Karnataka Assembly Elections 2023: ವಿಧಾನ ಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷ ನೇಮಕ

| Updated By: ಆಯೇಷಾ ಬಾನು

Updated on: Aug 01, 2022 | 5:05 PM

ಮುಂಬರುವ ಚುನಾವಣೆಗೆ ಡಾ. ಜಿ.ಪರಮೇಶ್ವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದ್ದು ಮಧು ಬಂಗಾರಪ್ಪ ಹಾಗೂ ರಾಧಾಕೃಷ್ಣ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

Karnataka Assembly Elections 2023: ವಿಧಾನ ಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷ ನೇಮಕ
ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್
Follow us on

ದೆಹಲಿ: ಮುಂಬರುವ ವಿಧಾನ ಸಭಾ ಚುನಾವಣೆಗೆ(Karnataka Assembly Elections 2023) ಪ್ರಮುಖ ರಾಜಕೀಯ ಪಕ್ಷಗಳ ತಯಾರಿ ಜೋರಾಗಿ ಸಾಗುತ್ತಿದೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾರರನ್ನು ಸೆಳೆಯಲು ಆಕಾಂಕ್ಷಿಗಳು ಕಾರ್ಯನಿರತರಾಗಿದ್ದಾರೆ. ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಿ ಮತದಾರರಿಗೆ ಗಾಳ ಹಾಕುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಮುಂಬರುವ ಚುನಾವಣೆಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಿ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ “ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ 2023” ರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನೇಮಿಸಿದೆ. ಮುಂಬರುವ ಚುನಾವಣೆಗೆ ಡಾ. ಜಿ.ಪರಮೇಶ್ವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದ್ದು, ಮಧು ಬಂಗಾರಪ್ಪ ಹಾಗೂ ರಾಧಾಕೃಷ್ಣ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.