ಬೆಂಗಳೂರು, ಅ.6: ನಗರದಲ್ಲಿರುವ ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಸೇರಿದಂತೆ 100 ಕಡೆಗಳಿಗೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ (Commercial Tax Department) ಅಧಿಕಾರಿಗಳು ಪರಿಶೀಲನೆ ನಡೆಸಿದರು. ಗೋಡೌನ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಲೆಕ್ಕಕ್ಕೆ ಸಿಗದ ಹಲವು ವಸ್ತುಗಳನ್ನು ಗೋಡೌನ್ಗಳಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ಅಂತಹ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನಿನ್ನೆ ತಡರಾತ್ರಿ ಚಿಕ್ಕಪೇಟೆ ಮತ್ತು ಸುತ್ತಮುತ್ತಲಿನ ಅಂಗಡಿ ಮುಂಗಟ್ಟು ಸೇರಿದಂತೆ ನೂರು ಕಡೆಗಳಲ್ಲಿ ಏಕಕಾಲಕ್ಕೆ ಮೆಗಾ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಟೆಕ್ಸ್ ಟೈಲ್ಸ್ ವ್ಯಾಪಾರಿಗಳು, ರೆಡಿಮೇಡ್ ಗಾರ್ಮೆಂಟ್ಸ್, ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಮೇಲೆ ದಾಳಿ ನಡೆಸಲಾಗಿದೆ.
ಇದನ್ನೂ ಓದಿ: ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಮೀಪದ ಬಸ್ ನಿಲ್ದಾಣವನ್ನೇ ಕದ್ದೊಯ್ದ ಖದೀಮರು
ಗೋಡೌನ್‌ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ವಾಣಿಜ್ಯ ತೆರಿಗೆ ಪಾವತಿಸದೆ ವಂಚನೆ ಎಸಗಿದ ಆರೋಪದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಲೆಕ್ಕಕ್ಕೆ ಸಿಗದ ಹಲವು ವಸ್ತುಗಳು ಸ್ಟಾಕ್ ಮಾಡಿರುವುದು ಬೆಳಕಿಗೆ ಬಂದಿದೆ. ತೆರಿಗೆ ಪಾವತಿ ಮಾಡದೇ ಗೋಡೌನ್‌ನಲ್ಲಿರಿಸಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಗೋಡೌನ್ ಮತ್ತು ಅಂಗಡಿಗಳಿಗೆ ಜಿಎಸ್ಟಿ ನಿಯಮಾವಳಿ ಪ್ರಕಾರ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ