ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್​ನಿಂದ ದೂರು

ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ಸಲ್ಲಿಸಿದೆ. ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್​ ದೂರು ನೀಡಿದೆ.

ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್​ನಿಂದ ದೂರು
ಡಿಕೆ ಶಿವಕುಮಾರ್​
Follow us
Sunil MH
| Updated By: ಆಯೇಷಾ ಬಾನು

Updated on:Feb 13, 2024 | 11:30 AM

ಬೆಂಗಳೂರು, ಫೆ.13: ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಸಚಿವ ಮಧು ಬಂಗಾರಪ್ಪ (Madhu Bangarappa) ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ (JDS)​ ದೂರು ನೀಡಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ ಜೊತೆ ಸಭೆ ಸೇರಿಸಿ ಪ್ರಚಾರ ಮಾಡುತ್ತಿರುವ ಕುರಿತು ದೂರು ಸಲ್ಲಿಸಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ.

ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು

ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ಹಿರಿಯ ನಾಯಕರ ಫೋಟೋ ಬಳಸಿ ಕರ್ನಾಟಕ ಕಾಂಗ್ರೆಸ್ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಫೇಸ್‌ಬುಕ್ ಹ್ಯಾಂಡ್ಲರ್ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲು ಮಾಡಲಾಗಿತ್ತು. ಬಿಜೆಪಿ ರಾಜ್ಯ ಕಾನೂನು ಪ್ರಕೋಷ್ಠದಿಂದ ಐಪಿಸಿ ಸೆಕ್ಷನ್ 153ಎ, 464, 504 ಮತ್ತು 505(ಬಿ)ರಡಿ ಬೆಂಗಳೂರಿನ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ… ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:20 am, Tue, 13 February 24