ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಮೂವರು ಕಾರ್ಮಿಕರ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
ಮುಂಜಾಗ್ರತಾ ವಹಿಸದೆ ಕೆಲಸ ಮಾಡುತ್ತಿದ್ದು, ಈ ವೇಳೆ ಸಿಮೆಂಟ್ ಪ್ಲಾಸ್ಟಿಂಗ್ಗೆಂದು ನಿರ್ಮಿಸಿದ್ದ ಬೊಂಬುಗಳು ಮುರಿದು ಅನಾಹುತ ಸಂಭವಿಸಿದೆ.
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ 3ನೇ ಮಹಡಿಯಿಂದ ಬಿದ್ದು ಮೂವರು ಕಾರ್ಮಿಕರ ಸ್ಥಿತಿ ತೀವ್ರ ಗಂಭೀರವಾಗಿರುವಂತಹ ಘಟನೆ ನರದ ಹೊಸಕೆರೆಹಳ್ಳಿ ಬಳಿ ದುರ್ಘಟನೆ ನಡೆದಿದೆ. ಸಿಮೆಂಟ್ ಪ್ಲಾಸ್ಟಿಂಗ್ ಕೆಲಸ ಮಾಡೋ ಕಾರ್ಮಿಕರಿಗೆ ಗಾಯವಾಗಿದ್ದು, ಗಾಯಾಳು ಕಾರ್ಮಿಕರನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಜಾಗ್ರತಾ ವಹಿಸದೆ ಕೆಲಸ ಮಾಡುತ್ತಿದ್ದು, ಈ ವೇಳೆ ಸಿಮೆಂಟ್ ಪ್ಲಾಸ್ಟಿಂಗ್ಗೆಂದು ನಿರ್ಮಿಸಿದ್ದ ಬೊಂಬುಗಳು ಮುರಿದು ಅನಾಹುತ ಸಂಭವಿಸಿದೆ. ಕಾರ್ಮಿಕರು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅವೈಜ್ಞಾನಿಕ ಕಾಮಗಾರಿ: 150 ಮೀಟರಿಗೂ ಅಧಿಕ ಉದ್ಧ ಮೀನುಗಾರಿಕಾ ಜೆಟ್ಟಿ ಕುಸಿತ
ಉಡುಪಿ: ಅವೈಜ್ಞಾನಿಕ ಜೆಟ್ಟಿ ನಿರ್ಮಾಣ ಕಾಮಗಾರಿಯಿಂದಾಗಿ 150 ಮೀಟರಿಗೂ ಅಧಿಕ ಉದ್ಧ ಮೀನುಗಾರಿಕಾ ಜೆಟ್ಟಿ ಕುಸಿದಿರುವಂತಹ ಘಟನೆ ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆದಿದೆ. ಹಳೆ ಜೆಟ್ಟಿ ಆಧಾರವಾಗಿ ಇದ್ದ ರಾಡ್ ತುಂಡರಿಸಿದೇ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಅಧಿಕಾರಿಗಳ ವೈಜ್ಞಾನಿಕ ಕಾಮಗಾರಿಯೇ ಘಟನೆಗೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ. ಹಳೆ ಜೆಟ್ಟಿ ಸದ್ಯ ನಡೆಯುತ್ತಿರುವ ಕಾಮಗಾರಿಯ ಮಾಡಿದ ಪಿಲ್ಲರ್ ಮೇಲೆ ಕುಸಿದು ಬಿದ್ದು ಹಲವು ಪಿಲ್ಲರ್‌ಗಳಿಗೆ ಹಾನಿ ಉಂಟಾಗಿದೆ. ಅಧಿಕಾರಿಗಳ ಬೇಜವಬ್ದಾರಿತನ, ಗುತ್ತಿಗೆದಾರರ ನಿರ್ಲಕ್ಷ್ಯ ಅಂತ ಮೀನುಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 12 ಕೋಟಿ ಅನುದಾನದಲ್ಲಿ ನೂತನ ಜೆಟ್ಟಿ ಕಾಮಗಾರಿ ಕೆಲಸ ನಡೆಯುತ್ತಿತ್ತು.
ಜೆಟ್ಟಿ ಕುಸಿತದಿಂದ ಮೀನುಗಾರಿಗೆ ಮತ್ತೆ ಸಂಕಷ್ಟ ಎದುರಾಗಿದೆ. 13 ವರ್ಷದ ಹಿಂದೆ ಗಂಗೊಳ್ಳಿ ಜೆಟ್ಟಿ ನಿರ್ಮಾಣವಾಗಿದ್ದು, ಈ ಹಳೆ ಜೆಟ್ಟಿ ಸದ್ಯದ ಪರಿಸ್ಥಿತಿಯಲ್ಲಿ ಮೀನು ಖಾಲಿ ಮಾಡಲು ದೂರದ ಭಟ್ಕಳ, ಮಲ್ಪೆಗೆ ತೆರಳಬೇಕಾದ ಅನಿವಾರ್ಯತೆ ಉಂಟಾಗಿದೆ. 40 ದೊಡ್ಡ ಬೋಟುಗಳು, 100ಕ್ಕೂ ಅಧಿಕ ಟ್ರಾಲ್ ಬೋಟುಗಳು, ಸಿಂಗಲ್ ಬೋಟುಗಳು, 300ಕ್ಕೂ ಅಧಿಕ ನಾಡ ದೋಣಿಗಳಿಗೆ ಬೇಕಾದ ಜೆಟ್ಟಿ ಇದಾಗಿದೆ.
ಬೀಗ ಹಾಕಿದ ಬೇರೆಯವರ ಮನೆಯ ಗ್ಯಾಲರಿಯಲ್ಲಿ ಮಹಿಳೆ ನೇಣಿಗೆ ಶರಣು
ಬೆಳಗಾವಿ: ಬೀಗ ಹಾಕಿದ ಬೇರೆಯವರ ಮನೆಯ ಗ್ಯಾಲರಿಯಲ್ಲಿ ಮಹಿಳೆ ನೇಣಿಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಗೋಕಾಕ್ ನಗರದ ಕಿಲ್ಲಾ ಪ್ರದೇಶದಲ್ಲಿ ನಡೆದಿದೆ. ರೇಷ್ಮಾ ಮುಲ್ಲಾ (40) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಿರಣ್ ದಿಕ್ಷೀತ್ ಎಂಬುವವರ ಮನೆಯ ಗ್ಯಾಲರಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಹಲವು ದಿನಗಳ ಹಿಂದೆ ಮನೆಗೆ ಬೀಗ ಹಾಕಿ ದೀಕ್ಷಿತ್ ಕುಟುಂಬ ಬೇರೆಡೆ ತೆರಳಿದ್ದರು. ಸಂಘವೊಂದರಲ್ಲಿ ಪಡೆದ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಬೀಗ ಹಾಕಿದ ಮನೆಯ ಹೊರಗೆ ನೇತಾಡುತ್ತಿದ್ದ ಮೃತದೇಹ ಕಂಡು ಸ್ಥಳೀಯ ನಿವಾಸಿಗಳು ಬೆಚ್ಚಿಬಿದಿದ್ದಾರೆ. ಸ್ಥಳಕ್ಕೆ ಗೋಕಾಕ್ ಶಹರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ಮಾಡಿದರು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:28 am, Thu, 29 September 22