ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ವೀಕ್ಷಣೆ; ದೂರು ದಾಖಲು

|

Updated on: Nov 24, 2023 | 7:44 AM

ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ/ ಭಾವಚಿತ್ರಗಳ ವೀಕ್ಷಣೆ ಅಥವಾ ಶೇರ್​​ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಆದರೆ ಬೆಂಗಳೂರಿನ ವಿಮಾನಪುರದ ಇಸ್ಲಾಂಪುರ ನಿವಾಸಿಯೊಬ್ಬ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ವೀಕ್ಷಣೆ; ದೂರು ದಾಖಲು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು ನ.24: ಸಾಮಾಜಿಕ ಜಾಲತಾಣಗಳಲ್ಲಿ (Social Media) ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ವೈಟ್‌ಫೀಲ್ಡ್ ಸೈಬರ್ ಕ್ರೈಂ (Cyber Crime) ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಂಕಿತನನ್ನು ವಿಮಾನಪುರದ ಇಸ್ಲಾಂಪುರ ನಿವಾಸಿ ಮಹಮ್ಮದ್ ಜಾಹಿದ್ ಎಂದು ಗುರುತಿಸಲಾಗಿದೆ.

ನವೆಂಬರ್ 14 ರಂದು ದೇಶದಲ್ಲಿ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಅಂದು ವೈಟ್‌ಫೀಲ್ಡ್ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್ (CEN) ಪೊಲೀಸ್ ಠಾಣೆಗೆ ಅಪರಾಧ ತನಿಖಾ ಇಲಾಖೆಯ (CID) ಸೈಬರ್ ತರಬೇತಿ ಮತ್ತು ಸಂಶೋಧನಾ ವಿಭಾಗ ಒಂದು ಪತ್ರ ಕಳೆಸಿತ್ತು.

ಇದನ್ನೂ ಓದಿ: ಬೆಂಗಳೂರು: ಸೈಬರ್ ಕ್ರೈಂ ಕಥೆ ಹೇಳಿ ಉದ್ಯಮಿ ಖಾತೆಯಿಂದಲೇ ಹಣ ಲಪಟಾಯಿಸಿದ ಖದೀಮ

ಸಿಐಡಿ ಬರೆದ ಪತ್ರದಲ್ಲಿ “ಸಾಹಿದ್ ಸಾಮಾಜಿಕ ಮಾಧ್ಯಮದಲ್ಲಿ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವೀಡಿಯೊಗಳು / ಛಾಯಾಚಿತ್ರಗಳನ್ನು ವೀಕ್ಷಿಸಿದ್ದಾರೆ ಅಥವಾ ಹಂಚಿಕೊಂಡಿದ್ದಾರೆ” ಎಂದು ಬರೆದಿತ್ತು. ಸಿಐಡಿ ಅಧಿಕಾರಿಗಳ ಸೂಚನೆ ಮೇರೆಗೆ ವೈಟ್‌ಫೀಲ್ಡ್ ಸಿಇಎನ್ ಪೊಲೀಸರು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯಿದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡರು.

“ಪ್ರಕರಣದ ತನಿಖೆಗಾಗಿ ನಾವು ವಿಶೇಷ ತಂಡವನ್ನು ರಚಿಸಿದ್ದೇವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತನಿಖೆಯ ಮೇಲ್ವಿಚಾರಣೆಯ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Fri, 24 November 23