AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡರೆ ಕೇಸ್ ಮುಕ್ತಾಯವಾದಂತೆ, ಆದರೆ…! ಹೈಕೋರ್ಟ್

ರಾಜಿ ಮೂಲಕ ಇತ್ಯರ್ಥಪಡಿಸಿದ ಚೆಕ್ ಬೌನ್ಸ್ ಪ್ರಕರಣವನ್ನು ಮರು ವಿಚಾರಣೆ ನಡೆಸಲು ಕೋರಿ ಸಲ್ಲಿಸಿದ್ದ ಮೆಮೋ ವಜಾಗೊಳಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಕ್ರಮ ಪ್ರಶ್ನಿಸಿ ಶೆಲ್ಲಿ ಎಂ ಪೀಟರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡರೆ ಕೇಸ್ ಮುಕ್ತಾಯವಾದಂತೆ, ಆದರೆ...! ಹೈಕೋರ್ಟ್
ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡರೆ ಕೇಸ್ ಮುಕ್ತಾಯವಾದಂತೆ, ಆದರೆ...! ಹೈಕೋರ್ಟ್
TV9 Web
| Updated By: ಸಾಧು ಶ್ರೀನಾಥ್​|

Updated on: Sep 19, 2022 | 8:57 PM

Share

ನ್ಯಾಯಾಲಯದಲ್ಲಿ ಅಥವಾ ಲೋಕ ಅದಾಲತ್ ನಲ್ಲಿ (court or lok adalat) ರಾಜಿ ಸಂಧಾನದ ಮೂಲಕ (compromised case) ಇತ್ಯರ್ಥಪಡಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಮತ್ತೆ ಮರುವಿಚಾರಣೆಗೆ (retrial) ಕೋರಲು ಅವಕಾಶವಿಲ್ಲ ಎಂದು ಹೈಕೋರ್ಟ್ (karnataka high court) ಸ್ಪಷ್ಟಪಡಿಸಿದೆ.

ರಾಜಿ ಮೂಲಕ ಇತ್ಯರ್ಥಪಡಿಸಿದ ಚೆಕ್ ಬೌನ್ಸ್ ಪ್ರಕರಣವನ್ನು ಮರು ವಿಚಾರಣೆ ನಡೆಸಲು ಕೋರಿ ಸಲ್ಲಿಸಿದ್ದ ಮೆಮೋ ವಜಾಗೊಳಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಕ್ರಮ ಪ್ರಶ್ನಿಸಿ ಶೆಲ್ಲಿ ಎಂ ಪೀಟರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ರಾಜಿ ಒಪ್ಪಂದದಂತೆ ಆಗದಿದ್ದಾಗ ಅರ್ಜಿ ಸಲ್ಲಿಸಬಹುದು:

ಪೀಠವು ತನ್ನ ಆದೇಶದಲ್ಲಿ, ಕೋರ್ಟ್ ಅಥವಾ ಲೋಕ ಅದಾಲತ್ ನಲ್ಲಿ ರಾಜಿ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡರೆ ಕೇಸ್ ಮುಕ್ತಾಯವಾದಂತೆ ಆಗುತ್ತದೆ. ಸಿಆರ್​ಪಿಸಿ ಸೆಕ್ಷನ್ 362ರ ಪ್ರಕಾರ ನ್ಯಾಯಾಲಯ ಒಮ್ಮೆ ಆದೇಶ ಪ್ರಕಟಿಸಿದ ನಂತರ ಅದನ್ನು ಬದಲಾಯಿಸಲು ಅಥವಾ ಹಿಂಪಡೆಯಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ಪುನಃ ಆರಂಭಿಸಲು ಸಾಧ್ಯವಿಲ್ಲ. ಆದರೆ, ರಾಜಿ ಒಪ್ಪಂದದಂತೆ ಹಣ ಪಾವತಿಸದಿದ್ದಾಗ, ಹಣ ವಸೂಲಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.

ಅಲ್ಲದೇ, ಮೆಮೋ ವಜಾಗೊಳಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ರದ್ದುಪಡಿಸಿರುವ ಪೀಠ, ಅರ್ಜಿದಾರರ ಮೆಮೋವನ್ನು ಕ್ರಿಮಿನಲ್ ಮಿಸಲೇನಿಯಸ್ ಅರ್ಜಿಯಾಗಿ ಪರಿಗಣಿಸಬೇಕು. ರಾಜಿ ಒಪ್ಪಂದದಂತೆ ಹಣ ಪಾವತಿಸಲು ವಿಫಲವಾಗಿರುವ ಪ್ರತಿವಾದಿ ಸಂಸ್ಥೆಗೆ ವಾರಂಟ್ ಜಾರಿ ಮಾಡಿ, ಹಣ ವಸೂಲಿ ಪ್ರಕ್ರಿಯೆ ನಡೆಸಬೇಕು ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ: ಬನ್ಯಾನ್ ಪ್ರಾಜೆಕ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಹಾಗೂ ಅರ್ಜಿದಾರ ಶೆಲ್ಲಿ ಪೀಟರ್ ನಡುವಿನ ಹಣಕಾಸು ವ್ಯಾಜ್ಯವನ್ನು ಪಕ್ಷಗಾರರ ಇಚ್ಛೆ ಮೇರೆಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ರಾಜಿ ಮೂಲಕ ಇತ್ಯರ್ಥಪಡಿಸಿತ್ತು. ಆದರೆ, ಬನ್ಯಾನ್ ಪ್ರಾಜೆಕ್ಟ್ ನೀಡಿದ್ದ ಚೆಕ್ ಗಳು ಬೌನ್ಸ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಶೆಲ್ಲಿ ಪ್ರಕರಣದ ವಿಚಾರಣೆಯನ್ನು ಪುನಃ ಆರಂಭಿಸುವಂತೆ ಕೋರಿ ಮೆಮೋ ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಮೋವನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಶೆಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. (ಕೃಪೆ: lawtime.in)

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು