ರಾಜ್ಯಸಭೆ, ಪರಿಷತ್​ ಟಿಕೆಟ್​ಗೆ ಕಾಂಗ್ರೆಸ್​ನಲ್ಲಿ ತೀವ್ರ ಪೈಪೋಟಿ: 2 ಸ್ಥಾನಗಳಿಗೆ 10ಕ್ಕೂ ಹೆಚ್ಚು ಆಕಾಂಕ್ಷಿಗಳ ಕಸರತ್ತು

ರಾಜ್ಯಸಾಭಾ ಚುನಾವಣೆಗೆ ಕಾಂಗ್ರೆಸ್​ ಟಿಕೆಟ್​ಗಾಗಿ ಹಾಲಿ ಸದಸ್ಯ ಜೈರಾಮ್ ರಮೇಶ್, ರಾಜೀವ್​ಗೌಡ ನಡುವೆ ಪೈಪೋಟಿ ಶುರುವಾಗಿದೆ. ಮತ್ತೊಮ್ಮೆ ರಾಜ್ಯಸಭೆ ಪ್ರವೇಶಕ್ಕೆ ಆಸಕ್ತಿಹೊಂದಿರುವ ಜೈರಾಮ್​ ರಮೇಶ್, ರಾಜ್ಯಸಭೆ ಟಿಕೆಟ್​ಗಾಗಿ ಮಾಜಿ ಸದಸ್ಯ ರಾಜೀವ್​ಗೌಡ ರೇಸ್​ನಲ್ಲಿದ್ದಾರೆ.

ರಾಜ್ಯಸಭೆ, ಪರಿಷತ್​ ಟಿಕೆಟ್​ಗೆ ಕಾಂಗ್ರೆಸ್​ನಲ್ಲಿ ತೀವ್ರ ಪೈಪೋಟಿ: 2 ಸ್ಥಾನಗಳಿಗೆ 10ಕ್ಕೂ ಹೆಚ್ಚು ಆಕಾಂಕ್ಷಿಗಳ ಕಸರತ್ತು
ಕಾಂಗ್ರೆಸ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 19, 2022 | 3:55 PM

ಬೆಂಗಳೂರು: ರಾಜ್ಯಸಭೆ, ವಿಧಾನ ಪರಿಷತ್​ ಟಿಕೆಟ್​ಗೆ ಕಾಂಗ್ರೆಸ್​ನಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, 2 ಸ್ಥಾನಗಳಿಗೆ ಎಸ್.ಆರ್.ಪಾಟೀಲ್, ಎಂ.ಸಿ.ವೇಣುಗೋಪಾಲ್​, ಸೂರಜ್ ಹೆಗ್ಡೆ, ಐವನ್ ಡಿಸೋಜಾ ಸೇರಿ 10ಕ್ಕೂ ಹೆಚ್ಚು ಆಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ. ನಿನ್ನೆ ತಡರಾತ್ರಿ  ವೇಣುಗೋಪಾಲ್​ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಐವನ್ ಡಿಸೋಜಾ ಉದಯಪುರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಭೇಟಿಯಾಗಿದ್ದಾರೆ. ದೆಹಲಿ ಪ್ರವಾಸಕ್ಕೂ ಮುಂದಾದ ಪರಿಷತ್ ಟಿಕೆಟ್ ಆಕಾಂಕ್ಷಿಗಳು​, ಇಂದು ನವದೆಹಲಿಗೆ ಎಂ.ಸಿ.ವೇಣುಗೋಪಾಲ್ ತೆರಳಲಿದ್ದಾರೆ. S.R.ಪಾಟೀಲ್, ಐವನ್ ಡಿಸೋಜಾ ಕೂಡ ಶೀಘ್ರದಲ್ಲೇ ದೆಹಲಿಗೆ ಹೋಗಲಿದ್ದಾರೆ. ಶೀಘ್ರದಲ್ಲೇ ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿ ನಂತರ ಡಿ.ಕೆ. ಶಿವಕಮಾರ ನಿರ್ಧಾರ ಕೈಗೊಳ್ಳಲಿದ್ದಾರೆ. ಜೊತಗೆ ಸ್ಥಳೀಯ ಮಟ್ಟದಲ್ಲಿ ಪಟ್ಟಿ ತಯಾರಿಸಿ ಹೈಕಮಾಂಡ್​ಗೆ ರವಾನೆ ಮಾಡಲಿದ್ದಾರೆ.

ಇದನ್ನೂ ಓದಿ: SSLC Toppers: ರಾಯಚೂರು ಶಾಸಕ ಶಿವರಾಜ್ ಪಾಟೀಲ್ ಪುತ್ರಿ ರಾಜ್ಯಕ್ಕೆ ಪ್ರಥಮ ಸ್ಥಾನ; ಇನ್ನೂ ಯಾರೆಲ್ಲ ಈ ಸಾಧನೆ ಮಾಡಿದ್ದಾರೆ?

ರಾಜ್ಯಸಾಭಾ ಚುನಾವಣೆಗೆ ಕಾಂಗ್ರೆಸ್​ ಟಿಕೆಟ್​ಗಾಗಿ ಹಾಲಿ ಸದಸ್ಯ ಜೈರಾಮ್ ರಮೇಶ್, ರಾಜೀವ್​ಗೌಡ ನಡುವೆ ಪೈಪೋಟಿ ಶುರುವಾಗಿದೆ. ಮತ್ತೊಮ್ಮೆ ರಾಜ್ಯಸಭೆ ಪ್ರವೇಶಕ್ಕೆ ಆಸಕ್ತಿಹೊಂದಿರುವ ಜೈರಾಮ್​ ರಮೇಶ್, ರಾಜ್ಯಸಭೆ ಟಿಕೆಟ್​ಗಾಗಿ ಮಾಜಿ ಸದಸ್ಯ ರಾಜೀವ್​ಗೌಡ ರೇಸ್​ನಲ್ಲಿದ್ದಾರೆ. ಜೈರಾಮ್ ರಮೇಶ್ ಮರು ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು  ಹೊಂದಿದೆ ಎನ್ನಲಾಗುತ್ತಿದೆ.

ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಮುಂದಾದ ಕಾಂಗ್ರೆಸ್

ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್‌ನಲ್ಲಿ ಇನ್ಮುಂದೆ ಒಂದು ಕುಟುಂಬಕ್ಕೆ ಒಂದೇ ಟಿಕೆಟ್‌ ನಿಯಮಕ್ಕೆ ಅನುಮೋದನೆ ನೀಡಲಾಗಿದೆ. ರಾಜಸ್ಥಾನದ ಉದಯಪುರದಲ್ಲಿ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಿಡಬ್ಲ್ಯುಸಿ(CWC) ಸಭೆಯಲ್ಲಿ ಷರತ್ತುಗಳೊಂದಿಗೆ ಒಂದು ಕುಟುಂಬಕ್ಕೆ ಒಂದೇ ಟಿಕೆಟ್‌ ನಿಯಮಕ್ಕೆ ಅನುಮೋದನೆ ನೀಡಲಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯ 5 ವರ್ಷ ಪಕ್ಷಕ್ಕಾಗಿ ದುಡಿದಿದ್ದರೆ ಟಿಕೆಟ್ ನೀಡುವ ಬಗ್ಗೆ ಪರಿಶೀಲನೆ ನಡೆಸಲು ಸಭೆಯಲ್ಲಿ ಸೂಚಿಸಲಾಗಿದೆ. ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಮೊದಲ ಹೆಜ್ಜೆ ಇಟ್ಟಿದ್ದು ದೇಶಾದ್ಯಂತ ಈ ಸಿದ್ಧಾಂತ ಅನುಷ್ಠಾನಕ್ಕೆ ಕಾಂಗ್ರೆಸ್ ಮುಂದಾಗಿದೆ. ಇನ್ನು ಸಿಡಬ್ಲ್ಯುಸಿ ಸಭೆಯಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ ಮಾಡಲಾಗಿದೆ.

70 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಆದ್ರೆ ಒಮ್ಮತ ಮೂಡದ ಹಿನ್ನೆಲೆ ಯಾವುದೇ‌ ನಿರ್ಧಾರಕೈಗೊಂಡಿಲ್ಲ. 70 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನಿರಾಕರಣೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅರ್ಹ ವ್ಯಕ್ತಿಗಳು ಟಿಕೆಟ್‌ನಿಂದ ವಂಚಿತರಾಗುತ್ತಾರೆಂದು ವಿರೋಧ ವ್ಯಕ್ತಪಡಿಸಿದ್ದಾರೆ. ಸಹಮತ ವ್ಯಕ್ತವಾಗದ ಹಿನ್ನೆಲೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ