ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ಸಂಸದರಿಗೆ ಹೂವು ನೀಡಲು ಬಂದ ಕಾರ್ಯಕರ್ತೆ ಪೊಲೀಸರ ವಶಕ್ಕೆ
ಹೈಕೋರ್ಟ್ ಆದೇಶದ ಹಿನ್ನೆಲೆ ಕೇವಲ ಫ್ರಿಡಂ ಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ಇದೆ. ಆದರೆ ಕಾರ್ಯಕರ್ತರು ಗಿರಿನಗರ ಸರ್ಕಲ್ನಿಂದ ತೇಜಸ್ವಿ ಸೂರ್ಯ ನಿವಾಸಕ್ಕೆ ಮೆರವಣಿಗೆ ನಡೆಸಲು ಮುಂದಾಗಿದ್ದರು.
ಬೆಂಗಳೂರು: ಹತ್ಯೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರ (Congress Government) ಇದ್ದಿದ್ರೆ ಕಲ್ಲು ಹೊಡೆಯಬಹುದಾಗಿತ್ತು ಎಂಬ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆಗೆ ಮುಂದಾಗಿದ್ದಾರೆ. ಗಿರಿ ನಗರದಲ್ಲಿರುವ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಲ್ಲುಗಳನ್ನು ಮತ್ತು ಹೂಗಳನ್ನು ನೀಡುವ ಮೂಲಕ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಇನ್ನು ಸಂಸದರ ಮನೆಗೆ ಬಂದು ಹೂ ನೀಡಲು ಮುಂದಾಗಿದ್ದ ಕಾರ್ಯಕರ್ತೆಯನ್ನು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ.
ಹೈಕೋರ್ಟ್ ಆದೇಶ ಹಿನ್ನೆಲೆ ಕೇವಲ ಫ್ರಿಡಂ ಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ಇದೆ. ಆದರೆ ಕಾರ್ಯಕರ್ತರು ಗಿರಿ ನಗರ ಸರ್ಕಲ್ನಿಂದ ತೇಜಸ್ವಿ ಸೂರ್ಯ ನಿವಾಸಕ್ಕೆ ಮೆರವಣಿಗೆ ನಡೆಸಲು ಮುಂದಾಗಿದ್ದರು. ಈ ಹಿನ್ನೆಲೆ ಪ್ರತಿಭಟನಾ ಆರಂಭಕ್ಕೂ ಮುನ್ನಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ: ಸರ್ಕಾರದ ಒತ್ತಡಕ್ಕೆ ಮಣಿದು ಇಬ್ಬರನ್ನು ಬಂಧಿಸಿದ ಪೊಲೀಸರು? ಪೊಲೀಸರ ನಡೆ ಮೇಲೆ ಬೆಟ್ಟದಷ್ಟು ಅನುಮಾನ
ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಈ ವಿಚಾರವಾಗಿ ರಾಜೀನಾಮೆ ವಾಪಸ್ ಪಡೆಯುವಂತೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ಗೆ ತೇಜಸ್ವಿ ಸೂರ್ಯ ಕರೆ ಮಾಡಿದ್ದರು. ಸರ್ಕಾರ ನಮ್ಮದೆ ಇದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ಸಂದೀಪ್ ಜೊತೆ ಫೋನ್ನಲ್ಲಿ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ ಎನ್ನಲಾಗುವ ಆಡಿಯೋ ವೈರಲ್ ಆಗಿದೆ. ಈ ಹೇಳಿಕೆ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ: Dinesh Karthik: ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ದಿನೇಶ್ ಕಾರ್ತಿಕ್ ಆಡಿದ ಮಾತುಗಳೇನು ಕೇಳಿ
Published On - 9:36 am, Sat, 30 July 22