ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್​ ಶಾಸಕರಿಗೆ ತಾರತಮ್ಯ: ಶಾಸಕಾಂಗ ಸಭೆಯಲ್ಲಿ ಹೋರಾಟಕ್ಕೆ ನಿರ್ಧಾರ

ಬಿಟ್​ಕಾಯಿನ್ ಅವ್ಯವಹಾರ ಮತ್ತು 40 ಪರ್ಸೆಂಟ್ ಕಮಿಷನ್ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿರುವ ಹಲವು ಹಗರಣಗಳ ಬಗ್ಗೆಯೂ ಸದನದಲ್ಲಿ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್​ ಶಾಸಕರಿಗೆ ತಾರತಮ್ಯ: ಶಾಸಕಾಂಗ ಸಭೆಯಲ್ಲಿ ಹೋರಾಟಕ್ಕೆ ನಿರ್ಧಾರ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 14, 2022 | 10:54 PM

ಬೆಂಗಳೂರು: ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳನ್ನು ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂಬ ಆರೋಪ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವ್ಯಕ್ತವಾಯಿತು. ಅನುದಾನ ನೀಡುವಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರವನ್ನು ಕಡೆಗಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಧೋರಣೆ ವಿರುದ್ಧ ತೀವ್ರ ಹೋರಾಟ ನಡೆಸಲು ನಿರ್ಧರಿಸಲಾಯಿತು. ಬಿಟ್​ಕಾಯಿನ್ ಅವ್ಯವಹಾರ ಮತ್ತು 40 ಪರ್ಸೆಂಟ್ ಕಮಿಷನ್ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿರುವ ಹಲವು ಹಗರಣಗಳ ಬಗ್ಗೆಯೂ ಸದನದಲ್ಲಿ ಪ್ರಸ್ತಾಪಿಸಲು, ಸರ್ಕಾರದ ಮೇಲೆ ಚಾಟಿ ಬೀಸಲು ಕಾಂಗ್ರೆಸ್ ನಿರ್ಧರಿಸಿದೆ. ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ ₹ 50 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಆದರೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನಯಾ ಪೈಸೆ ಕೊಟ್ಟಿಲ್ಲ ಎಂದು ಶಾಸಕರು ಸಭೆಯಲ್ಲಿ ಹೇಳಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದಲ್ಲಿ ಸುಳ್ಳುಗಳೇ ತುಂಬಿವೆ. ನಮ್ಮ ಸರ್ಕಾರ ಇದ್ದಾಗ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನೂ ಅದರಲ್ಲಿ ಸೇರಿಸಲಾಗಿದೆ ಎಂದರು. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಿಗುತ್ತಿಲ್ಲ. ಕೇಳಿದರೆ ಕೊವಿಡ್ ನೆಪ ಹೇಳಲಾಗುತ್ತಿದೆ. ಅರ್ಥಿಕವಾಗಿ ರಾಜ್ಯ ದಿವಾಳಿ ಆಗಿದೆ. ಹಣಕಾಸು ಪರಿಸ್ಥಿತಿ ಕೆಟ್ಟದಾಗಿದೆ. ರಾಜ್ಯದಿಂದ ಪ್ರತಿ ವರ್ಷ ಮೂರು ಲಕ್ಷ ಕೋಟಿ ತೆರಿಗೆ ಸಂಗ್ರವಾಗುತ್ತದೆ. ಆದರೆ ಕೇಂದ್ರ ಸರ್ಕಾರ ನಮಗೆ ನೀಡುವ ಪರಿಹಾರ 50-60 ಸಾವಿರ ಕೋಟಿ ಮಾತ್ರ ಎಂದು ತಿಳಿಸಿದರು.

ಕಳೆದ ನಾಲ್ಕು ವರ್ಷಗಳಲ್ಲಿ ಒಂದೇ ಒಂದು ಮನೆಯನ್ನು ಸರ್ಕಾರ ಹೊಸದಾಗಿ ಕೊಟ್ಟಿಲ್ಲ. ಪತ್ರಿಕೆಗಳಿಗೆ ನಿತ್ಯ ಜಾಹಿರಾತು‌ ನೀಡುತ್ತಿರುವ ಸರ್ಕಾರ ಅದರಲ್ಲಿಯೂ ಸುಳ್ಳುಗಳನ್ನು ಹೇಳಿದೆ. ನೀರಾವರಿಗೆ ಒಂದು ಲಕ್ಷ ಕೋಟಿ ಖರ್ಚು ಮಾಡುವುದಾಗಿ ಹೇಳಿದ್ದ ಸರ್ಕಾರ ಅದರಲ್ಲಿಯೂ ವಿಫಲವಾಗಿದೆ. ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿರುವುದನ್ನು ಹೊರತುಪಡಿಸಿದರೆ ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೂ ಹಣ ಕೊಟ್ಟಿಲ್ಲ. ಗುತ್ತಿದಾರರ ಸಂಘ ಸರ್ಕಾರದ ವಿರುದ್ಧ ಮಾಡಿರುವ ಶೇ 40ರ ಕಮಿಷನ್ ಆರೋಪ, ರಾಷ್ಟ್ರೀಯ ಶಿಕ್ಷಣ ನೀತಿ‌ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ನುಡಿದರು.

ಸಿಎಲ್​ಪಿ ಸಭೆಯಲ್ಲಿ ಹಿಜಾಬ್ ವಿವಾದದ ಬಗ್ಗೆಯೂ ಪ್ರಸ್ತಾಪವಾಯಿತು. ಕೋರ್ಟ್ ತೀರ್ಪು ನೋಡಿಕೊಂಡು ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸೋಣ ಎಂಬ ಅಭಿಪ್ರಾಯ ಕೇಳಿ ಬಂತು. ಈಶ್ವರಪ್ಪ ಅವರ ರಾಷ್ಟ್ರಧ್ವಜ ಹೇಳಿಕೆ ಅತ್ಯಂತ ಪ್ರಮುಖವಾದುದು. ಅದನ್ನು ಪ್ರಸ್ತಾಪಿಸಬೇಕು ಎಂದು ಹಿರಿಯ ನಾಯಕ ಯು.ಟಿ.ಖಾದರ್ ಹೇಳಿದರು. ಈ ಬಗ್ಗೆ ರಣತಂತ್ರ ರೂಪಿಸೋಣ ಎಂದು ಹಿರಿಯ ನಾಯಕರು ಸಲಹೆ ಮಾಡಿದರು. ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯದ ಬಗ್ಗೆಯೂ ಸದನದಲ್ಲಿ ಪ್ರಸ್ತಾಪಿಸಲು ನಿರ್ಧರಿಸಲಾಯಿತು.

ಕಾಂಗ್ರೆಸ್ ಶಾಸಕಾಂಗ ಪಕ್ಷದ‌ ನಿಲುವಿಗೆ ಕಾಂಗ್ರೆಸ್​ನ ಒಂದು ವಲಯದಲ್ಲಿ ಅಸಮಾಧಾನವೂ ವ್ಯಕ್ತವಾಯಿತು. ಕೈ ಶಾಸಕರು ಇನ್ನೂ ಅನುದಾನ ಮತ್ತು ಕಾಮಗಾರಿ ವಿಚಾರವನ್ನಷ್ಟೇ ಮಾತನಾಡುತ್ತಿದ್ದಾರೆ. ನಾವೇ ಅಧಿಕಾರದಲ್ಲಿದ್ದೇವೆ, ಜನರಿಗೆ ನಾವೇ ಉತ್ತರ ನೀಡಬೇಕು ಎಂಬಂತೆ ನಮ್ಮ ಶಾಸಕರು ವರ್ತಿಸುತ್ತಿದ್ದಾರೆ. ಅತ್ತ ಬಿಜೆಪಿ ಭಾವನಾತ್ಮಕವಾಗಿ ರಾಜಕೀಯ ಮಾಡುತ್ತಿದೆ. ಅದನ್ನು ಸಮರ್ಥವಾಗಿ ಎದುರಿಸಲು ಪಕ್ಷ ತಯಾರಿಯನ್ನೇ ಮಾಡುತ್ತಿಲ್ಲ. ಕೆಲ ವಿಚಾರಗಳಲ್ಲಿ ನಾವು ಬಿಜೆಪಿಗೆ ಸರಿಯಾದ ರೀತಿಯಲ್ಲಿ ಕೌಂಟರ್ ಮಾಡಬೇಕಿದೆ. ಸರಿಯಾದ ಪದಗಳನ್ನು ಬಳಸಿ ಬಿಜೆಪಿಗೆ ಹೊಡೆತ ನೀಡಬೇಕಿದೆ. ನಾವಿನ್ನೂ ಹಳೇ ಕಾಲದ ಚುನಾವಣ ತಂತ್ರಕ್ಕೆ ಮೊರೆ ಹೊಗುತ್ತಿದ್ದೇವೆ. ಬದಲಾದ ರಾಜಕೀಯ ಪರಿಸ್ಥಿತಿ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಕೇವಲ ಅನುಕೂಲ ಸಿಂಧು ರಾಜಕಾರಣ ಮಾಡುತ್ತಿದ್ದಾರೆ ಎಂದು ಕೆಲ ಶಾಸಕರು ಖಾಸಗಿಯಾಗಿ ಬೇಸರ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ರಾಮಲಿಂಗ ರೆಡ್ಡಿ, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಖಾದರ್, ಹಿರಿಯ ಮುಖಂಡರಾದ ದೇಶಪಾಂಡೆ, ಎಚ್.ಕೆ. ಪಾಟೀಲ್, ಎಐಸಿಸಿಯ ಚುನಾವಣಾ ವೀಕ್ಷಕರಾದ ಸುದರ್ಶನ ನಾಚಿಯಪ್ಪನ್, ಅಬ್ರಹಾಂ ಅವರು ಸಭೆಯಲ್ಲಿ ಹಾಜರಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರಗಳು ರಿಮೋಟ್ ಕಂಟ್ರೋಲ್ ಮೂಲಕ ನಡೆಯುತ್ತಿವೆ: ಪಂಜಾಬ್​​ನಲ್ಲಿ ಮೋದಿ ವಾಗ್ದಾಳಿ

ಇದನ್ನೂ ಓದಿ: ಕಾಂಗ್ರೆಸ್​​ಗೆ ಅದರ ದಾರಿ, ನಾವು ನಮ್ಮ ದಾರಿಯಲ್ಲಿ ಹೋಗುತ್ತೇವೆ: ಮಮತಾ ಬ್ಯಾನರ್ಜಿ

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ