AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ವೈ. ವಿಜಯೇಂದ್ರ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” -ಕಾಂಗ್ರೆಸ್ ಟೀಕೆ

ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕರಾಗಿ ಆರ್​.ಅಶೋಕ್​ರನ್ನು ಆಯ್ಕೆ ಮಾಡಿರೋದು ಅವರದೇ ಪಕ್ಷದಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ. ಮತ್ತೊಂದೆಡೆ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸುತ್ತಿದೆ. ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! "ಜಾರಿದವರ ಯತ್ನ ಬೆಲ್ಲ" ಆಗ್ಲಿಲ್ಲವಲ್ಲಪ್ಪ..! ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಬಿ.ವೈ. ವಿಜಯೇಂದ್ರ ಬಳಸಿ ಬೀಸಾಡಲು ತಂದಿರುವ ಹೊಸ ಹರಕೆಯ ಕುರಿ'' -ಕಾಂಗ್ರೆಸ್ ಟೀಕೆ
ಬಿ.ವೈ. ವಿಜಯೇಂದ್ರ
ಪ್ರಸನ್ನ ಗಾಂವ್ಕರ್​
| Edited By: ಆಯೇಷಾ ಬಾನು|

Updated on: Nov 18, 2023 | 2:20 PM

Share

ಬೆಂಗಳೂರು, ನ.18: ಬಿಜೆಪಿ (BJP) ಪಾಳೆಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿವೆ. ಲೋಕಸಭಾ ಚುನಾವಣೆಗೆ ತಯಾರಿ ಶುರುವಾಗಿದೆ. ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮಗೊಂಡಿದೆ. ಆದರೆ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ (BY Vijayendra) ಹಾಗೂ ವಿಪಕ್ಷ ನಾಯಕರಾಗಿ ಆರ್​.ಅಶೋಕ್​ರನ್ನು(R Ashok) ಆಯ್ಕೆ ಮಾಡಿರೋದು ಅವರದೇ ಪಕ್ಷದಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ. ಮತ್ತೊಂದೆಡೆ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸುತ್ತಿದೆ. ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! “ಜಾರಿದವರ ಯತ್ನ ಬೆಲ್ಲ” ಆಗ್ಲಿಲ್ಲವಲ್ಲಪ್ಪ..! ಎಂದು ಕಾಂಗ್ರೆಸ್ (Congress) ಟೀಕೆ ಮಾಡಿದೆ. ಜೊತೆಗೆ ಬಿ.ವೈ. ವಿಜಯೇಂದ್ರ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಎಂದು ವಾಗ್ದಾಳಿ ನಡೆಸಿದೆ.

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಅಂತ ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ!!

ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! “ಜಾರಿದವರ ಯತ್ನ ಬೆಲ್ಲ” ಆಗ್ಲಿಲ್ಲವಲ್ಲಪ್ಪ..! ಎಂದು ಕಾಂಗ್ರೆಸ್ ಎಕ್ಸ್​ (ಟ್ವಿಟರ್)ನಲ್ಲಿ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟದ ನಡುವೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್

ಇನ್ನು ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ! ◆ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು. ◆ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು. ◆ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು. ◆ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು. ◆ಈಗ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ. ಇದೇ ಮಾದರಿಯಲ್ಲಿ ವಿಜಯೇಂದ್ರ ಕೂಡ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಅಷ್ಟೇ! ಎಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More