ಅಮಿತ್ ಶಾ ಬಂದುಹೋದ ಬಳಿಕ ಮೋಡ ಕವಿದ ವಾತಾವರಣ: 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವುದು ಸನ್ನಿಹಿತ, ಕಾಂಗ್ರೆಸ್ ವ್ಯಂಗ್ಯ

ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. 40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ. ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.

ಅಮಿತ್ ಶಾ ಬಂದುಹೋದ ಬಳಿಕ ಮೋಡ ಕವಿದ ವಾತಾವರಣ: 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವುದು ಸನ್ನಿಹಿತ, ಕಾಂಗ್ರೆಸ್ ವ್ಯಂಗ್ಯ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Aug 09, 2022 | 6:19 PM

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಕಾಲೆಳೆಯುವ ಪ್ರಯತ್ನ ಮಾಡಿದೆ. ಅಮಿತ್ ಶಾ(Amit Shah) ಬಂದುಹೋದ ಬಳಿಕ ಮೋಡ ಕವಿದ ವಾತಾವರಣ. 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವುದು ಸನ್ನಿಹಿತವಾಗಿದೆ. ಬೊಮ್ಮಾಯಿ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ ಎಂದು ಟ್ವೀಟ್ ಮೂಲಕ ಸಿಎಂ ಬೊಮ್ಮಾಯಿ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದೆ.

ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ ಸಿಎಂ ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ ಎಂದು ಬಿಜೆಪಿಗೆ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನಿಸಿದೆ.

ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ. ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ. ಸಿಎಂ ಬೊಮ್ಮಾಯಿ ಅವರೇ, ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ ಸಿಎಂ ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ?

ಬಿಜೆಪಿ ಸರ್ಕಾರದ್ದು 40% ಕಮಿಷನ್ ದಂಧೆಯಾದರೆ, ಬಿಜೆಪಿ ಕಾರ್ಯಕರ್ತರದ್ದು ಡ್ರಗ್ ಪೆಡ್ಲಿಂಗ್, ನಕಲಿ ನೋಟಿನ ದಂಧೆ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಬಿಜೆಪಿ ಪಕ್ಷದ ಹೈಕಮಾಂಡ್ ಸಂಪಾದನೆಗೆ ಅದ್ಬುತ ದಾರಿ ಕಂಡುಕೊಂಡಿದೆ! ಬೊಮ್ಮಾಯಿ ಅವರೇ, ನಿಮ್ಮ ಕಂತು ತೀರಿತೇ? ಅಥವಾ 40% ಕಮಿಷನ್‌ನಲ್ಲಿ ಹೈಕಮಾಂಡ್ ಪಾಲು ತಲುಪಿಸಲು ವಿಫಲರಾದ್ರಾ? ಮೊದಲ ಸಿಎಂ – ₹2,500 ಕೋಟಿ, ಎರಡನೇ ಸಿಎಂ – ₹2,500 ಕೋಟಿ, ಮೂರನೇ ಸಿಎಂ – ₹2,500 ಕೋಟಿ, ಒಟ್ಟು ಸಂಪಾದನೆ – ₹7,500 ಕೋಟಿ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:55 pm, Tue, 9 August 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ