ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ದೂರು; ಕಾರಣ ಇಲ್ಲಿದೆ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಿಡಿಕಾರಿದ್ದರು. ಈ ಹಿನ್ನಲೆ ಅವರ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿದೆ. ಇಂದು(ಏ.6) ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಸಚಿವ ದಿನೇಶ್ ಗುಂಡೂರಾವ್​ ಅವರ ಕುಟುಂಬದವರನ್ನು ಅವಮಾನಿಸಿದ್ದಾರೆ ಎಂದು ದೂರು ನೀಡಲಾಗಿದೆ.​

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ದೂರು; ಕಾರಣ ಇಲ್ಲಿದೆ
ಬಸನಗೌಡ ಪಾಟೀಲ್ ಯತ್ನಾಳ್ ​
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 06, 2024 | 6:59 PM

ಬೆಂಗಳೂರು, ಏ.06: ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಿಡಿಕಾರಿದ್ದರು. ಈ ಹಿನ್ನಲೆ ಅವರ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬಸ್ಥರನ್ನು ಅವಮಾನಿಸಿದ್ದಾರೆ. ಚುನಾವಣೆ ಹೊತ್ತಲ್ಲಿ‌ ಕೋಮು ಸೌಹಾರ್ದತೆ ಹಾಳು ಮಾಡಲು ಈ ರೀತಿ ಮಾತಾಡುತ್ತಿದ್ದಾರೆ. ಇದೊಂದು ‌ದೇಶ ವಿರೋಧಿ ಹೇಳಿಕೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಘಟನೆ ವಿವರ

ಇಂದು(ಏ.6) ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್​ನಲ್ಲಿ ಬಿಜೆಪಿ ಕಾರ್ಯಕರ್ತ ವಿಚಾರಣೆ ನಡೆಸಿದ್ದ ಎನ್​ಐಎ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾನಾಡುವಾಗ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ಮಾತಾಡಿದ್ದರು. ಈ ವೇಳೆ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದಿದ್ದರು. ಇದೀಗ ಈ ಕುರಿತು ದೂರು ದಾಖಲಾಗಿದೆ.

ಇದನ್ನೂ ಓದಿ:ಕರಾವಳಿ ಭಾಗದ ಎಲ್ಲ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪಷ್ಟ ಗೆಲುವು ದಾಖಲಿಸಲಿದೆ: ಬಸನಗೌಡ ಪಾಟೀಲ್ ಯತ್ನಾಳ್

ಇನ್ನು ಇದೆ ವೇಳೆ ಬಬಲೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಯಗೊಂಡಿರುವ ವಿಜುಗೌಡ ಪಾಟೀಲ್ ವಿರುದ್ಧ ಕಿಡಿಕಾರಿದ್ದರು. ವಿಜುಗೌಡ ಪಾಟೀಲ್ ಸಚಿವ ಶಿವಾನಂದ್ ಪಾಟೀಲರ ಕಿರಿಯ ಸಹೋದರ ಎಂಬುದು ವಿಶೇಷ. ಕಳೆದ ವಿಧಾನಭಾ ಚುನಾವಣೆಯಲ್ಲಿ ಬಸವನಬಾಗೇವಾಡಿ ಕ್ಷೇತ್ರದಿಂದ ವಿಜುಗೌಡ ಪಾಟೀಲ್​ ಸಹೋದರ ಶಿವಾನಂದ್ ಪಾಟೀಲ್ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಈ ಹಿನ್ನಲೆ ಬಬಲೇಶ್ವರ ಕ್ಷೇತ್ರದಲ್ಲಿ ನನ್ನ ಪರ ಯತ್ನಾಳ್​ ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ವಿಜುಗೌಡ ಪಾಟೀಲ್ ಆರೋಪ ಮಾಡಿದ್ದಾರೆ. ಒಂದು ಕುಟುಂಬ, ಒಂದೇ ಮನೆ, ಒಂದೇ ಉದ್ಯೋಗ ಮಾಡಿಕೊಂಡು ಜೀವನ ಮಾಡುವವರು, ಒಬ್ಬ ಕಾಂಗ್ರೆಸ್​ನಲ್ಲಿ ಇರೋದು, ಒಬ್ಬ ಬಿಜೆಪಿಯಲ್ಲಿ ಇರೋದು ಇವರು ಬಿಜೆಪಿಯ ಲಾಭ ಪಡೆಯುವವರು. ಅವರಿಂದ ಪಕ್ಷಕ್ಕೆ ಲಾಭವಿಲ್ಲ ಎಂದು ಯತ್ನಾಳ್​ ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Sat, 6 April 24