿದ್ದರೂ ಕೇಂದ್ರ ಸರ್ಕಾರ ಅದನ್ನು ಅನುಷ್ಠಾನಗೊಳಿಸುತ್ತಿಲ್ಲ. ತೆಂಗು ಬೆಳೆಗಾರರು ಬೀದಿಗಿಳಿದು ಪ್ರತಿಭಟಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್​ಗೆ ಕೇವಲ ₹ 1,250 ಬೆಂಬಲ ಬೆಲೆ ಘೋಷಿಸಿದೆ ಎಂದು ತಿಳಿಸಿದರು.

ದಾಬಸ್​ಪೇಟೆ ತಲುಪಿದ ರೈತರ ಪಾದಯಾತ್ರೆ

ಕೊಬ್ಬರಿಗೆ 15ರಿಂದ 25 ಸಾವಿರ ರೂ. ಬೆಂಬಲ ನೀಡುವಂತೆ ಆಗ್ರಹಿಸಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಹೊರಟಿರುವ ರೈತರ ಪಾದಯಾತ್ರೆ ನಿನ್ನೆ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ತಲುಪಿದೆ. ದಾಬಸ್​ಪೇಟೆ ಕಲ್ಯಾಣ ಮಂಟಪದಲ್ಲಿ ರೈತರು ವಾಸ್ತವ್ಯ ಹೂಡಿದ್ದು, ಇಂದು ದಾಬಸ್​ಪೇಟೆಯಿಂದ ಹೊರಟು ನೆಲಮಂಗಲ ತಲುಪಲಿದೆ. ಅಕ್ಟೋಬರ್ 4ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತರು ನಿರ್ಧಾರ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ