ಹೆಚ್​ಡಿಕೆ ಗೆ ಎಲ್ಲೆಲ್ಲಿ ಮನೆಗಳಿವೆ, ಎಲ್ಲಿ ಏನಾಗ್ತಿದೆ ಎಂದು ಗೊತ್ತಾಗಲ್ಲ ಪಾಪ; ಟಾಂಗ್​ ನೀಡಿದ ​

ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರೇ, ಕರೆಂಟ್ ಕಳ್ಳತನವನ್ನು ಕ್ಷುಲ್ಲುಕ ವಿಚಾರ ಎಂದು ತಿಪ್ಪೆ ಸಾರಿಸುತ್ತಿರುವುದಕ್ಕೆ ನಾಚಿಕೆಯಾಗಬೇಕು. ಹೀಗೆಯೇ ಇನ್ನೆಷ್ಟು ರಾಜ್ಯದ ಲೂಟಿಯನ್ನು "ಕ್ಷುಲ್ಲುಕ ವಿಚಾರ"ವೆಂದು ಸಮರ್ಥಿಸಿಕೊಳ್ಳುವಿರೋ ಏನೋ! ತಮ್ಮ ತಪ್ಪನ್ನು ಕೆಲಸದವರ ಮೇಲೆ ಹಾಕಿ ತಪ್ಪಿಸಿಕೊಳ್ಳುವ ಕುಟೀಲ ಪ್ರಯತ್ನ ತಮ್ಮದು, ಹಿಟ್ ಅಂಡ್ ರನ್ ನಿಮ್ಮ ಕಾಯಕ ಆಗಿದ್ದು, ನಿಮ್ಮ ಪಲಾಯನವಾದದ ಭಾಗವಲ್ಲವೇ ಎಂದು ಕಾಂಗ್ರೆಸ್​ ಪ್ರಶ್ನಿಸಿದೆ.

ಹೆಚ್​ಡಿಕೆ ಗೆ ಎಲ್ಲೆಲ್ಲಿ ಮನೆಗಳಿವೆ, ಎಲ್ಲಿ ಏನಾಗ್ತಿದೆ ಎಂದು ಗೊತ್ತಾಗಲ್ಲ ಪಾಪ; ಟಾಂಗ್​ ನೀಡಿದ ​
ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿಗೆ ಟಾಂಗ್​​ ಕೊಟ್ಟ ಕಾಂಗ್ರೆಸ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 14, 2023 | 3:31 PM

ಬೆಂಗಳೂರು, ನ.14: ದೀಪಾವಳಿ ಹಿನ್ನಲೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿಕೆ(HD Kumaraswamy)ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಪಡೆದ ಆರೋಪ ‘ಕುಮಾರಸ್ವಾಮಿಯವರೇ ಬಿಡದಿ ಮನೆ, ಜೆ ಪಿ ನಗರದ ಮನೆ ಆ ಮನೆ, ಈ ಮನೆ, ಎಲ್ಲೆಲ್ಲಿ ಮನೆಗಳಿವೆ. ಯಾವ್ಯಾವ ಮನೆಯಲ್ಲಿ ಏನೇನಾಗುತ್ತಿದೆ ಎಂಬುದು ನಿಮಗೇ ತಿಳಿದಿರುವುದಿಲ್ಲ ಪಾಪ ಎಂದು ಟ್ವಿಟ್​ ಮಾಡುವ ಮೂಲಕ ಮತ್ತೆ ಕಾಂಗ್ರೆಸ್, ಹೆಚ್‌ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದೆ.

ಹೌದು, ಇದಕ್ಕೂ ಮುಂಚೆ ಕಾಂಗ್ರೆಸ್​ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದ ಹೆಚ್​ಡಿಕೆ ‘ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಕ್ಷುಲ್ಲಕ ವಿಚಾರವನ್ನು ಕಾಂಗ್ರೆಸ್​ ದೊಡ್ಡದು ಮಾಡಿ, ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ ಎಂದಿದ್ದರು.

ಇದನ್ನೂ ಓದಿ:ಕುಮಾರಸ್ವಾಮಿ ನಿವಾಸದ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್​ ಸಂಪರ್ಕ;ಎಷ್ಟು ದಂಡ ಬೀಳಬಹುದು?

ಈ ಹೇಳಿಕೆಗೆ ಕಾಂಗ್ರೆಸ್​ ‘ರಾಜ್ಯದ ಮುಖ್ಯಮಂತ್ರಿಯಾಗಿದ್ದ ತಾವು, ಕರೆಂಟ್ ಕಳ್ಳತನವನ್ನು ಕ್ಷುಲ್ಲುಕ ವಿಚಾರ ಎಂದು ತಿಪ್ಪೆ ಸಾರಿಸುತ್ತಿರುವುದಕ್ಕೆ ನಾಚಿಕೆಯಾಗಬೇಕು. ಹೀಗೆಯೇ ಇನ್ನೆಷ್ಟು ರಾಜ್ಯದ ಲೂಟಿಯನ್ನು “ಕ್ಷುಲ್ಲುಕ ವಿಚಾರ”ವೆಂದು ಸಮರ್ಥಿಸಿಕೊಳ್ಳುವಿರೋ ಏನೋ! ತಮ್ಮ ತಪ್ಪನ್ನು ಕೆಲಸದವರ ಮೇಲೆ ಹಾಕಿ ತಪ್ಪಿಸಿಕೊಳ್ಳುವ ಕುಟೀಲ ಪ್ರಯತ್ನ ತಮ್ಮದು, ಹಿಟ್ ಅಂಡ್ ರನ್ ನಿಮ್ಮ ಕಾಯಕ ಆಗಿದ್ದು, ನಿಮ್ಮ ಪಲಾಯನವಾದದ ಭಾಗವಲ್ಲವೇ ಎಂದು ಪ್ರಶ್ನಿಸಿದೆ. ಜೊತೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿಯ 1.9 ಲಕ್ಷದ ಪೀಠೋಪಕರಣಗಳಿಗೆ 1.9 ಕೋಟಿ ಎಂದು ತಾವು ಸುಳ್ಳು ಆರೋಪ ಮಾಡಿದಾಗ ತಮ್ಮದು ಕ್ಷುಲ್ಲುಕ ಬುದ್ಧಿಯಾಗಿತ್ತೇ?, ಗ್ಯಾರಂಟಿಗಳ ಬಗ್ಗೆ ರಾಜ್ಯದ ಜನತೆಗೆ ಸುಳ್ಳು ಸಂದೇಶ ಕೊಡುತ್ತಿದ್ದೀರಲ್ಲ, ಅದು ನಿಮ್ಮ ಕ್ಷುಲ್ಲುಕ ಬುದ್ಧಿಯೋ, ಪ್ರಚಾರ ಗಿಟ್ಟಿಸಿಕೊಳ್ಳುವ ಹಪಹಪಿಯೋ?, ಅಂದಹಾಗೆ ತಾವು ಅಕ್ರಮ ಸಂಪರ್ಕ ಪಡೆದಾಗ ಕರ್ನಾಟಕ ಕತ್ತಲೆಯಲ್ಲಿ ಇರಲಿಲ್ಲ ಅಲ್ಲವೇ, ತಮ್ಮ ದೀಪಾಲಂಕಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ ಅಲ್ಲವೇ?, ದೀಪಾಲಂಕಾರದ ಅದ್ದೂರಿತನ ತೋರುವಾಗ ರಾಜ್ಯದ ಬರ ನೆನಪಾಗಲಿಲ್ಲವೇ ಎನ್ನುವ ಮೂಲಕ ಟಾಂಗ್​ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us