ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ : ಸತೀಶ್ ಜಾರಕಿಹೋಳಿ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲು
ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೋಳಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ.
ಬೆಂಗಳೂರು: ಹಿಂದೂ (Hindu) ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೋಳಿ (Satish Jarkiholi) ವಿರುದ್ಧ ಖಾಸಗಿ ದೂರು ದಾಖಲಾಗಿದೆ. ವಕೀಲ ದಿಲೀಪ್ ಕುಮಾರ್ ಎಂಬುವರು ಐಪಿಸಿ ಸೆಕ್ಷನ್ 153, 500ರ ಅಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದ್ದು, ಮ್ಯಾಜಿಸ್ಟ್ರೇಟ್ ಕೋರ್ಟ್ ನವೆಂಬರ್ 18ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಘಟನೆ ಹಿನ್ನೆಲೆ
ಹಿಂದೂ ಪದದ ಅರ್ಥ ಅಸಭ್ಯ, ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?
‘ಹಿಂದೂ’ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ ಹೇಳಿರುವುದು ವಿವಾದಕ್ಕೀಡಾಗಿದೆ. ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದಿದ್ದಾರೆ ಸತೀಶ್ ಜಾರಕಿಹೊಳಿ
. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಾರಕಿಹೊಳಿ ಅವರ ಮಾತು ಹಿಂದೂಗಳಿಗೆ ಮಾಡಿದ ಅವಮಾನ ಮತ್ತು ಪ್ರಚೋದನೆ ಎಂದು ಬಿಜೆಪಿ ಟೀಕಿಸಿದೆ. ಹಿಂದೂ ಪದದ ಅರ್ಥವನ್ನು ತಿಳಿದರೆ ನಿಮಗೆ ನಾಚಿಕೆಯಾಗುತ್ತದೆ. ಇದು ಅಸಭ್ಯವಾಗಿದೆ ಎಂದು ಜಾರಕಿಹೊಳಿ ಹೇಳುತ್ತಿರುವುದು ವಿಡಿಯೊದಲ್ಲಿದೆ. ಈ ಪದ ಎಲ್ಲಿಂದ ಬಂದಿದೆಯೆಂದು ತಿಳಿಯಲು ವಿಕಿಪೀಡಿಯಾ ಚೆಕ್ ಮಾಡಿ ಎಂದು ಅವರು ಹೇಳಿದ್ದಾರೆ.
ಜಾರಕಿಹೊಳಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಅರಣ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಈ ರೀತಿ ಮಾತನಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಈದಲು ಇಲ್ಲಿ ಕ್ಲಿಕ್ ಮಾಡಿ
Published On - 4:59 pm, Wed, 9 November 22