ಸಾರ್ವಜನಿಕರಿಂದ ದೂರು: ಹಲವು ವರ್ಷದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಡಿಸಿಗಳಿಗೆ ಸೂಚನೆ

ಜುಲೈ 08 ರಂದು ಮಾನ್ಯ ಮುಖ್ಯ ಮಂತ್ರಿಯವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ವೇಳೆ ಒಂದೇ ಹುದ್ದೆ ಅಥವಾ ಒಂದೇ ಸ್ಥಳದಲ್ಲಿ 5 ವರ್ಷ ಮೀರಿ ಮುಂದುವರಿದಿದ್ದಲ್ಲಿ ಮತ್ತು ಅಂತಹವರ ವಿರುದ್ಧ ದೂರುಗಳೇನಾದರೂ ಇದ್ದಲ್ಲಿ, ಅವರ ಅಧಿಕಾರಾವಧಿಯ ವಿವರಗಳೊಂದಿಗೆ ವಿವರವಾದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಸಾರ್ವಜನಿಕರಿಂದ ದೂರು: ಹಲವು ವರ್ಷದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಡಿಸಿಗಳಿಗೆ ಸೂಚನೆ
ಕರ್ನಾಟಕ ಸರ್ಕಾರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jul 14, 2024 | 3:48 PM

ಬೆಂಗಳೂರು, ಜು.14: ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಕಂದಾಯ ಅಧಿಕಾರಿಗಳ (Revenue Officers) ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನಲೆ ದೂರುಗಳಿರುವವರ ಪಟ್ಟಿಯನ್ನು ಶೀಘ್ರದಲ್ಲಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ.

ಇದೇ ಜುಲೈ 08 ರಂದು ಮಾನ್ಯ ಮುಖ್ಯ ಮಂತ್ರಿಯವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಸಮನ್ವಯತೆ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಕಾಲೆಳೆಯುತ್ತ ಗುಣಗಾನ ಮಾಡಿ ಅನುದಾನ ಯಾಚಿಸಿದ ಮುನಿರತ್ನ ನಾಯ್ಡು!

ಜೊತೆಗೆ ಕಛೇರಿಯಲ್ಲಿ ಉತ್ತಮ ಕಾರ್ಯಕ್ರಮತೆ, ಶಿಸ್ತು ಪಾಲಿಸುವಂತೆ ಕ್ರಮ ವಹಿಸಲು ಮತ್ತು ನಿರ್ಲಕ್ಷತೆ ತೋರಿದ ಅಧಿಕಾರಿ, ಸಿಬ್ಬಂದಿಗಳ ಮೇಲೆ ನಿಯಮಾನುಸಾರ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸಹ ಸೂಚಿಸಲಾಗಿದೆ. ಯಾವುದೇ ಅಧಿಕಾರಿ, ನೌಕರರ ಬಗ್ಗೆ ಅಸಮರ್ಥತೆ ಅಥವಾ ದೂರುಗಳು ಇತ್ಯಾದಿಗಳ ಕಾರಣದಿಂದ ಅವರನ್ನು ವರ್ಗಾವಣೆ ಮಾಡಲು, ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಸ್ತಾವನೆಯನ್ನು ಕಳುಹಿಸುವಂತೆ ಸೂಚಿಸಿದೆ.

ದೂರುಗಳಿರುವವರ ಪಟ್ಟಿಯನ್ನು ಶೀಘ್ರದಲ್ಲಿ ನೀಡುವಂತೆ ಸೂಚನೆ

ಇನ್ನು ಹಲವು ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿರುವುದು, ಅಲ್ಲದೆ ಇಂತಹ ಹಲವು ಅಧಿಕಾರಿಗಳು ಮತ್ತು ನೌಕರರುಗಳ ವಿರುದ್ಧ ದೂರುಗಳು ಸಹ ಸ್ವೀಕೃತವಾಗಿರುವುದು ಸರ್ಕಾರದ ಗಮನಕ್ಕೂ ಬಂದಿದೆ. ಆದ್ದರಿಂದ ಒಂದೇ ಹುದ್ದೆ ಅಥವಾ ಒಂದೇ ಸ್ಥಳದಲ್ಲಿ 5 ವರ್ಷ ಮೀರಿ ಮುಂದುವರಿದಿದ್ದಲ್ಲಿ ಮತ್ತು ಅಂತಹವರ ವಿರುದ್ಧ ದೂರುಗಳೇನಾದರೂ ಇದ್ದಲ್ಲಿ, ಅವರ ಅಧಿಕಾರಾವಧಿಯ ವಿವರಗಳೊಂದಿಗೆ ವಿವರವಾದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಲು ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ