ಬೆಂಗಳೂರು ವಿವಿ ಅಕ್ರಮಗಳ ಅಡ್ಡೆಯಾಗುತ್ತಿದೆ; ಸಿಂಡಿಕೇಟ್ ಸದಸ್ಯರಿಂದಲೇ ರಾಜ್ಯಪಾಲರಿಗೆ ದೂರು
ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಸದಸ್ಯರಿಗೆ ಓದಿ ತಿಳಿಸುವುದಿಲ್ಲ ಎಂಬ ಆರೋಪವೂ ಕೇಳಿಬಂದಿದೆ. 7 ಜನ ಸಿಂಡಿಕೇಟ್ ಸದಸ್ಯರಿಂದ ರಾಜ್ಯಪಾಲರಿಗೆ ಈ ಸಂಬಂಧ ದೂರು ಸಲ್ಲಿಸಲಾಗಿದೆ. ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಮಾಡಲಾಗಿದೆ.
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜಟಾಪಟಿ ರಾಜ್ಯಪಾಲರ ಅಂಗಳಕ್ಕೆ ತಲುಪಿದೆ. ಅಂಕಪಟ್ಟಿ, ಪರೀಕ್ಷೆ ಫಲಿತಾಂಶ ಸೇರಿದಂತೆ ಹಲವು ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ದೂರು ನೀಡಲಾಗಿದೆ. ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬೆಂಗಳೂರು ಅಕ್ರಮಗಳ ಅಡ್ಡೆಯಾಗುತ್ತಿದೆ. ಉತ್ತಮ ಆಡಳಿತ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ ಎಂದು ಬೆಂಗಳೂರು ವಿವಿ ಕುಲಪತಿ ಪ್ರೊ.ಕೆ.ಆರ್ ವೇಣುಗೋಪಾಲ ಹಾಗೂ ಕುಲಸಚಿವ ಕೊಟ್ರೇಶ್ ವಿರುದ್ಧ ದೂರು ನೀಡಲಾಗಿದೆ.
ಕಾನೂನು ಬಾಹಿರವಾಗಿ ಸಿಂಡಿಕೇಟ್ ಸಭೆ ಹಾಗೂ ವಿಶ್ವವಿದ್ಯಾಲಯದ ಆಡಳಿತ ನಡೆಸುತ್ತಿದ್ದಾರೆ. ತಕ್ಷಣ ಇವರಿಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತೀ ವರ್ಷ 8 ಭಾರೀ ಸಭೆ ನಡೆಸಬೇಕೆಂಬ ನಿಯಮವಿದೆ. ಕಳೆದ 2 ವರ್ಷಕ್ಕೂ ಹೆಚ್ಚು ಅವಧಿಗೆ ಕೇವಲ 13 ಸಭೆಯನ್ನ ಮಾತ್ರ ನಡೆಸಿದ್ದಾರೆ. ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಸದಸ್ಯರಿಗೆ ಓದಿ ತಿಳಿಸುವುದಿಲ್ಲ ಎಂಬ ಆರೋಪವೂ ಕೇಳಿಬಂದಿದೆ. 7 ಜನ ಸಿಂಡಿಕೇಟ್ ಸದಸ್ಯರಿಂದ ರಾಜ್ಯಪಾಲರಿಗೆ ಈ ಸಂಬಂಧ ದೂರು ಸಲ್ಲಿಸಲಾಗಿದೆ. ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಮಾಡಲಾಗಿದೆ.
ಈಜೀಪುರ ಫ್ಲೈಓವರ್ ಕಾಮಗಾರಿ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಇತ್ತ ನಗರದ ಈಜೀಪುರ ಫ್ಲೈಓವರ್ ಕಾಮಗಾರಿ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಆರೋಪ ಕೇಳಿಬಂದಿದ್ದು, ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 2019 ರಲ್ಲೇ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ, ನಿಗದಿತ ಅವಧಿಯಲ್ಲಿ ಕಾಮಗಾರಿ ಮಾಡದ ಆರೋಪದಲ್ಲಿ ಸಿಂಪ್ಲೆಕ್ಸ್ ಕಂಪನಿ ಎಂಡಿ ವಿರುದ್ಧ ಬಿಬಿಎಂಪಿ ದೂರು ನೀಡಿದೆ. ಕೋರಮಂಗಲ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ಚಲಿಸುತ್ತಿದ್ದ ಲಾರಿ ಇಂಜಿನ್‌ನಲ್ಲಿ ಆಕಸ್ಮಿಕ ಬೆಂಕಿ; ಸುಟ್ಟು ಕರಕಲಾದ ಲಾರಿ
ಬೆಂಗಳೂರು ಗ್ರಾಮಾಂತರ: ಇಲ್ಲಿನ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ಲಾರಿ ಇಂಜಿನ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಲಾರಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Recruitment: ಬೆಂಗಳೂರು ಗ್ರಾಮಾಂತರದಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಇದನ್ನೂ ಓದಿ: ಗುಟ್ಟಾಗಿ ಪ್ರಿಯಕರನನ್ನು ಮದುವೆಯಾದ ತಮಿಳುನಾಡಿನ ಸಚಿವರ ಮಗಳು; ತಂದೆಯಿಂದ ಕಾಪಾಡಿ ಎಂದು ಬೆಂಗಳೂರು ಪೊಲೀಸರಿಗೆ ಮನವಿ
Published On - 8:08 am, Thu, 10 March 22