ಹೆಚ್ಡಿಕೆ ಗೆ ಎಲ್ಲೆಲ್ಲಿ ಮನೆಗಳಿವೆ, ಎಲ್ಲಿ ಏನಾಗ್ತಿದೆ ಎಂದು ಗೊತ್ತಾಗಲ್ಲ ಪಾಪ; ಟಾಂಗ್ ನೀಡಿದ
ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರೇ, ಕರೆಂಟ್ ಕಳ್ಳತನವನ್ನು ಕ್ಷುಲ್ಲುಕ ವಿಚಾರ ಎಂದು ತಿಪ್ಪೆ ಸಾರಿಸುತ್ತಿರುವುದಕ್ಕೆ ನಾಚಿಕೆಯಾಗಬೇಕು. ಹೀಗೆಯೇ ಇನ್ನೆಷ್ಟು ರಾಜ್ಯದ ಲೂಟಿಯನ್ನು "ಕ್ಷುಲ್ಲುಕ ವಿಚಾರ"ವೆಂದು ಸಮರ್ಥಿಸಿಕೊಳ್ಳುವಿರೋ ಏನೋ! ತಮ್ಮ ತಪ್ಪನ್ನು ಕೆಲಸದವರ ಮೇಲೆ ಹಾಕಿ ತಪ್ಪಿಸಿಕೊಳ್ಳುವ ಕುಟೀಲ ಪ್ರಯತ್ನ ತಮ್ಮದು, ಹಿಟ್ ಅಂಡ್ ರನ್ ನಿಮ್ಮ ಕಾಯಕ ಆಗಿದ್ದು, ನಿಮ್ಮ ಪಲಾಯನವಾದದ ಭಾಗವಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬೆಂಗಳೂರು, ನ.14: ದೀಪಾವಳಿ ಹಿನ್ನಲೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ(HD Kumaraswamy)ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಪಡೆದ ಆರೋಪ ‘ಕುಮಾರಸ್ವಾಮಿಯವರೇ ಬಿಡದಿ ಮನೆ, ಜೆ ಪಿ ನಗರದ ಮನೆ ಆ ಮನೆ, ಈ ಮನೆ, ಎಲ್ಲೆಲ್ಲಿ ಮನೆಗಳಿವೆ. ಯಾವ್ಯಾವ ಮನೆಯಲ್ಲಿ ಏನೇನಾಗುತ್ತಿದೆ ಎಂಬುದು ನಿಮಗೇ ತಿಳಿದಿರುವುದಿಲ್ಲ ಪಾಪ ಎಂದು ಟ್ವಿಟ್ ಮಾಡುವ ಮೂಲಕ ಮತ್ತೆ ಕಾಂಗ್ರೆಸ್, ಹೆಚ್‌ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದೆ.
ಹೌದು, ಇದಕ್ಕೂ ಮುಂಚೆ ಕಾಂಗ್ರೆಸ್ ಟ್ವೀಟ್ಗೆ ಪ್ರತಿಕ್ರಿಯಿಸಿದ್ದ ಹೆಚ್ಡಿಕೆ ‘ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಕ್ಷುಲ್ಲಕ ವಿಚಾರವನ್ನು ಕಾಂಗ್ರೆಸ್ ದೊಡ್ಡದು ಮಾಡಿ, ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ ಎಂದಿದ್ದರು.
ಹೌದೌದು ಕುಮಾರಸ್ವಾಮಿಗಳೇ, ಬಿಡದಿ ಮನೆ, ಜೆ ಪಿ ನಗರದ ಮನೆ ಆ ಮನೆ, ಈ ಮನೆ… ಎಲ್ಲೆಲ್ಲಿ ಮನೆಗಳಿವೆ, ಯಾವ್ಯಾವ ಮನೆಯಲ್ಲಿ ಏನೇನಾಗುತ್ತಿದೆ ಎಂಬುದು ನಿಮಗೇ ತಿಳಿದಿರುವುದಿಲ್ಲ ಪಾಪ!@hd_kumaraswamy ಅವರೇ, ರಾಜ್ಯದ ಮುಖ್ಯಮಂತ್ರಿಯಾಗಿದ್ದ ತಾವು ಕರೆಂಟ್ ಕಳ್ಳತನವನ್ನು ಕ್ಷುಲ್ಲುಕ ವಿಚಾರ ಎಂದು ತಿಪ್ಪೆ ಸಾರಿಸುತ್ತಿರುವುದಕ್ಕೆ… https://t.co/KNe85S1opM
— Karnataka Congress (@INCKarnataka) November 14, 2023
ಇದನ್ನೂ ಓದಿ:ಕುಮಾರಸ್ವಾಮಿ ನಿವಾಸದ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ;ಎಷ್ಟು ದಂಡ ಬೀಳಬಹುದು?
ಈ ಹೇಳಿಕೆಗೆ ಕಾಂಗ್ರೆಸ್ ‘ರಾಜ್ಯದ ಮುಖ್ಯಮಂತ್ರಿಯಾಗಿದ್ದ ತಾವು, ಕರೆಂಟ್ ಕಳ್ಳತನವನ್ನು ಕ್ಷುಲ್ಲುಕ ವಿಚಾರ ಎಂದು ತಿಪ್ಪೆ ಸಾರಿಸುತ್ತಿರುವುದಕ್ಕೆ ನಾಚಿಕೆಯಾಗಬೇಕು. ಹೀಗೆಯೇ ಇನ್ನೆಷ್ಟು ರಾಜ್ಯದ ಲೂಟಿಯನ್ನು “ಕ್ಷುಲ್ಲುಕ ವಿಚಾರ”ವೆಂದು ಸಮರ್ಥಿಸಿಕೊಳ್ಳುವಿರೋ ಏನೋ! ತಮ್ಮ ತಪ್ಪನ್ನು ಕೆಲಸದವರ ಮೇಲೆ ಹಾಕಿ ತಪ್ಪಿಸಿಕೊಳ್ಳುವ ಕುಟೀಲ ಪ್ರಯತ್ನ ತಮ್ಮದು, ಹಿಟ್ ಅಂಡ್ ರನ್ ನಿಮ್ಮ ಕಾಯಕ ಆಗಿದ್ದು, ನಿಮ್ಮ ಪಲಾಯನವಾದದ ಭಾಗವಲ್ಲವೇ ಎಂದು ಪ್ರಶ್ನಿಸಿದೆ. ಜೊತೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿಯ 1.9 ಲಕ್ಷದ ಪೀಠೋಪಕರಣಗಳಿಗೆ 1.9 ಕೋಟಿ ಎಂದು ತಾವು ಸುಳ್ಳು ಆರೋಪ ಮಾಡಿದಾಗ ತಮ್ಮದು ಕ್ಷುಲ್ಲುಕ ಬುದ್ಧಿಯಾಗಿತ್ತೇ?, ಗ್ಯಾರಂಟಿಗಳ ಬಗ್ಗೆ ರಾಜ್ಯದ ಜನತೆಗೆ ಸುಳ್ಳು ಸಂದೇಶ ಕೊಡುತ್ತಿದ್ದೀರಲ್ಲ, ಅದು ನಿಮ್ಮ ಕ್ಷುಲ್ಲುಕ ಬುದ್ಧಿಯೋ, ಪ್ರಚಾರ ಗಿಟ್ಟಿಸಿಕೊಳ್ಳುವ ಹಪಹಪಿಯೋ?, ಅಂದಹಾಗೆ ತಾವು ಅಕ್ರಮ ಸಂಪರ್ಕ ಪಡೆದಾಗ ಕರ್ನಾಟಕ ಕತ್ತಲೆಯಲ್ಲಿ ಇರಲಿಲ್ಲ ಅಲ್ಲವೇ, ತಮ್ಮ ದೀಪಾಲಂಕಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ ಅಲ್ಲವೇ?, ದೀಪಾಲಂಕಾರದ ಅದ್ದೂರಿತನ ತೋರುವಾಗ ರಾಜ್ಯದ ಬರ ನೆನಪಾಗಲಿಲ್ಲವೇ ಎನ್ನುವ ಮೂಲಕ ಟಾಂಗ್ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ