ಬೆಂಗಳೂರು: ಚುನಾವಣಾ ವರ್ಷ ಇರುವುದರಿಂದ ಹೇಳಿಕೆಗಳು ಸಹಜ. ಈವರೆಗೆ ಬಿಜೆಪಿಯಿಂದ (BJP) ಕಾಂಗ್ರೆಸ್‌ಗೆ ಹೋದವರು ಕಡಿಮೆ. ಕಳೆದೆರಡು ವರ್ಷದ ಹಿಂದೆ ಕಾಂಗ್ರೆಸ್(Congress), ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ. ಇದೀಗ ಗೊಂದಲ ಸೃಷ್ಟಿಸುವಂತಹ ಹೇಳಿಕೆ ನೀಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿಯವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಎಂಎಲ್‌ಸಿ ಸಿ.ಪಿ. ಯೋಗೇಶ್ವರ್(CP Yogeshwar) ಟಾಂಗ್ ನೀಡಿದ್ದಾರೆ.
ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗಲ್ಲ: ಸಿ.ಪಿ. ಯೋಗೇಶ್ವರ್
ನನ್ನ ಅಚಲ ವಿಶ್ವಾಸವನ್ನು ಅಲುಗಾಡಿಸಲು ಆಗುವುದಿಲ್ಲ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗಲ್ಲ. ಕಾಂಗ್ರೆಸ್‌ನವರು ಸುಮ್ಮನೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ಮಾಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಧ್ಯೆ ಗೊಂದಲವಿದೆ. ಅಧಿಕಾರ, ನಾಯಕನಾಗಬೇಕೆಂದು ಅವರಿಬ್ಬರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಬಿಜೆಪಿಯಿಂದ ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುವವರೇ ಹೆಚ್ಚಾಗಿದ್ದಾರೆ. ಮುಂದಿನ ತಿಂಗಳಿನಿಂದ ಬಿಜೆಪಿಗೆ ಹೆಚ್ಚು ಜನ ಬರುತ್ತಾರೆ. ಕಾದು ನೋಡಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ನಾನು ಸೋತಾಗಲೂ ನನಗೆ 2 ಬಾರಿ ಸಚಿವ ಸ್ಥಾನವನ್ನು ಬಿಜೆಪಿ ನೀಡಿದೆ. ಈಗ ಎಂಎಲ್‌ಸಿ ಮಾಡಿದೆ ಇದನ್ನು ಪದೇಪದೆ ಹೇಳುತ್ತೇನೆ. ಮುಂದಿನ ದಿನಗಳಲ್ಲಿ ನಾನು ಇದರ ಬಗ್ಗೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
ರಾಮನಗರ: ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ನಾನು ಮಾತನಾಡುವುದಿಲ್ಲ: ಡಿ.ಕೆ.ಶಿವಕುಮಾರ್
ಬಿಜೆಪಿ, ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಬಗ್ಗೆ ಯತ್ನಾಳ್ರನ್ನು ಕೇಳಿದರೆ ಅವರಿಗೆ ಎಲ್ಲಾ ಪಟ್ಟಿ ಗೊತ್ತಿದೆ. ಅವರೆಲ್ಲ ಸೇರಿ ಒಂದು ಸಭೆ ಕೂಡ ಮಾಡಿದ್ದಾರೆ. ಅದನ್ನೆಲ್ಲ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆಗವಿ ಮಠದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:
ಜೆಡಿಎಸ್, ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ಯತ್ನಾಳ್ ತಿರುಗೇಟು
Published On - 5:20 pm, Tue, 25 January 22